ಬೆಂಗಳೂರು: ರಾಜ್ಯದಲ್ಲಿ ಇಂದು 11,000 ಹೊಸ ಕೋವಿಡ್ -19 ಪ್ರಕರಣಗಳು ಕಂಡು ಬಂದಿವೆ. 2021ರಲ್ಲಿ ಇದೆ ಮೊದಲ ಭಾರಿ ರಾಜ್ಯದಲ್ಲಿ ಅತೀ ಹೆಚ್ಚು ಕೊರೋನಾ ಪ್ರಕರಣಗಳು ವರದಿಯಾಗಿವೆ. ದಕ್ಷಿಣದ ರಾಜ್ಯಗಳಲ್ಲಿ ಕರ್ನಾಟಕವು ಒಂದೇ ದಿನದಲ್ಲಿ ಅತೀ ಹೆಚ್ಚು ಪ್ರಕರಣಗಳು ಕಂಡುಬಂದಿರುವ ಎರಡನೇ ರಾಜ್ಯವಾಗಿದೆ.  2 ಗಂಟೆಗಳಲ್ಲಿ 10,250 ಪ್ರಕರಣಗಳು ವರದಿಯಾಗಿವೆ.


COMMERCIAL BREAK
SCROLL TO CONTINUE READING

11,265 ಕೋವಿಡ್ -19 ಪ್ರಕರಣಗಳು ಸೇರಿ ಕರ್ನಾಟಕ(Karnataka)ದ ಒಟ್ಟಾರೆ 10,94,912 ಕ್ಕೆ ತಲುಪಿದೆ ಎಂದು ಹೆಲ್ತ್  ಬುಲೆಟಿನ್ ನಲ್ಲಿ ತಿಳಿಸಲಾಗಿದೆ. ಈ ಪೈಕಿ ಬೆಂಗಳೂರಿನಲ್ಲಿ 8,155 ಹೊಸ ಪ್ರಕರಣಗಳು ವರದಿಯಾಗಿವೆ. ಕೊರೊನದಿಂದ 38 ಸಾವನ್ನಪ್ಪಿದ್ದಾರೆ. ಒಟ್ಟು ಸಾವಿನ ಸಂಖ್ಯೆ 13,046 ಕ್ಕೆ ಏರಿಕೆಯಾಗಿದೆ.


ಇದನ್ನೂ ಓದಿ : Karnataka Govt: ಸಾರಿಗೆ ನೌಕರರ ಮುಷ್ಕರದಿಂದ ರಾಜ್ಯ ಸರ್ಕಾರಕ್ಕೆ ₹ 152 ಕೋಟಿ ನಷ್ಟ!


4,364 ಜನ ವೈರಸ್‌(Covid-19)ನಿಂದ ಚೇತರಿಸಿಕೊಂಡಿದ್ದು, ರಾಜ್ಯದಲ್ಲಿ ಚೇತರಿಸಿಕೊಂಡವರ ಸಂಖ್ಯೆ 9,96,367 ಕ್ಕೆ ಏರಿಕೆಯಾಗಿದೆ. 85,480 ಸಕ್ರಿಯ ಪ್ರಕರಣಗಳಿದ್ದು ಇದರಲ್ಲಿ 506 ರೋಗಿಗಳು ಐಸಿಯುನಲ್ಲಿದ್ದಾರೆ.


ಇದನ್ನೂ ಓದಿ : Bus Strike: ಸಾರಿಗೆ ನೌಕರರ ಮುಷ್ಕರಕ್ಕೆ 6 ದಿನಗಳಲ್ಲಿ 60 ಬಸ್ಸುಗಳು ಬಲಿ..!


ಇಂದು ರಾಜ್ಯದ ಕೋವಿಡ್ -19 ಪರಿಸ್ಥಿತಿಯನ್ನು ಪರಿಶೀಲಿಸಿದ ಸಿಎಂ ಬಿ ಎಸ್ ಯಡಿಯೂರಪ್ಪ(BS Yediyurappa),  ರಾಜ್ಯದಲ್ಲಿ ಯಾವುದೇ ಲಾಕ್ ಡೌನ್ ಮಾಡುವುದಿಲ್ಲ ಎಂದು ಪುನರುಚ್ಚರಿಸಿದ್ದಾರೆ, ಆದರೆ ಕರೋನವೈರಸ್ ಹರಡುವಿಕೆಯನ್ನು ತಡೆಗಟ್ಟಲು ಕಠಿಣ ಕ್ರಮಗಳನ್ನು ಜಾರಿ ಮಾಡಲಾಗುತ್ತೆ ಎಂದು ಹೇಳಿದ್ದಾರೆ.


ಇದನ್ನೂ ಓದಿ : CBSE 10ನೇ ತರಗತಿ ಪರೀಕ್ಷೆ ರದ್ದಾದ ಬೆನ್ನಲೇ SSLC ಪರೀಕ್ಷೆಗಳ ಬಗ್ಗೆ ಶಿಕ್ಷಣ ಸಚಿವರಿಂದ ಮಹತ್ವದ ಮಾಹಿತಿ!


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.