ಬೆಂಗಳೂರು: ನಾಳೆ ಮಧ್ಯಾಹ್ನ 12.30ಕ್ಕೆ SSLC ಪರೀಕ್ಷೆ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.
ಈ ಬಗ್ಗೆ ಬುಧವಾರ ಟ್ವೀಟ್ ಮಾಡಿ ಮಾಹಿತಿ ನೀಡಿರುವ ಅವರು, ‘ನಾಳೆ ಮಧ್ಯಾಹ್ನ 12.30ಕ್ಕೆ SSLC ಫಲಿತಾಂಶ ಪ್ರಕಟಿಸಲಾಗುತ್ತದೆ. ಮಧ್ಯಾಹ್ನ 1 ಗಂಟೆ ಬಳಿಕ ಇಲಾಖೆಯ ವೆಬ್‌ಸೈಟ್‌ನಲ್ಲಿ, ಶಾಲೆಗಳಲ್ಲಿ ಫಲಿತಾಂಶ ಲಭ್ಯವಿರಲಿದೆ. https://karresults.nic.in ಗೆ ಲಾಗಿನ್ ಆಗಿ ವಿದ್ಯಾರ್ಥಿಗಳು ಫಲಿತಾಂಶ ವೀಕ್ಷಿಸಬಹುದು’ ಎಂದು ತಿಳಿಸಿದ್ದಾರೆ.
ನಾಳೆ ಮಧ್ಯಾಹ್ನ 12.30ಕ್ಕೆ SSLC ಫಲಿತಾಂಶ ಪ್ರಕಟಿಸಲಾಗುತ್ತದೆ.
ಮಧ್ಯಾಹ್ನ 1 ಗಂಟೆ ಬಳಿಕ ಇಲಾಖೆಯ ವೆಬ್‌ಸೈಟ್‌ನಲ್ಲಿ, ಶಾಲೆಗಳಲ್ಲಿ ಫಲಿತಾಂಶ ಲಭ್ಯ.https://t.co/qP2v5VxzQI
ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿರುವ ಫೋನ್ ನಂಬರ್‌ಗಳಿಗೆ SMS ಮೂಲಕ ಫಲಿತಾಂಶ ಕಳುಹಿಸಲಾಗುತ್ತದೆ.
ಎಲ್ಲ ವಿದ್ಯಾರ್ಥಿಗಳಿಗೆ ಶುಭವಾಗಲಿ.#sslcresults— B.C Nagesh (@BCNagesh_bjp) May 18, 2022
‘ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿರುವ ಫೋನ್ ನಂಬರ್‌ಗಳಿಗೆ SMS ಮೂಲಕವೂ ಫಲಿತಾಂಶ ಕಳುಹಿಸಲಾಗುತ್ತದೆ. ಪರೀಕ್ಷೆ ಬರೆದ ಎಲ್ಲಾ ವಿದ್ಯಾರ್ಥಿಗಳಿಗೆ ಶುಭವಾಗಲಿ’ ಎಂದು ಶಿಕ್ಷಣ ಸಚಿವರು ಹಾರೈಸಿದ್ದಾರೆ.ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ಮಾರ್ಚ್ 28ರಿಂದ ಏಪ್ರಿಲ್ 11ರವರೆಗೆ ಮಾರ್ಚ್ /ಏಪ್ರಿಲ್ 2022ರ ಎಸ್‌ಎಸ್‌ಎಲ್‌ಸಿ ಮುಖ್ಯ ಪರೀಕ್ಷೆ ನಡೆಸಿತ್ತು.
ಇದನ್ನೂ ಓದಿ: ಜೀವಕ್ಕೆ ಅಪಾಯ ತಂದ ʼಇಡ್ಲಿʼ: 15 ಮಂದಿ ಆಸ್ಪತ್ರೆಗೆ ದಾಖಲು
ಈ ಬಾರಿ ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಮುಖ್ಯ ಪರೀಕ್ಷೆಗೆ 15,387 ಶಾಲೆಗಳಿಂದ ಒಟ್ಟು 8,73,884 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು. ಈ ಪೈಕಿ 4,52,732 ವಿದ್ಯಾರ್ಥಿಗಳು, 4,21,110 ವಿದ್ಯಾರ್ಥಿನಿಯರು, ನಾಲ್ವರು ತೃತೀಯ ಲಿಂಗಿ ವಿದ್ಯಾರ್ಥಿಗಳು ಮತ್ತು ವಿಭಿನ್ನ ಸಾಮರ್ಥ್ಯವುಳ್ಳ 5,307 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.
ಇದನ್ನೂ ಓದಿ: ಮಾಜಿ ಪ್ರಧಾನಿ H.D Devegowdaರಿಗೆ ಹುಟ್ಟುಹಬ್ಬದ ಸಂಭ್ರಮ: ʼಮಣ್ಣಿನ ಮಗʼನಿಗೆ 90ರ ಹರೆಯ...!
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...