ನವದೆಹಲಿ : ವಿಧಾನ ಪರಿಷತ್‌ನ ಒಂದು ಸ್ಥಾನಕ್ಕೆ ನಡೆಯಲಿರುವ ಚುನಾವಣೆಯಲ್ಲಿ ಬಿಜೆಪಿಯಿಂದ ಮುಸ್ಲಿಂ ಅಭ್ಯರ್ಥಿಗೆ ಟಿಕೆಟ್ ನೀಡುವಂತೆ ರಾಜ್ಯದ ಮೂರು ಪ್ರಭಾವಿ ಸ್ವಾಮೀಜಿಗಳು ಬಿಜೆಪಿ ಹೈ ಕಮಾಂಡ್ ಗೆ ಪತ್ರ ಬರೆದಿದ್ದಾರೆ. ದಾವಣಗೆರೆ ಮೂಲದ ಡಾ.ಸಿಆರ್ ನಸೀರ್ ಅಹ್ಮದ್ ಗೆ ಬಿಜೆಪಿ ಟಿಕೆಟ್ ನೀಡಲು ಮಠಾಧೀಶರು ಪತ್ರದಲ್ಲಿ ಮನವಿ ಮಾಡಿದ್ದಾರೆ.
ಮೂರು ಪ್ರಭಾವಿ ಮಠಗಳ ಮಠಾಧೀಶರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿಗೆ ಪತ್ರ ಬರೆದಿದ್ದು ರಾಜ್ಯ ಯೋಜನಾ ಆಯೋಗದ ಸದಸ್ಯ ಡಾ. ಸಿಆರ್ ನಸೀರ್ ಅಹ್ಮದ್ ಗೆ ಅವಕಾಶ ನೀಡುವಂತೆ ಮನವಿ ಮಾಡಿದ್ದಾರೆ.
ಇದನ್ನೂ ಓದಿ : HD Kumaraswamy : 'ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ನಿಖಿಲ್ ಸ್ಪರ್ಧೆ ಮಾಡಲ್ಲ'
ಕರಾವಳಿ, ಉತ್ತರ ಕರ್ನಾಟಕ, ಹಾಗೂ ಮಧ್ಯ ಕರ್ನಾಟಕದ ಪ್ರಭಾವಿಗಳ ಮಠಗಳ ಮಠಾಧೀಶರು ಈ ಪತ್ರ ಬರೆದಿದ್ದು ಡಾ. ಸಿಆರ್ ನಸೀರ್ ಅಹ್ಮದ್ ಮಠದ ಭಕ್ತರಾಗಿದ್ದು, ಬಹಳಷ್ಟು ವರ್ಷಗಳಿಂದ ಸಾಮಾಜಿಕ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಅವರ ರಾಜಕೀಯ ಅನುಭವವನ್ನು ಬಳಸಿಕೊಳ್ಳುವಂತೆಯೂ ಮನವಿ ಮಾಡಿದ್ದಾರೆ.
ಪ್ರಭಾವಿ ಮಠಾಧೀಶರು ಮನವಿ ಮಾಡಿರುವ ಹಿನ್ನಲೆ ಬಿಜೆಪಿ ಡಾ.ಸಿ.ಆರ್ ನಸೀರ್ ಅಹ್ಮದ್‌ಗೆ ಟಿಕೆಟ್ ನೀಡುತ್ತಾ ಎನ್ನುವ ಕುತೂಹಲ ಮೂಡಿಸಿದೆ. ಈ ಹಿಂದಿನ ಯಾವ ಚುನಾವಣೆಯಲ್ಲೂ ಬಿಜೆಪಿ ಮುಸ್ಲಿಂ ಅಭ್ಯರ್ಥಿಗಳಿಗೆ ಮಣೆ ಹಾಕಿಲ್ಲ ಹೀಗಾಗಿ ಚುನಾವಣಾ ವರ್ಷದಲ್ಲಿ ಅವಕಾಶ ನೀಡುವ ಮೂಲಕ ಅಚ್ಚರಿಯ ನಿರ್ಧಾರ ತೆಗೆದುಕೊಳ್ಳಬಹುದಾ ಎನ್ನುವ ಕುತೂಹಲವಿದೆ.
ಇದನ್ನೂ ಓದಿ : KS Eshwarappa : ಬಿ ರಿಪೋರ್ಟ್ ಹೇಳಿಕೆ ವಿಚಾರ : ಡಿಕೆ ಶಿವಕುಮಾರ್ಗೆ ಸವಾಲೆಸೆದ ಈಶ್ವರಪ್ಪ!
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.