Karnataka SSLC Result 2022: ಇಂದು ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟವಾಗಲಿದೆ. ಮಲ್ಲೇಶ್ವರಂನಲ್ಲಿರುವ ಪ್ರೌಢ ಶಿಕ್ಷಣ ಪರೀಕ್ಷಾ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಪ್ರೌಢ ಮತ್ತು ಪ್ರಾಥಮಿಕ ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ಅವರು 2021-22ನೇ ಶೈಕ್ಷಣಿಕ ಸಾಲಿನ ಎಸ್‌ಎಸ್ಎಲ್‌ಸಿ ರಿಸಲ್ಟ್‌ ಪ್ರಕಟಿಸಲಿದ್ದಾರೆ. 


COMMERCIAL BREAK
SCROLL TO CONTINUE READING

ಇದನ್ನೂ ಓದಿ: ‘ನಾವು ವಿವೇಕಾನಂದರ ವಂಶಸ್ಥರೇ ವಿನಃ ಮೊಘಲರ ವಂಶಸ್ಥರಲ್ಲ’


ಇಂದು ಮಧ್ಯಾಹ್ನ 12-30 ಕ್ಕೆ ಎಸ್‌ಎಸ್‌ಎಲ್‌ಸಿ ಫಲಿತಾಂಶ ಇಂದು ಪ್ರಕಟವಾಗಲಿದೆ. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಫಲಿತಾಂಶ ವೆಬ್‌ಸೈಟ್‌ನಲ್ಲಿ ಮಧ್ಯಾಹ್ನ 01-00 ಗಂಟೆಗೆ ರಿಸಲ್ಟ್‌ ಲಭ್ಯವಾಗಲಿದೆ. ವಿದ್ಯಾರ್ಥಿಗಳು ತಮ್ಮ ಫಲಿತಾಂಶ ತಿಳಿಯಲು karresults.nic.in ವೆಬ್‌ಸೈಟ್‌ಗೆ ಭೇಟಿ ನೀಡಬೇಕು. ವೆಬ್‌ಸೈಟ್‌ನಲ್ಲಿ ಮಾತ್ರವಲ್ಲದೇ, ನೋಂದಾಯಿಸಿಕೊಂಡಿರುವ ಫೋನ್‌ ನಂಬರ್‌ನಲ್ಲಿ ಎಸ್‌ಎಂಎಸ್‌ ಮೂಲಕವು ಫಲಿತಾಂಶ ತಿಳಿಯಬಹುದು. ಅಲ್ಲದೇ, ಆಯಾ ಶಾಲೆಗಳಲ್ಲಿ ಕೂಡ ರಿಸಲ್ಟ್‌ ಪ್ರಕಟಿಸಲಾಗುವುದು.


ಫಲಿತಾಂಶ ಹೀಗೆ ಚೆಕ್ ಮಾಡಿ:


  • ಅಧಿಕೃತ ವೆಬ್‌ಸೈಟ್‌ karresults.nic.in ಗೆ ಭೇಟಿ ನೀಡಿ

  • ಓಪನ್‌ ಆದ ಪೇಜ್‌ನಲ್ಲಿ ವಿದ್ಯಾರ್ಥಿಗಳು ತಮ್ಮ ರಿಜಿಸ್ಟರ್ ನಂಬರ್ ಮತ್ತು ಜನ್ಮ ದಿನಾಂಕ ಮಾಹಿತಿ ಹಾಕಬೇಕು

  • 'Submit' ಎಂಬಲ್ಲಿ ಕ್ಲಿಕ್ ಮಾಡಬೇಕು

  • ಬಳಿಕ ಫಲಿತಾಂಶದ ಪೇಜ್‌ ಓಪನ್‌ ಆಗುತ್ತೆ

  • ಡೌನ್‌ಲೋಡ್‌ ಮಾಡಿ ಮುಂದಿನ ರೆಫರೆನ್ಸ್‌ಗಾಗಿ ಪ್ರಿಂಟ್‌ ತೆಗೆದುಕೊಳ್ಳಬಹುದು

  • ಅನುತೀರ್ಣಗೊಂಡ ವಿದ್ಯಾರ್ಥಿಗಳಿಗೆ ಜೂನ್‌ 4ನೇ ವಾರದಲ್ಲಿ ಪೂರಕ ಪರೀಕ್ಷೆ ನಡೆಸುವ ಸಾಧ್ಯತೆ ಇದೆ.


ಇದನ್ನೂ ಓದಿ: WhatsApp Trick: ಈಗ ಟ್ರೈನ್ ರಿಯಲ್ ಟೈಮ್ ಅಪ್‌ಡೇಟ್ ಅನ್ನು ವಾಟ್ಸಾಪ್ ಮೂಲಕವೂ ತಿಳಿಯಬಹುದು


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.