Karnataka SSLC Result 2023 : ಹತ್ತನೇ ತರಗತಿ ಫಲಿತಾಂಶ ಪ್ರಕಟ !
Karnataka SSLC Result 2023 Declared : 2023 ನೇ ಸಾಲಿನ 10 ನೇ ತರಗತಿ ಫಲಿತಾಂಶ ಪ್ರಕಟವಾಗಿದೆ. ಈ ಕೆಳಗಿನ ಡೈರೆಕ್ಟ್ ಲಿಂಕ್ ಮೂಲಕ ಫಲಿತಾಂಶವನ್ನು ಪರಿಶೀಲಿಸಬಹುದು.
Karnataka SSLC Result 2023 Declared : ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು 2023 ನೇ ಸಾಲಿನ 10 ನೇ ತರಗತಿ ಫಲಿತಾಂಶವನ್ನು ಪ್ರಕಟಿಸಿದೆ. ಶಿಕ್ಷಣಾ ಇಲಾಖೆ ಪ್ರಧಾನ ಕಾರ್ಯದರ್ಶಿ ರಿತೀಶ್ ಸಿಂಗ್ ಅವರಿಂದ ಪ್ರಕಟಿಸಿದ್ದಾರೆ. ಪ್ರತಿ ಸಲದಂತೆ ಈ ಬಾರಿ ಕೂಡಾ ವಿದ್ಯಾರ್ಥಿನಿಯರದ್ದೆ ಮೇಲು ಗೈ. ಈ ಬಾರಿ 83.89 ಪ್ರತಿಶತ ಫಲಿತಾಂಶ ಬಂದಿದೆ. ನಾಲ್ಕು ವಿದ್ಯಾರ್ಥಿಗಳು 625ರಲ್ಲಿ 625 ಅಂಕಗಳನ್ನು ಪಡೆದುಕೊಂಡಿದ್ದಾರೆ.
ಚಿತ್ರದುರ್ಗ ಮೊದಲು ಯಾದಗಿರಿ ಕೊನೆ :
96.8 ಶೇಕಡಾ ಫಲಿತಾಂಶ ಪಡೆದಿರುವ ಚಿತ್ರದುರ್ಗ ಜಿಲ್ಲೆ ಮೊದಲ ಸ್ಥಾನ ಪಡೆದುಕೊಂಡಿದೆ. 96.74ಶೇಕಡಾದೊಂದಿಗೆ ಮಂಡ್ಯ ಜಿಲ್ಲೆ ಎರಡನೇ ಸ್ಥಾನದಲ್ಲಿದ್ದರೆ, ಮೂರನೇ ಸ್ಥಾನ ಪಡೆದುಕೊಂಡ ಹಾಸನ ಜಿಲ್ಲೆ 96.8 ಶೇಕಡಾ ಫಲಿತಾಂಶ ಪಡೆದಿದೆ. ಇನ್ನು ಯಾದಗಿರಿ ಜಿಲ್ಲೆ ಫಲಿತಾಂಶದಲ್ಲಿ ಕೊನೆಯ ಸ್ಥಾನ ಪಡೆದುಕೊಂಡಿದೆ. ಈ ಬಾರಿ ಮೂರು ಸಬ್ಜೆಕ್ಟ್ ನಲ್ಲಿ ಗ್ರೇಸ್ ಮಾರ್ಕ್ 10% ಗ್ರೇಸ್ ಮಾರ್ಕ್ಸ್ ನೀಡಲಾಗಿದೆ.
ಇದನ್ನೂ ಓದಿ : Karnataka SSLC Result 2023: ಇಂದು ಎಸ್ಎಸ್ಎಲ್’ಸಿ ಫಲಿತಾಂಶ ಪ್ರಕಟ: ರಿಸಲ್ಟ್ ಪರಿಶೀಲಿಸಲು ಈ ಲಿಂಕ್ ಕ್ಲಿಕ್ ಮಾಡಿ
ಮರು ಮೌಲ್ಯ ಮಾಪನಕ್ಕೆ ಅರ್ಜಿ ಸಲ್ಲಿಸುವ ದಿನಾಂಕ :
ಛಾಯಾಪತ್ರಿಕೆ- 08-05-23 ರಿಂದ 14-05-23
ಮರು ಮೌಲ್ಯ ಮಾಪನ : 15-05-23 ರಿಂದ 21-05-2023
ಪೂರಕ ಪರೀಕ್ಷೆಯ ನೋಂದಣಿ - 08-05-23 ರಿಂದ 15-05-23ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ.
625ಕ್ಕೆ 625 ಅಂಕ ಪಡೆದ ವಿದ್ಯಾರ್ಥಿಗಳು :
ಈ ಬಾರಿ ನಾಲ್ಕು ವಿದ್ಯಾರ್ಥಿಗಳು 625ಕ್ಕೆ 625 ಅಂಕಗಳನ್ನು ಪಡೆಯುವ ಮೂಲಕ 100 ಶೇ ಫಲಿತಾಂಶ ಸಾಧಿಸಿದ್ದಾರೆ. ಬೆಂಗಳೂರು, ನ್ಯೂ ಮೆಕಾಲ ಇಂಗ್ಲೀಷ್ ಸ್ಕೂಲ್ ನ ಭೂಮಿಕಾ ಪೈ, ಬಾಲಗಂಗಾಧರನಾಥ ಹೈಸ್ಕೂಲ್ ಚಿಕ್ಕಬಳ್ಳಾಪುರದ ಯಶಸ್ ಗೌಡ, ಕುಮಾರೇಶ್ವರ ಶಾಲೆ ಸವದತ್ತಿ ಅನುಪನಾ ಶ್ರೀಶೈಲ, ಮತ್ತು ಆಕ್ಸ್ ಫರ್ಡ್ ಇಂಗ್ಲೀಷ್ ಶಾಲೆ ಮುದ್ದೇಬಿಹಾಳದ ಭೀಮನಗೌಡ ಹನುಮಂತಗೌಡ ಪಾಟೀಲ್ 625ಕ್ಕೆ 625 ಅಂಕಗಳನ್ನು ಪಡೆದುಕೊಂಡಿದ್ದಾರೆ. ಈ ಬಾರಿ 8,35,102 ವಿದ್ಯಾರ್ಥಿಗಳು ಪರೀಕ್ಷೆ ಬರೆದುಇದ್ದು, ಈ ಪೈಕಿ 7,00,619 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
Karnataka SSLC Result 2023 ಅನ್ನು ಹೀಗೆ ಪರಿಶೀಲಿಸಿ :
1.karresults.nic.in ನಲ್ಲಿ ಅಧಿಕೃತ ವೆಬ್ ಸೈಟ್ ಗೆ ಭೇಟಿ ನೀಡಿ
2.ಮುಖ್ಯ ಪುಟದಲ್ಲಿ ‘RESULT’ ಲಿಂಕ್ ಕಾಣಿಸುತ್ತದೆ. ಈ ಲಿಂಕ್ ಮೇಲೆ ಕ್ಲಿಕ್ ಮಾಡಿ
3.ಈಗ, ನಿಮ್ಮ ನೋಂದಣಿ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ಎಂಟರ್ ಮಾಡಿ
4.ಎಲ್ಲಾ ವಿವರಗಳನ್ನು ಸಲ್ಲಿಸಿದ ತಕ್ಷಣ ಫಲಿತಾಂಶ ಸ್ಕ್ರೀನ್ ಮೇಲೆ ಕಾಣಿಸಿಕೊಳ್ಳುತ್ತದೆ
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.