ಬೆಂಗಳೂರು: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ 2001-02 ರಿಂದ 2014-15 ಹಾಗೂ 2018-19, 2019-20 ಸ್ನಾತಕ ಪದವಿ ಮತ್ತು ಎಲ್.ಎಲ್.ಎಂ, ಎಂ.ಬಿ.ಎ (ಲಾ), ಎಂ.ಟಿ.ಎಂ ಪದವಿಯ ಪುನರಾವರ್ತಿತ ವಿದ್ಯಾರ್ಥಿಗಳು ಹಾಗು 2020-21ನೇ ಶೈಕ್ಷಣಿಕ ಸಾಲಿನ (ಜನವರಿ ಆವೃತ್ತಿ) ಪ್ರವೇಶಾತಿ ಪಡೆದ ಸ್ನಾತಕ/ಸ್ನಾತಕೋತ್ತರ ಪದವಿಗಳಾದ ಬಿ.ಎ/ಬಿ.ಕಾಂ, ಬಿ.ಎಲ್.ಐ.ಎಸ್ಸಿ, ಎಂ.ಎ/ಎಂ.ಕಾಂ, ಎಂ.ಬಿ.ಎ, ಎಂ.ಎಲ್.ಐ.ಎಸ್ಸಿ, ಎಲ್ಲಾ ಎಂ.ಎಸ್ಸಿ ಮತ್ತು ಎಲ್ಲಾ ಸ್ನಾತಕ/ಸ್ನಾತಕೋತ್ತರ ಡಿಪ್ಲೋಮಾ, ಸರ್ಟಿಫಿಕೇಟ್ ಕಾರ್ಯಕ್ರಮಗಳ ವಿದ್ಯಾರ್ಥಿಗಳಿಗೆ ವಾರ್ಷಿಕ/ಸೆಮಿಸ್ಟರ್ ಪರೀಕ್ಷೆಗಳಿಗೆ ಪರೀಕ್ಷಾ ಶುಲ್ಕವನ್ನು ರೂ. 200/- ದಂಡ ಶುಲ್ಕದೊಂದಿಗೆ ಪಾವತಿಸಲು ಫೆ.21 ರವರೆಗೆ ಅವಧಿಯನ್ನು ವಿಸ್ತರಿಸಲಾಗಿದೆ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿ: ವಂಶದ ರಾಜಕಾರಣ ಪ್ರಜಾಪ್ರಭುತ್ವದ ದೊಡ್ಡ ಶತ್ರು-ಪ್ರಧಾನಿ ಮೋದಿ
ವಿದ್ಯಾರ್ಥಿಗಳು ವಿಶ್ವವಿದ್ಯಾನಿಲಯದ ಅಧಿಕೃತ ವೆಬ್‍ಸೈಟ್ ನಲ್ಲಿ ಪರೀಕ್ಷಾ ಅರ್ಜಿ ಮತ್ತು ಪರೀಕ್ಷಾ ಶುಲ್ಕವನ್ನು ಎಲ್ಲಾ ಅಗತ್ಯ ವಿವರಗಳೊಂದಿಗೆ ಭರ್ತಿಮಾಡಿ ಕಡ್ಡಾಯವಾಗಿ ಅಂರ್ತಜಾಲದ ಮೂಲಕವೇ ಸಲ್ಲಿಸಬೇಕಾಗಿರುತ್ತದೆ.ಅರ್ಜಿ ಸಲ್ಲಿಸುವಾಗ ತೊಂದರೆಗಳು ಎದುರಾದಲ್ಲಿ ಆನ್-ಲೈನ್ ಸಹಾಯವಾಣಿ 8800335638 ಗೆ ಸಂಪರ್ಕಿಸಬಹುದು.
ಇದನ್ನೂ ಓದಿ: ನಿರುದ್ಯೋಗ, ಸಾಲದ ಸಮಸ್ಯೆ: 2018-20ರಲ್ಲಿ ಎಷ್ಟು ಭಾರತೀಯರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಗೊತ್ತಾ..?
ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ರಾಜ್ಯ ಮುಕ್ತ ವಿಶ್ವ ವಿದ್ಯಾನಿಲಯ ಪ್ರಾದೇಶಿಕ ಕೇಂದ್ರ, ಜಿಲ್ಲಾ ಕ್ರೀಡಾಂಗಣದ ಹತ್ತಿರ, ಪ್ರಾದೇಶಿಕ ವಿಜ್ಞಾನ ಕೇಂದ್ರದ ಹಿಂಭಾಗ,ನಲ್ಲಚೆರವು ಪ್ರದೇಶ ಮೊ.9035143912, 7816051234 ಗೆ ಸಂಪರ್ಕಿಸಲು ಕೋರಲಾಗಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.