)
ಬೆಂಗಳೂರು : ವಿಶ್ವವಿಖ್ಯಾತ ಮೈಸೂರು ದಸರಾ ಹಿನ್ನೆಲೆ ಶಿಕ್ಷಣ ಇಲಾಖೆ ನಾಳೆಯಿಂದ 18 ದಿನ ಸರ್ಕಾರಿ ಶಾಲೆಗಳಿಗೆ ರಜೆ ಘೋಷಿಸಿದೆ. ಸೆ.20 ರಿಂದ ಅಕ್ಟೋಬರ್ 7ರವರೆಗೆ ಒಟ್ಟು 18 ದಿನ ರಜೆ ಘೋಷಿಸಿ ಕರ್ನಾಟಕ ಶಿಕ್ಷಣ ಇಲಾಖೆ ಆದೇಶಿಸಿದೆ.
ಈ ರಜೆಯಲ್ಲಿ ಕೆಲವು ಬದಲಾವಣೆಗಳಿದ್ದು, ಅಕ್ಟೋಬರ್ 2 ಗಾಂಧಿ ಜಯಂತಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿಗೆ ಕಡ್ಡಾಯವಾಗಿ ಹಾಜರಾಗುವಂತೆ ಸೂಚಿಸಲಾಗಿದೆ. ಶೈಕ್ಷಣಿಕ ವೇಳಾಪಟ್ಟಿಯ ಪ್ರಕಾರ 18 ದಿನ ರಜೆ ನೀಡಲಾಗಿದ್ದು, ಮಕ್ಕಳಲ್ಲಿ ಹಬ್ಬದ ಸಂಭ್ರಮ ಕಳೆಗಟ್ಟಿದೆ.
ಸೆಪ್ಟೆಂಬರ್ 22 ರಿಂದ ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವಕ್ಕೆ ಚಾಲನೆ ಸಿಗಲಿದೆ. ರಾಜ ಪರಂಪರೆ, ಗತಕಾಲದ ವೈಭವವನ್ನು ಕಣ್ತುಂಬಿಕೊಳ್ಳಲು ಇದು ಉತ್ತಮ ಸಮಯ. ಬರೊಬ್ಬರಿ 11 ದಿನಗಳ ಕಾಲ ದಸರಾ ನಡೆಯಲಿದೆ. ಈ ಬಾರಿಯ ದಸರಾಗೆ ಅಂತರರಾಷ್ಟ್ರೀಯ ಪ್ರತಿಷ್ಠಿತ ಬೂಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಉದ್ಘಾಟಿಸಲಿದ್ದಾರೆ.
ಸರ್ಕಾರವು 11 ದಿನ ದಸರಾ ಮಹೋತ್ಸವವನ್ನು ಆಚರಣೆ ಮಾಡುತ್ತಿದೆ. ಅಕ್ಟೋಬರ್ 2ರಂದು ವಿಶ್ವವಿಖ್ಯಾತ ಜಂಬೂ ಸವಾರಿ ನಡೆಯಲಿದ್ದು, ಈ ಅದ್ಭುತವನ್ನು ಕಣ್ತುಂಬಿಕೊಳ್ಳಲು ನಾಡಿನ ಜನತೆ ಕಾತುರರಾಗಿದ್ದಾರೆ. ಈ ಬಾರಿ ಅಂಬಾರಿಯನ್ನು ಅಭಿಮನ್ಯು ಆನೆ ಹೊರಲಿದೆ.