Karnataka 2nd PUC Exam 2023: ವಿದ್ಯಾರ್ಥಿ ಜೀವನದ ಮುಖ್ಯ ಘಟ್ಟವಾದ ದ್ವಿತೀಯ ಪಿಯುಸಿ-2023 ವಾರ್ಷಿಕ ಪರೀಕ್ಷೆ ಇಂದಿನಿಂದ ರಾಜ್ಯಾದ್ಯಂತ ಆರಂಭವಾಗಲಿದೆ. ಪರೀಕ್ಷೆ ನಡೆಯಲಿರುವ ರಾಜ್ಯದ 1109 ಪರೀಕ್ಷಾ ಕ್ಷೆಂದ್ರಗಳಲ್ಲಿ ಸಿದ್ಧತೆ ಮಾಡಿಕೊಂಡಿದ್ದು, 7,26,224 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಇದರಲ್ಲಿ ಹೊಸದಾಗಿ 6,29,791 ಲಕ್ಷ ವಿದ್ಯಾರ್ಥಿಗಳು ನೊಂದಾಯಿಸಿಕೊಂಡಿದ್ದು, 3,25,053 ವಿದ್ಯಾರ್ಥಿನಿಯರು, 3,47,038 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಅಲ್ಲದೆ, 25,847 ಖಾಸಗಿ ಮತ್ತು 70,586 ಪುನರಾವರ್ತಿತ ವಿದ್ಯಾರ್ಥಿಗಳು ಪರೀಕ್ಷೆಗಾಗಿ ನೊಂದಾಯಿಸಿಕೊಂಡಿದ್ದಾರೆ.  ರಾಜ್ಯದಲ್ಲಿ 1109 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದ್ದು, ಪರೀಕ್ಷೆಗೆ ಎಲ್ಲ ರೀತಿಯ ಸಿದ್ಧತೆ ಮಾಡಿಕೊಳ್ಳಲಾಗಿದೆ. 


COMMERCIAL BREAK
SCROLL TO CONTINUE READING

ಇಂದಿನಿಂದ ಆರಂಭವಾಗಲಿರುವ ದ್ವಿತೀಯ ಪಿಯುಸಿ ಪರೀಕ್ಷೆ ಮಾ.29ರ ವರೆಗೂ ನಡೆಯಲಿವೆ. ಉತ್ತರ ಪತ್ರಿಕೆಗಳ ಮೌಲ್ಯಮಾಪನಕ್ಕೆ 65 ಕೇಂದ್ರಗಳನ್ನು ತೆರೆಯಲಾಗುತ್ತದೆ. ಪರೀಕ್ಷೆಗೆ ಎಲ್ಲಾ ಸಿದ್ಧತೆ ಮಾಡಿಕೊಂಡಿದ್ದು, ಪರೀಕ್ಷಾ ಕೇಂದ್ರಗಳಲ್ಲಿ ಸಿಸಿ ಕ್ಯಾಮೆರಾ ಕಣ್ಗಾವಲು ಜತೆಗೆ ಪೊಲೀಸ್ ಬಂದೋಬಸ್ತ್ ಗೂ ಕ್ರಮ ಕೈಗೊಳ್ಳಲಾಗಿದೆ. ಕುಡಿಯುವ ನೀರು ಸೇರಿದಂತೆ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. 


ಇದನ್ನೂ ಓದಿ- ಎರಡನೇ ಎಸಿಬಿಯಾಯ್ತ ಲೋಕಾಯುಕ್ತ : ನಾಳೆಯಾದ್ರೂ ವಿಚಾರಣೆಗೆ ಹಾಜರಾಗ್ತರಾ ಮಾಡಾಳ್..?


ಪರೀಕ್ಷಾ ಅಕ್ರಮಗಳನ್ನು ತಡೆಯುವ ನಿಟ್ಟಿನಲ್ಲಿ ಪರೀಕ್ಷಾ ಕೇಂದ್ರದ ಸುತ್ತಲಿನ ಜೆರಾಕ್ಸ್ ಕೇಂದ್ರಗಳನ್ನು ಬಂದ್ ಮಾಡಲಾಗುತ್ತದೆ. ಸೈಬರ್ ಸೆಂಟರ್, ಟ್ಯೂಷನ್ ಕೇಂದ್ರಗಳು, ಗೇಮ್ಸ್ ಕೇಂದ್ರಗಳ ಮೇಲೂ ವಿಶೇಷ ನಿಗಾ ಇಡಲಾಗುತ್ತದೆ. ಈ ಹಿಂದೆ ಪರೀಕ್ಷಾ ಅಕ್ರಮಗಳಲ್ಲಿ ಭಾಗಿಯಾಗಿದ್ದವರನ್ನು ವಶಕ್ಕೆ ಪಡೆಯುವುದು ಸೇರಿದಂತೆ ಅಗತ್ಯ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುತ್ತದೆ. 


ಇನ್ನು ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಮೊಬೈಲ್ ಫೋನ್, ಸ್ಮಾರ್ಟ್ ವಾರ್ಚ್, ಹಿಯರ್ ಫೋನ್ ಸೇರಿದಂತೆ ಎಲ್ಲ ರೀತಿಯ ಎಲೆಕ್ಟ್ರಾನಿಕ್ ಸಾಧನಗಳನ್ನು ಪರೀಕ್ಷಾ ಕೇಂದ್ರಕ್ಕೆ ತರುವುದನ್ನು ನಿಷೇಧಿಸಲಾಗಿದೆ. ವಿದ್ಯಾರ್ಥಿಗಳು ಸಮಯ ನೋಡಿಕೊಳ್ಳಲು ಪ್ರತಿ ಕೊಠಡಿಯಲ್ಲಿ ಗೋಡೆ ಗಡಿಯಾರದ ವ್ಯವಸ್ಥೆ ಮಾಡಲಾಗಿದೆ. 


ಇದನ್ನೂ ಓದಿ- ದೇಶದ ಒಳಿತಿಗಾಗಿ ಧ್ಯಾನ ಮಗ್ನರಾದ ಅರವಿಂದ್‌ ಕೇಜ್ರಿವಾಲ್‌ ..!


ಪ್ರಶ್ನೆ ಮತ್ತು ಉತ್ತರ ಪತ್ರಿಕೆಗಳ ಸಾಗಣೆ ಮತ್ತು ಸಂಗ್ರಹಣೆ, ಮೌಲ್ಯಮಾಪನ ಕೇಂದ್ರಗಳಿಗೆ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಮೌಲ್ಯಮಾಪನ ಕೇಂದ್ರಗಳಿಗೆ ಸಿಸಿ ಕ್ಯಾಮೆರಾ ನಿಗಾ ವಹಿಸಲಾಗುತ್ತದೆ. ಪರೀಕ್ಷಾ ಕರ್ತವ್ಯದಲ್ಲಿ ನಿರತರಾಗುವ ಅಧಿಕಾರಿ ಮತ್ತು ಸಿಬ್ಬಂದಿಗೆ ಮೊಬೈಲ್ ಫೋನ್ ಬಳಕೆ ನಿಷೇಧಿಸಲಾಗಿದೆ. ಈ ಬಾರಿ ಪ್ರಶ್ನೆಪತ್ರಿಕೆಯ ಸ್ವರೂಪದಲ್ಲಿ ಬದಲಾವಣೆ ಮಾಡಲಾಗಿದ್ದು, ಒಂದು ಅಂಕದ 20 ಪ್ರಶ್ನೆಗಳು ಇರುತ್ತವೆ. ಹೀಗಾಗಿ ವಿದ್ಯಾರ್ಥಿಗಳು ಯಾವುದೇ ಅತಂಕ ಪಡದೆ ಧೈರ್ಯದಿಂದ ಪರೀಕ್ಷೆ ಬರೆಯುವಂತೆ ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿ ವಿದ್ಯಾರ್ಥಿಗಳಿಗೆ ಸಲಹೆ ನೀಡಿದೆ.


ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ಸೇವೆ:
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ- ಬಿಎಂಟಿಸಿ ವಿದ್ಯಾರ್ಥಿಗಳನ್ನು ಕರೆದೊಯ್ಯಲು ಉಚಿತ ಬಸ್ ಸೇವೆಯನ್ನು ನೀಡುವುದಾಗಿ ಘೋಷಿಸಿದೆ. ವಿದ್ಯಾರ್ಥಿಗಳು ತಮ್ಮ ಮನೆಗಳಿಂದ ಆಯಾ ಕಾಲೇಜುಗಳಿಗೆ ಪ್ರಯಾಣಿಸಲು ಬಿಎಂಟಿಸಿ ಬಸ್​​ಗಳನ್ನು ಹತ್ತಬಹುದು. ಜೊತೆಗೆ ಬಿಎಂಟಿಸಿ ಉಚಿತ ಮತ್ತು ರಿಯಾಯಿತಿ ಪಾಸ್‌ಗಳನ್ನು ನೀಡಲಿದೆ. ವಿದ್ಯಾರ್ಥಿಗಳು ತಮ್ಮ ಪಿಯುಸಿ ಹಾಲ್ ಟಿಕೆಟ್‌ಗಳನ್ನು ತೋರಿಸುವ ಮೂಲಕ ಈ ಉಚಿತ ಪಾಸ್‌ಗಳನ್ನು ಪಡೆಯಬಹುದು. ಪರೀಕ್ಷೆಯ ಎಲ್ಲಾ ದಿನಗಳಲ್ಲಿ ಈ ಬಸ್ ಸೇವೆಗಳು ಲಭ್ಯವಿರುತ್ತವೆ ಎಂದು ಸಾರಿಗೆ ನಿಗಮ ತಿಳಿಸಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.