ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಅಭಿವೃದ್ಧಿಯಲ್ಲಿ ಹಿಂದೆ ಬಿದ್ದಿಲ್ಲ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್​

Governor Thawar Chand Gehlot: ಜಂಟಿ ಅಧಿವೇಶನವನ್ನುದ್ದೇಶಿಸಿ ಭಾಷಣ ಮಾಡಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್​, ʼಕಲ್ಯಾಣ ಯೋಜನೆಗಳಿಂದ ರಾಜ್ಯ ಅಭಿವೃದ್ಧಿಯಲ್ಲಿ ಹಿಂದೆ ಉಳಿಯುತ್ತದೆ. ರಾಜ್ಯದ ಹಣಕಾಸು ವ್ಯವಸ್ಥೆ ಹದಗೆಡುತ್ತದೆ ಎಂಬ ಭವಿಷ್ಯವನ್ನು ರಾಜ್ಯ ಸರ್ಕಾರ ಸುಳ್ಳು ಮಾಡಿದೆʼ ಎಂದು ಹೇಳಿದ್ದಾರೆ. 

Written by - Puttaraj K Alur | Last Updated : Mar 3, 2025, 02:50 PM IST
  • ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಅಭಿವೃದ್ಧಿಯಲ್ಲಿ ಹಿಂದೆ ಬಿದ್ದಿಲ್ಲ
  • ಹಲವರ ಭವಿಷ್ಯ ಸುಳ್ಳಾಗಿದೆ ಎಂದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್
  • ಮಾರ್ಚ್ 21ರವರೆಗೆ ನಡೆಯಲಿರುವ ವಿಧಾನಮಂಡಲ ಅಧಿವೇಶನ
ಗ್ಯಾರಂಟಿ ಯೋಜನೆಗಳಿಂದ ರಾಜ್ಯ ಅಭಿವೃದ್ಧಿಯಲ್ಲಿ ಹಿಂದೆ ಬಿದ್ದಿಲ್ಲ: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್​
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್

Karnataka Budget 2025: ರಾಜ್ಯ ಬಜೆಟ್‌ನ ವಿಧಾನಮಂಡಲ ಅಧಿವೇಶನ ಆರಂಭವಾಗಿದೆ. ಜಂಟಿ ಅಧಿವೇಶನ ಉದ್ದೇಶಿಸಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್​ ಭಾಷಣ ಮಾಡಿದ್ದಾರೆ. ಮಾರ್ಚ್​ 4ರಿಂದ 6ರವರೆಗೆ ರಾಜ್ಯಪಾಲರ ಭಾಷಣದ ಮೇಲೆ ಚರ್ಚೆ ನಡೆಯಲಿದೆ. ಬಳಿಕ ಮಾರ್ಚ್​ 7ರಂದು ಸಿಎಂ ಸಿದ್ದರಾಮಯ್ಯನವರು ಬಜೆಟ್ ಮಂಡಿಸಲಿದ್ದಾರೆ. ವಿಧಾನಮಂಡಲ ಅಧಿವೇಶನ ಮಾರ್ಚ್ 21ರವರೆಗೆ ನಡೆಯಲಿದೆ. ವಿಧಾನಮಂಡಲ ಬಜೆಟ್ ಅಧಿವೇಶನ ಹಿನ್ನೆಲೆ ಸಿಎಂ ಸಿದ್ದರಾಮಯ್ಯನವರು ಮಾರ್ಚ್​ 4ರಂದು ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ. ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ಈ ಸಭೆ​ ನಡೆಯಲಿದೆ. ಅಧಿವೇಶನದಲ್ಲಿ ವಿಪಕ್ಷಗಳಿಗೆ ಉತ್ತರಿಸಬೇಕಾದ ವಿಚಾರಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ.  

Add Zee News as a Preferred Source

ಹಲವರ ಭವಿಷ್ಯವನ್ನು ಸರ್ಕಾರ ಸುಳ್ಳು ಮಾಡಿದೆ!! 

ಜಂಟಿ ಅಧಿವೇಶನವನ್ನುದ್ದೇಶಿಸಿ ಭಾಷಣ ಮಾಡಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್​, ʼಕಲ್ಯಾಣ ಯೋಜನೆಗಳಿಂದ ರಾಜ್ಯ ಅಭಿವೃದ್ಧಿಯಲ್ಲಿ ಹಿಂದೆ ಉಳಿಯುತ್ತದೆ. ರಾಜ್ಯದ ಹಣಕಾಸು ವ್ಯವಸ್ಥೆ ಹದಗೆಡುತ್ತದೆ ಎಂಬ ಭವಿಷ್ಯವನ್ನು ರಾಜ್ಯ ಸರ್ಕಾರ ಸುಳ್ಳು ಮಾಡಿದೆʼ ಎಂದು ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರವು ಕೈಗೊಂಡ ಕಾರ್ಯ‌ ಯೋಜನೆಗಳು ಮತ್ತು ಅವುಗಳ ಬೆಳವಣಿಗೆಯ ಕುರಿತು ಮಾತನಾಡಿದ ರಾಜ್ಯಪಾಲರು, ʼರಾಜ್ಯದ ಆದಾಯ ಹೆಚ್ಚಾಗಿರುವುದರೊಂದಿಗೆ ವಿದೇಶಿ ಬಂಡವಾಳ ಹೂಡಿಕೆಯಲ್ಲಿ ಎರಡನೇ ಸ್ಥಾನವನ್ನು ಪಡೆದಿದೆ. ಅಷ್ಟೇ ಅಲ್ಲದೆ ಜಿಎಸ್‌ಟಿ ಬೆಳವಣಿಗೆಯ ದರ ಹೆಚ್ಚಾಗಿದೆ. ಪ್ರತಿಯೊಂದು ವಲಯದಲ್ಲೂ ರಾಜ್ಯವು ಉತ್ತಮವಾದ ಸಾಧನೆಯನ್ನು ಮಾಡಿದೆʼ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.  

ಇದನ್ನೂ ಓದಿ: ಮದುವೆಗೆ ಒಪ್ಪದ ಪ್ರೇಯಸಿಯ ತಾಯಿ, ಎದೆ ಮೇಲೆ ಕುಳಿತು ಕತ್ತು ಹಿಸುಕಿ ಕೊಲೆ ಯತ್ನ..! ಭಗ್ನ ಪ್ರೇಮಿಯ ಭಯಾನಕ ವಿಡಿಯೋ ವೈರಲ್ 

ʼಕೃಷಿ ಕ್ಷೇತ್ರದಲ್ಲಿ ಹಿಂಗಾರು ಮತ್ತು ಮುಂಗಾರು ಹಂಗಾಮುಗಳಿಂದ ಸುಮಾರು 146 ಲಕ್ಷ ಟನ್‌ಗಳಷ್ಟು ಕೃಷಿ ಉತ್ಪಾದನೆಯನ್ನು ನಿರೀಕ್ಷಿಸಿಸಲಾಗಿದೆ. ಸರ್ಕಾರ ರಚನೆಯಾದಾಗಿನಿಂದಲೂ ರೈತರಿಗೆ ಸಹಾಯಹಸ್ತ ನೀಡಿದೆ. ಕೆಎಂಎಫ್‌ ದಿನಕ್ಕೆ 1 ಕೋಟಿ ಲೀಟರ್‌ ಹಾಲು ಉತ್ಪಾದಿಸುವ ಮೂಲಕ ಕರ್ನಾಟಕ ಹಾಲಿನ ಉತ್ಪಾದನೆಯಲ್ಲಿ ದಾಖಲೆ ಬರೆದಿದೆ. ಇನ್ನು ಹೈನೋದ್ಯಮಕ್ಕೆ ಪ್ರೋತ್ಸಾಹ, ಗ್ಯಾರಂಟಿ ಯೋಜನೆಯಡಿ ಸುಮಾರು 70,000 ಕೋಟಿ ರೂ. ನೆರವು ನೀಡಲಾಗಿದೆʼ ಎಂದರು.

ಶಿಕ್ಷಣ ಕ್ಷೇತ್ರದಲ್ಲಿ ಸುಮಾರು 13,000ಕ್ಕೂ ಹೆಚ್ಚು ಪದವೀಧರ ಶಿಕ್ಷಕ ಹುದ್ದೆಗಳ ಭರ್ತಿ ಮಾಡಲಾಗಿದೆ. ರಾಜ್ಯದ 1953 ಪ್ರಾಥಮಿಕ ಶಾಲೆಗಳಲ್ಲಿ ನರ್ಸರಿ ಶಾಲೆಗಳನ್ನು ನೂತನವಾಗಿ ತೆರೆಯಲಾಗಿದೆ. ಇನ್ನು ಪ್ರಾದೇಶಿಕ ಅಸಮಾನತೆಯನ್ನು ಹೋಗಲಾಡಿಸಲು ಸಮೀತಿಯನ್ನು ರಚನೆ ಮಾಡಲಾಗಿದೆ. ರಾಜ್ಯದ ನಿರುದ್ಯೋಗ ಸಮಸ್ಯೆಯ ನಿವಾರಣೆಗೆ ಕ್ರಮ ಕೈಗೊಳ್ಳಲಾಗಿದೆ. ಇದರೊಂದಿಗೆ ಕ್ವಿನ್ ಸಿಟಿ (KWIN City) ಬೆಳವಣಿಗೆ ಬೆಂಗಳೂರಿನ ಹೊರವಲಯದಲ್ಲಿ 40,000 ಕೋಟಿ ರೂ. ಬಂಡವಾಳ ಹೂಡಿಕೆ ಮತ್ತು ವಿಜಯಪುರದಲ್ಲಿ 348 ಕೋಟಿ ರೂ. ವೆಚ್ಚದಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಯೋಜನೆ, ಬೆಂಗಳೂರಿನಲ್ಲಿ ಮತ್ತೊಂದು ವಿಮಾನ ನಿಲ್ದಾಣ ಯೋಜನೆ ರೂಪಿಸಲಾಗಿದೆ. 

ಇದನ್ನೂ ಓದಿ: 144 ವರ್ಷಗಳ ಹಳೆಯ ಅತಿ ದೊಡ್ಡ ಮೀನು ಮಾರುಕಟ್ಟೆ? ಕೈಗೆಟುಕುವ ದರದಲ್ಲಿ ಮೀನುಗಳು ಲಭ್ಯ!! ಎಲ್ಲಿದೆ ಗೊತ್ತಾ?

ಇನ್ನು ಆರೋಗ್ಯ ಕ್ಷೇತ್ರದಲ್ಲಿ ಇಲ್ಲಿಯವರೆಗೆ ಸುಮಾರು 344 ಬಿಪಿಎಲ್‌ ರೋಗಿಗಳಿಗೆ ಸಾಸ್ಟ್‌ (SAST) ಯೋಜನೆಯಡಿ ಉಚಿತವಾಗಿ ಅಂಗಾಂಗ ಕಸಿ ಮಾಡಲಾಗಿದ್ದು, ರಾಷ್ಟ್ರಮಟ್ಟದಲ್ಲಿ 2ನೇ ಪ್ರಶಸ್ತಿ ಗಳಿಸಿದೆ. ಕೈಗೆಟಕುವ ಮಾದರಿಯಲ್ಲಿ ಆರೊಗ್ಯ ಸೇವೆಯನ್ನು ಕಲ್ಪಿಸುವ ಉದ್ದೇಶದಿಂದ ಅನೇಕ ಉಪಕ್ರಮಗಳನ್ನು ಕೈಗೊಂಡಿದೆ. "ಕಲಿಕೆ ಜೊತೆ ಕೌಶಲ್ಯ" ಯೋಜನೆಯಡಿ ಸುಮಾರು 30,000 ವಿದ್ಯಾರ್ಥಿಗಳಿಗೆ ಸಹಾಯ, ವಸತಿ ಸಮಸ್ಯೆಯನ್ನು ಗಂಭೀರವಾಗಿ ತೆಗೆದುಕೊಡ ರಾಜ್ಯ ಸರ್ಕಾರ 3.05 ಲಕ್ಷ ಮನೆಗಳ ನಿರ್ಮಾಣ ಮಾಡಿದ್ದು, 1,66,867 ಕುಟುಂಬಗಳಿಗೆ ಹಕ್ಕುಪತ್ರ ನೀಡಿದೆ ಎಂದರು.

ಗ್ರಾಮೀಣ ಪ್ರದೇಶಗಳಲ್ಲಿ ಗ್ರಂಥಾಲಯ ನಿರ್ಮಾಣ. ಇದರೊಂದಿಗೆ ನಗರ ಪ್ರದೇಶಗಳಲ್ಲಿ ವಾಹನ ದಟ್ಟಣೆ ತಡೆಯಲು ಡಬಲ್‌ ಡೆಕ್ಕರ್‌ ಮಾದರಿಯಲ್ಲಿ ಮೆಟ್ರೋ ಮತ್ತು ರಸ್ತೆ ಮೇಲ್ಸೆತುವೆ ನಿರ್ಮಾಣ ಯೋಜನೆಗೆ 8,616 ಕೋಟಿ ರೂ. ಹೂಡಿಕೆ. ಬೆಂಗಳೂರು ಮತ್ತು ಅದರ ಉಪನಗರಗಳಿಗೆ ಹೆಚ್ಚಿನ ನೀರು ಪೂರೈಸಲು 6 TMCಯಷ್ಟು ನೀರು ಹಂಚಿಕೆ ಮಾಡಲು ಮುಂದಾಗಿದೆ. ಪ್ರವಾಸೋದ್ಯಮಗಳ ಸುಸ್ತಿರ ನಿರ್ವಹಣೆ ದೇವಸ್ಥಾನಗಳ ಅಭಿವೃದ್ಧಿ ಮುಂತಾದವುಗಳತ್ತ ಗಮನ ಹರಿಸಲಾಗಿದೆ. ಇದರೊಂದಿಗೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಅಭಿವೃದ್ಧಿ ಉದ್ದೇಶದಿಂದ ಸರ್ಕಾರ ಮುಂಬರುವ ದಿನಗಳಲ್ಲಿ ಕೈಗೊಳ್ಳಲಿರುವ ಅನುಷ್ಠಾನಗಳ ಕುರಿತು ರಾಜ್ಯಪಾಲರು ಮಾಹಿತಿ ನೀಡಿದರು.   

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

About the Author

Puttaraj K Alur

ಪುಟ್ಟರಾಜ ಕೆ ಆಲೂರ (Puttaraj K Alur) ಅನುಭವಿ ಪತ್ರಕರ್ತರಾಗಿದ್ದು, ಜೀ ಕನ್ನಡ ನ್ಯೂಸ್‌ನ ಡಿಜಿಟಲ್‌ ವಿಭಾಗದಲ್ಲಿ ಸೀನಿಯರ್‌ ಸಬ್‌ ಎಡಿಟರ್ ಆಗಿ ಕೆಲಸ ಮಾಡುತ್ತಿದ್ದಾರೆ. ಮುದ್ರಣ ಮಾಧ್ಯಮ, ಟಿವಿ ಮಾಧ್ಯಮ ಮತ್ತು ಡಿಜಿಟಲ್‌ ಮಾಧ್ಯಮ ಹೀಗೆ ಎಲ್ಲಾ ಮಾಧ್ಯಮಗಳಲ್ಲಿಯೂ 10 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ.  

ಮೈಸೂರಿನ ಪ್ರಮುಖ ದಿನಪತ್ರಿಕೆಗಳಾದ ರಾಜ್ಯಧರ್ಮ, ಮೈಸೂರು ಮಿತ್ರದಲ್ಲಿ, ಬೆಂಗಳೂರಿನಲ್ಲಿ ದಿಗ್ವಿಜಯ ನ್ಯೂಸ್ ಚಾನೆಲ್‌, ದೆಹಲಿಯಲ್ಲಿ ಒಪೇರಾ (Opera) ನ್ಯೂಸ್‌, ಯುಸಿ (UC Browser)ನ್ಯೂಸ್‌, ಒಪೊಯಿ‌ (Opoyi)ನ್ಯೂಸ್‌ ಮತ್ತು ಪ್ರಸ್ತುತ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

...Read More

Trending News