SSLC Result 2021: ಇಂದು ಮಧ್ಯಾಹ್ನ 3.30ಕ್ಕೆ ಎಸ್ಎಸ್ಎಲ್ಸಿ ಫಲಿತಾಂಶ, ರಿಸಲ್ಟ್ ಇಲ್ಲಿ ನೋಡಿ…
ವಿದ್ಯಾರ್ಥಿಗಳು ಅಧಿಕೃತ ವೆಬ್ಸೈಟ್ ಮೂಲಕ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ.
ಬೆಂಗಳೂರು: ಬಹುನಿರೀಕ್ಷಿತ ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶವು ಇಂದು ಮಧ್ಯಾಹ್ನ 3.30ಕ್ಕೆ ಪ್ರಕಟವಾಗಲಿದೆ. ನೂತನ ಶಿಕ್ಷಣ ಸಚಿವ ಬಿ.ಸಿ.ನಾಗೇಶ್(BC Nagesh) ಫಲಿತಾಂಶ ಪ್ರಕಟಿಸಲಿದ್ದಾರೆ. ವಿದ್ಯಾರ್ಥಿಗಳು ಅಧಿಕೃತ ವೆಬ್ಸೈಟ್ ಮೂಲಕ ಫಲಿತಾಂಶವನ್ನು ವೀಕ್ಷಿಸಬಹುದಾಗಿದೆ. ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ (KSEEB) ಸಭಾಂಗಣದಲ್ಲಿ ಶಿಕ್ಷಣ ಸಚಿವರು ಸುದ್ದಿಗೋಷ್ಠಿ ನಡೆಸಿ ಫಲಿತಾಂಶದ ಬಗ್ಗೆ ಮಾಹಿತಿ ನೀಡಲಿದ್ದಾರೆ.
ಈ ಬಾರಿ 4-5 ದಿನ ಮುಂಚಿತವಾಗಿಯೇ ಎಸ್ಎಸ್ಎಲ್ಸಿ ಪರೀಕ್ಷೆ(SSLC 2021 Examination)ಯ ಮೌಲ್ಯಮಾಪನ ಪೂರ್ಣಗೊಂಡಿದೆ. ಫಲಿತಾಂಶ ಪ್ರಕಟಿಸುವುದಕ್ಕೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಈಗಾಗಲೇ ಎಸ್ಎಸ್ಎಲ್ಸಿ ಬೋರ್ಡ್ ನಿರ್ದೇಶಕಿ ವಿ.ಸುಮಂಗಲ ಅವರು ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಉಮಾಶಂಕರ್ ಅವರಿಗೆ ಫಲಿತಾಂಶವನ್ನು ಸಲ್ಲಿಸಿದ್ದಾರೆ. ನೂತನ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಫಲಿತಾಂಶವನ್ನು ಬಿಡುಗಡೆ ಮಾಡಲಿದ್ದಾರೆ. ಮಧ್ಯಾಹ್ನದ ವೇಳೆಗೆ ವಿದ್ಯಾರ್ಥಿಗಳ ಕುತೂಹಲಕ್ಕೆ ತೆರೆ ಬೀಳಲಿದೆ.
ಇದನ್ನೂ ಓದಿ: ಬಿಎಸ್‍ವೈಗೆ ಐಟಿ, ಇಡಿ, ಸಿಬಿಐ ಬೆದರಿಕೆಯೊಡ್ಡಿ ರಾಜೀನಾಮೆ ಕೊಡಿಸಲಾಗಿದೆ: ಕಾಂಗ್ರೆಸ್ ಆರೋಪ
ಕೊರೊನಾ ಪರಿಸ್ಥಿತಿಯಿಂದಾಗಿ ವಿದ್ಯಾರ್ಥಿಗಳು ವರ್ಷವಿಡೀ ಭೌತಿಕವಾಗಿ ತರಗತಿಗಳಿಗೆ ಹಾಜರಾಗಲು ಸಾಧ್ಯವಾಗಿರಲಿಲ್ಲ. ಬಹುತೇಕ ಆನ್ಲೈನ್ ಮೂಲಕವೇ ಪಾಠ-ಪ್ರವಚನಗಳು ನಡೆದಿದ್ದವು. ಈ ಹಿನ್ನೆಲೆಯಲ್ಲಿ ಪರೀಕ್ಷೆ ನಡೆಸುವುದು ಬೇಡವೆಂಬ ವಿರೋಧಗಳು ಕೇಳಿಬಂದಿದ್ದವು. ಅದಾಗ್ಯೂ ಜುಲೈ 19 ಮತ್ತು 22ರಂದು ಎಸ್ಎಸ್ಎಲ್ಸಿ ಪರೀಕ್ಷೆ(SSLC Exam) ನಡೆಸಲಾಗಿತ್ತು. ಆದರೆ ಈ ಬಾರಿಯ ಪರೀಕ್ಷೆ ಹಿಂದೆಂದಿಗಿಂತಲೂ ವಿಭಿನ್ನವಾಗಿತ್ತು. ಕೊರೊನಾ ಆತಂಕದ ಮಧ್ಯೆಯೂ ಜರುಗಿದ್ದ ಈ ಪರೀಕ್ಷೆಯಲ್ಲಿ ಶೇ.99.65ರಷ್ಟು ವಿದ್ಯಾರ್ಥಿಗಳು ಹಾಜರಾಗಿದ್ದರು. ಈ ವರ್ಷ ಒಟ್ಟು 8,19,694 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಈ ಬಾರಿಯ ಪರೀಕ್ಷೆ ವಿಭಿನ್ನವಾಗಿತ್ತು. ಗಣಿತ, ವಿಜ್ಞಾನ, ಸಮಾಜ ವಿಜ್ಞಾನ ವಿಷಯಗಳನ್ನು ಒಂದು ಪ್ರಶ್ನೆ ಪತ್ರಿಕೆಯಲ್ಲಿ ಹಾಗೂ ಭಾಷಾ ವಿಷಯಗಳನ್ನು ಒಂದು ಪ್ರಶ್ನೆ ಪತ್ರಿಕೆಯಲ್ಲಿ ನೀಡಲಾಗಿತ್ತು. ಅಲ್ಲದೆ ಕನ್ನಡ(Kannada)ದಲ್ಲಿ ಒಂದು ಕೃಪಾಂಕ ವಿದ್ಯಾರ್ಥಿಗಳಿಗೆ ದೊರೆಯಲಿದೆ.
ಇದನ್ನೂ ಓದಿ: Bengaluru : ಬೆಂಗಳೂರಿನಲ್ಲಿ ಕೊರೋನಾ ತಾಂಡವ : ಕಂಟೈನ್‌ಮೆಂಟ್ ವಲಯಗಳ ಸಂಖ್ಯೆ 162 ಕ್ಕೆ ಏರಿಕೆ!
ನಿಮ್ಮ ಎಸ್ಎಸ್ಎಲ್ಸಿ ಫಲಿತಾಂಶ ಹೀಗೆ ವೀಕ್ಷಿಸಿ
1) ಕರ್ನಾಟಕ ಸರ್ಕಾರದ ಅಧಿಕೃತ ವೆಬ್ಸೈಟ್ https://sslc.karnataka.gov.in ಕ್ಲಿಕ್ ಮಾಡಿ
2) ಸ್ಕ್ರೀನ್ನಲ್ಲಿ ಕಾಣಿಸಿಕೊಳ್ಳುವ ರಿಸಲ್ಟ್ ಲಿಂಕ್ ಅನ್ನು ಕ್ಲಿಕ್ ಮಾಡಿ
3) ನಿಮ್ಮ ರೋಲ್ ನಂಬರ್ ಅನ್ನು ನಮೂದಿಸಿ ಲಾಗಿನ್ ಆಗಿ
4) ರೋಲ್ ನಂಬರ್ ಜೊತೆಗೆ ಕೇಳುವ ನಿಮ್ಮ ಇತರೆ ಮಾಹಿತಿಗಳನ್ನೂ ಸರಿಯಾಗಿ ಭರ್ತಿ ಮಾಡಿ
5) ಭರ್ತಿ ಮಾಡಲಾದ ಮಾಹಿತಿಯನ್ನು ಸಲ್ಲಿಸಿ ನಿಮ್ಮ ಫಲಿತಾಂಶವನ್ನು ವೀಕ್ಷಿಸಿ
6) ತಾತ್ಕಾಲಿಕ ಅಂಕಪಟ್ಟಿ ಆನ್ಲೈನ್ನಲ್ಲೇ ಲಭ್ಯವಾಗಲಿದ್ದು ನೀವು ಡೌನ್ಲೋಡ್ ಮಾಡಿಕೊಳ್ಳಬಹುದು
ಮರುಮೌಲ್ಯಮಾಪನಕ್ಕೆ ಏನು ಮಾಡಬೇಕು..?
ನಿಮಗೆ ಫಲಿತಾಂಶದ ಬಗ್ಗೆ ಅಸಮಾಧಾನವಿದ್ದಲ್ಲಿ ಮರುಮೌಲ್ಯಮಾಪನ(Revaluation)ಕ್ಕೆ ಅರ್ಜಿ ಸಲ್ಲಿಸಬಹುದು. ಒಂದು ವೇಳೆ ಮರುಪರೀಕ್ಷೆ ಬರೆಯಲು ಇಚ್ಛಿಸಿದಲ್ಲಿ 2ನೇ ಬಾರಿಗೆ ಅರ್ಜಿ ಸಲ್ಲಿಸಬಹುದು. ಅದಕ್ಕೆ ಶಿಕ್ಷಕರ ಸಹಾಯ ಪಡೆದು ಅಗತ್ಯವಿರುವ ದಾಖಲೆಗಳನ್ನು ಭರ್ತಿ ಮಾಡಿ ಮನವಿ ಮಾಡಬಹುದು.
ಈ ವೆಬ್ಸೈಟ್ಗಳಲ್ಲಿ ಫಲಿತಾಂಶ ವೀಕ್ಷಿಸಿ
https://karresults.nic.in/
http://kseeb.kar.nic.in/
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ