ಬೆಂಗಳೂರು: ನಾಳೆ ಮಧ್ಯಾಹ್ನ 12.30ಕ್ಕೆ SSLC ಪರೀಕ್ಷೆ ಫಲಿತಾಂಶವನ್ನು ಪ್ರಕಟಿಸಲಾಗುತ್ತದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.


COMMERCIAL BREAK
SCROLL TO CONTINUE READING

ಈ ಬಗ್ಗೆ ಬುಧವಾರ ಟ್ವೀಟ್ ಮಾಡಿ ಮಾಹಿತಿ ನೀಡಿರುವ ಅವರು, ‘ನಾಳೆ ಮಧ್ಯಾಹ್ನ 12.30ಕ್ಕೆ SSLC ಫಲಿತಾಂಶ ಪ್ರಕಟಿಸಲಾಗುತ್ತದೆ. ಮಧ್ಯಾಹ್ನ 1 ಗಂಟೆ ಬಳಿಕ ಇಲಾಖೆಯ ವೆಬ್‌ಸೈಟ್‌ನಲ್ಲಿ, ಶಾಲೆಗಳಲ್ಲಿ ಫಲಿತಾಂಶ ಲಭ್ಯವಿರಲಿದೆ.  https://karresults.nic.in ಗೆ ಲಾಗಿನ್ ಆಗಿ ವಿದ್ಯಾರ್ಥಿಗಳು ಫಲಿತಾಂಶ ವೀಕ್ಷಿಸಬಹುದು’ ಎಂದು ತಿಳಿಸಿದ್ದಾರೆ.


ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿರುವ ಫೋನ್ ನಂಬರ್‌ಗಳಿಗೆ SMS ಮೂಲಕವೂ ಫಲಿತಾಂಶ ಕಳುಹಿಸಲಾಗುತ್ತದೆ. ಪರೀಕ್ಷೆ ಬರೆದ ಎಲ್ಲಾ ವಿದ್ಯಾರ್ಥಿಗಳಿಗೆ ಶುಭವಾಗಲಿ’ ಎಂದು ಶಿಕ್ಷಣ ಸಚಿವರು ಹಾರೈಸಿದ್ದಾರೆ.ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ಮಾರ್ಚ್‌ 28ರಿಂದ ಏಪ್ರಿಲ್‌ 11ರವರೆಗೆ ಮಾರ್ಚ್‌ /ಏಪ್ರಿಲ್ 2022ರ ಎಸ್‌ಎಸ್‌ಎಲ್‌ಸಿ ಮುಖ್ಯ ಪರೀಕ್ಷೆ ನಡೆಸಿತ್ತು.


ಇದನ್ನೂ ಓದಿ: ಜೀವಕ್ಕೆ ಅಪಾಯ ತಂದ ʼಇಡ್ಲಿʼ: 15 ಮಂದಿ ಆಸ್ಪತ್ರೆಗೆ ದಾಖಲು


ಈ ಬಾರಿ ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಮುಖ್ಯ ಪರೀಕ್ಷೆಗೆ 15,387 ಶಾಲೆಗಳಿಂದ ಒಟ್ಟು 8,73,884 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು. ಈ ಪೈಕಿ 4,52,732 ವಿದ್ಯಾರ್ಥಿಗಳು, 4,21,110 ವಿದ್ಯಾರ್ಥಿನಿಯರು, ನಾಲ್ವರು ತೃತೀಯ ಲಿಂಗಿ ವಿದ್ಯಾರ್ಥಿಗಳು ಮತ್ತು ವಿಭಿನ್ನ ಸಾಮರ್ಥ್ಯವುಳ್ಳ 5,307 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು.   


ಇದನ್ನೂ ಓದಿ: ಮಾಜಿ ಪ್ರಧಾನಿ H.D Devegowdaರಿಗೆ ಹುಟ್ಟುಹಬ್ಬದ ಸಂಭ್ರಮ: ʼಮಣ್ಣಿನ ಮಗʼನಿಗೆ 90ರ ಹರೆಯ...!


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...