Karnataka SSLC Result 2022: ಎಸ್‌ಎಸ್‌ಎಲ್‌ಸಿ ಫಲಿತಾಂಶ ಚೆಕ್‌ ಮಾಡಲು ಲಿಂಕ್‌ ಇಲ್ಲಿದೆ

Karnataka SSLC Result 2022: ಇಂದು ಮಧ್ಯಾಹ್ನ 12-30 ಕ್ಕೆ ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ ಹೊರಬೀಳಲಿದೆ. 2021-22ನೇ ಸಾಲಿನ ಮಾರ್ಚ್‌-ಏಪ್ರಿಲ್ ವಾರ್ಷಿಕ ಪರೀಕ್ಷೆ ಬರೆದ ವಿದ್ಯಾರ್ಥಿಗಳು ರಿಸಲ್ಟ್‌ ಅನ್ನು ಹೀಗೆ ಚೆಕ್ ಮಾಡಿ.

Written by - Chetana Devarmani | Last Updated : May 19, 2022, 12:50 PM IST
  • ಇಂದು ಮಧ್ಯಾಹ್ನ 12-30 ಕ್ಕೆ ಕರ್ನಾಟಕ ಎಸ್‌ಎಸ್‌ಎಲ್‌ಸಿ ಫಲಿತಾಂಶ
  • ಮಲ್ಲೇಶ್ವರಂನಲ್ಲಿರುವ ಪ್ರೌಢ ಶಿಕ್ಷಣ ಪರೀಕ್ಷಾ ಕಚೇರಿಯಲ್ಲಿ ಪತ್ರಿಕಾಗೋಷ್ಠಿ
  • ಎಸ್‌ಎಸ್ಎಲ್‌ಸಿ ರಿಸಲ್ಟ್‌ ಪ್ರಕಟಿಸಲಿರುವ ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌
Karnataka SSLC Result 2022: ಎಸ್‌ಎಸ್‌ಎಲ್‌ಸಿ ಫಲಿತಾಂಶ ಚೆಕ್‌ ಮಾಡಲು ಲಿಂಕ್‌ ಇಲ್ಲಿದೆ  title=
ಎಸ್‌ಎಸ್ಎಲ್‌ಸಿ

Karnataka SSLC Result 2022: ಇಂದು ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟವಾಗಲಿದೆ. ಮಲ್ಲೇಶ್ವರಂನಲ್ಲಿರುವ ಪ್ರೌಢ ಶಿಕ್ಷಣ ಪರೀಕ್ಷಾ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಪ್ರೌಢ ಮತ್ತು ಪ್ರಾಥಮಿಕ ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ಅವರು 2021-22ನೇ ಶೈಕ್ಷಣಿಕ ಸಾಲಿನ ಎಸ್‌ಎಸ್ಎಲ್‌ಸಿ ರಿಸಲ್ಟ್‌ ಪ್ರಕಟಿಸಲಿದ್ದಾರೆ. 

ಇದನ್ನೂ ಓದಿ: ‘ನಾವು ವಿವೇಕಾನಂದರ ವಂಶಸ್ಥರೇ ವಿನಃ ಮೊಘಲರ ವಂಶಸ್ಥರಲ್ಲ’

ಇಂದು ಮಧ್ಯಾಹ್ನ 12-30 ಕ್ಕೆ ಎಸ್‌ಎಸ್‌ಎಲ್‌ಸಿ ಫಲಿತಾಂಶ ಇಂದು ಪ್ರಕಟವಾಗಲಿದೆ. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಫಲಿತಾಂಶ ವೆಬ್‌ಸೈಟ್‌ನಲ್ಲಿ ಮಧ್ಯಾಹ್ನ 01-00 ಗಂಟೆಗೆ ರಿಸಲ್ಟ್‌ ಲಭ್ಯವಾಗಲಿದೆ. ವಿದ್ಯಾರ್ಥಿಗಳು ತಮ್ಮ ಫಲಿತಾಂಶ ತಿಳಿಯಲು karresults.nic.in ವೆಬ್‌ಸೈಟ್‌ಗೆ ಭೇಟಿ ನೀಡಬೇಕು. ವೆಬ್‌ಸೈಟ್‌ನಲ್ಲಿ ಮಾತ್ರವಲ್ಲದೇ, ನೋಂದಾಯಿಸಿಕೊಂಡಿರುವ ಫೋನ್‌ ನಂಬರ್‌ನಲ್ಲಿ ಎಸ್‌ಎಂಎಸ್‌ ಮೂಲಕವು ಫಲಿತಾಂಶ ತಿಳಿಯಬಹುದು. ಅಲ್ಲದೇ, ಆಯಾ ಶಾಲೆಗಳಲ್ಲಿ ಕೂಡ ರಿಸಲ್ಟ್‌ ಪ್ರಕಟಿಸಲಾಗುವುದು.

ಫಲಿತಾಂಶ ಹೀಗೆ ಚೆಕ್ ಮಾಡಿ:

  • ಅಧಿಕೃತ ವೆಬ್‌ಸೈಟ್‌ karresults.nic.in ಗೆ ಭೇಟಿ ನೀಡಿ
  • ಓಪನ್‌ ಆದ ಪೇಜ್‌ನಲ್ಲಿ ವಿದ್ಯಾರ್ಥಿಗಳು ತಮ್ಮ ರಿಜಿಸ್ಟರ್ ನಂಬರ್ ಮತ್ತು ಜನ್ಮ ದಿನಾಂಕ ಮಾಹಿತಿ ಹಾಕಬೇಕು
  • 'Submit' ಎಂಬಲ್ಲಿ ಕ್ಲಿಕ್ ಮಾಡಬೇಕು
  • ಬಳಿಕ ಫಲಿತಾಂಶದ ಪೇಜ್‌ ಓಪನ್‌ ಆಗುತ್ತೆ
  • ಡೌನ್‌ಲೋಡ್‌ ಮಾಡಿ ಮುಂದಿನ ರೆಫರೆನ್ಸ್‌ಗಾಗಿ ಪ್ರಿಂಟ್‌ ತೆಗೆದುಕೊಳ್ಳಬಹುದು
  • ಅನುತೀರ್ಣಗೊಂಡ ವಿದ್ಯಾರ್ಥಿಗಳಿಗೆ ಜೂನ್‌ 4ನೇ ವಾರದಲ್ಲಿ ಪೂರಕ ಪರೀಕ್ಷೆ ನಡೆಸುವ ಸಾಧ್ಯತೆ ಇದೆ.

ಇದನ್ನೂ ಓದಿ: WhatsApp Trick: ಈಗ ಟ್ರೈನ್ ರಿಯಲ್ ಟೈಮ್ ಅಪ್‌ಡೇಟ್ ಅನ್ನು ವಾಟ್ಸಾಪ್ ಮೂಲಕವೂ ತಿಳಿಯಬಹುದು

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News