/kannada/photo-gallery/shikanji-buttermilk-is-helpful-in-dissolving-stubborn-obesity-around-the-waist-249358 ಒಂದು ಗ್ಲಾಸ್‌ ಮಜ್ಜಿಗೆಗೆ ಈ ಪದಾರ್ಥ ಬೆರೆಸಿ ಕುಡಿಯಿರಿ ಸಾಕು: ಸೊಂಟದ ಸುತ್ತ ತುಂಬಿರುವ ಹಠಮಾರಿ ಬೊಜ್ಜು ಮಂಜು ಕರಗಿದಂತೆ ಕರಗುತ್ತೆ! ಒಂದು ಗ್ಲಾಸ್‌ ಮಜ್ಜಿಗೆಗೆ ಈ ಪದಾರ್ಥ ಬೆರೆಸಿ ಕುಡಿಯಿರಿ ಸಾಕು: ಸೊಂಟದ ಸುತ್ತ ತುಂಬಿರುವ ಹಠಮಾರಿ ಬೊಜ್ಜು ಮಂಜು ಕರಗಿದಂತೆ ಕರಗುತ್ತೆ! 249358

DK Suresh : ಪಠ್ಯಪುಸ್ತಕದಲ್ಲಿ ಮಲಯಾಳಂ ಚಿತ್ರನಟ : ರಾಜ್ಯ ಸರ್ಕಾರ ತರಾಟೆಗೆ ತೆಗೆದುಕೊಂಡ ಎಂಪಿ ಡಿಕೆ ಸುರೇಶ್ 

ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸಂಸದ ಡಿಕೆ ಸುರೇಶ್ ಅವರು ಟ್ವೀಟ್ ಮೂಲಕ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. 

Written by - Channabasava A Kashinakunti | Last Updated : Jan 31, 2022, 08:23 PM IST
  • ಮಲಯಾಳಂ ಚಿತ್ರನಟನ ಫೋಟೋ ಶಾಲಾ ಮಕ್ಕಳ ಪಠ್ಯಪುಸ್ತಕದಲ್ಲಿ ಪ್ರಿಂಟ್
  • ಈ ಪ್ರಮಾದದ ಬಗ್ಗೆ ರಾಜ್ಯ ಸರ್ಕಾರದ ಕಾಲೆಳೆದ ಸ್ವತಃ ಬಾಬನ್
  • ಟ್ವೀಟ್ ಮೂಲಕ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಡಿಕೆ ಸುರೇಶ್
DK Suresh : ಪಠ್ಯಪುಸ್ತಕದಲ್ಲಿ ಮಲಯಾಳಂ ಚಿತ್ರನಟ : ರಾಜ್ಯ ಸರ್ಕಾರ ತರಾಟೆಗೆ ತೆಗೆದುಕೊಂಡ ಎಂಪಿ ಡಿಕೆ ಸುರೇಶ್  title=

ಬೆಂಗಳೂರು : ಮಲಯಾಳಂ ಚಿತ್ರನಟ ಕುಂಚಾಕೋ ಬಾಬನ್(Kunchacko Boban) ಅವರ ಫೋಟೋವನ್ನು ರಾಜ್ಯ ಸರ್ಕಾರವು ಶಾಲಾ ಮಕ್ಕಳ ಪಠ್ಯಪುಸ್ತಕದಲ್ಲಿ ಅಂಚೆಯಣ್ಣನ ಶೀರ್ಷಿಕೆ ಜತೆ ಪ್ರಿಂಟ್ ಹಾಕಿದೆ. ಈ ಪ್ರಮಾದದ ಬಗ್ಗೆ ಸ್ವತಃ ಬಾಬನ್ ಟ್ವೀಟ್ ಮಾಡಿ ರಾಜ್ಯ ಸರ್ಕಾರದ ಕಾಲೆಳೆದಿದ್ದಾರೆ.

ಈ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸಂಸದ ಡಿಕೆ ಸುರೇಶ್(MP Suresh) ಅವರು ಟ್ವೀಟ್ ಮೂಲಕ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. 

ಇದನ್ನೂ ಓದಿ : Anand Singh : ಡಿಕೆಶಿ ಅವರ ಮನೆಗೆ ನಾನು ಹೋಗಬಾರದಾ? : ಸಚಿವ ಆನಂದ್ ಸಿಂಗ್

ಸಂಸದ ಡಿಕೆ ಸುರೇಶ್ ಅವರ ಟ್ವೀಟ್ ನಲ್ಲಿ..

* ಬಿಜೆಪಿ ಆಡಳಿತದಲ್ಲಿ ಶಾಲಾ ಪಠ್ಯಕ್ರಮದ ಗುಣಮಟ್ಟ ಸಂಪೂರ್ಣ ಕುಸಿಯುತ್ತಿದೆ.

* ವಿದ್ಯಾರ್ಥಿಗಳು ಈಗಾಗಲೇ ಕಡಿಮೆ ಪಠ್ಯಕ್ರಮ ಹೊಂದಿದ್ದಾರೆ.

* ಇದರ ಜತೆಗೆ ಬೋಧನೆಗೆ ಸಂಬಂಧಪಟ್ಟಂತೆ ಸರ್ಕಾರದ ಮೇಲ್ವಿಚಾರಣೆ ಕೂಡಾ ಇಲ್ಲ.

* ಸದ್ಯದ ಪಠ್ಯಪುಸ್ತಕಗಲ್ಲಿನ ಚಿತ್ರಗಳನ್ನು ಶಿಕ್ಷಣ ಸಮಿತಿಯು ಯಾವುದೇ ಸಂಶೋಧನೆ ಮಾಡದೆ, ಅಂತರ್ಜಾಲದಿಂದ ತೆಗೆದು ಪ್ರಕಟಿಸುತ್ತಿದೆ.

ಅಂದ ಹಾಗೆ ಶಾಲಾ ಪಠ್ಯಕ್ರಮದಲ್ಲಿರುವ ಚಿತ್ರಗಳು ಮತ್ತು ಪಠ್ಯಗಳನ್ನು ಶಿಕ್ಷಣ ಇಲಾಖೆ(Education Department)ಯಲ್ಲಿ ಸಿದ್ದಪಡಿಸಲಾಗುತ್ತಿದೆಯೋ ಅಥವಾ ಕೇಶವಕೃಪದಲ್ಲೋ ಎಂಬುದನ್ನು ಶಿಕಾಹ್ನ ಸಚಿವ ಬಿಸಿ ನಾಗೇಶ್ ಮತ್ತು ಡಿಕೆ ಸುರೇಶ ಪ್ರಶ್ನಿಸಿದ್ದಾರೆ.

ಬಿಜೆಪಿ ಸರ್ಕಾರದ ತೀವ್ರ ಅಸಡ್ಡೆ ಹಾಗೂ ಅವ್ಯವಸ್ಥೆಯಿಂದ ಕರ್ನಾಟಕವು ಇಡೀ ದೇಶದ ಎದಿರು ತಲೆತಗ್ಗಿಸುವಂತಾಗಿದೆ ಎಂದು ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.