ಬೆಂಗಳೂರು: ಲೋಕಸಭಾ ಚುನಾವಣೆಯ ಮೂರನೇ ಹಂತದ ಮತದಾನ ಏಪ್ರಿಲ್ 23ರಂದು ನಡೆಯಲಿದ್ದು, ಕರ್ನಾಟಕದ 14 ಲೋಕಸಭಾ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. 


COMMERCIAL BREAK
SCROLL TO CONTINUE READING

ಕರ್ನಾಟಕದ ಚಿಕ್ಕೋಡಿ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರ್ಗಿ, ರಾಯಚೂರು, ಬೀದರ್, ಕೊಪ್ಪಳ, ಬಳ್ಳಾರಿ, ಹಾವೇರಿ, ಧಾರವಾಡ, ಉತ್ತರ ಕನ್ನಡ, ದಾವಣಗೆರೆ ಮತ್ತು ಶಿವಮೊಗ್ಗ ಲೋಕಸಭಾ ಕ್ಷೇತ್ರಗಳಿಗೆ ಸುಮಾರು 28,028 ಮತಗಟ್ಟೆಗಳಲ್ಲಿ ನಡೆಯಲಿದೆ. ಅವುಗಳಲ್ಲಿ 5,674 ಸೂಕ್ಷ್ಮ, 22,354 ಸಾಮಾನ್ಯ ಮತಗಟ್ಟೆಗಳಿವೆ. ಚುನಾವಣಾ ಕರ್ತವ್ಯಕ್ಕಾಗಿ ಆಯೋಗ ಒಟ್ಟು 90,997 ಭದ್ರತಾ ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದೆ.


ರಾಜ್ಯದ 14 ಲೋಕಸಭಾ ಕ್ಷೇತ್ರಗಳ 1.22 ಕೋಟಿ ಪುರುಷರು, 1.20 ಕೋಟಿ ಮಹಿಳೆಯರು, 2022 ಲೈಂಗಿಕ ಅಲ್ಪಸಂಖ್ಯಾತರು ಸೇರಿ 2.43 ಕೋಟಿ ಮತದಾರರು 237 ಅಭ್ಯರ್ಥಿಗಳ ಭವಿಷ್ಯ ನಿರ್ಧರಿಸಲಿದ್ದಾರೆ. ಮಂಗಳವಾರ ಬೆಳಗ್ಗೆ 7ರಿಂದ ಸಂಜೆ 6 ಗಂಟೆವರೆಗೆ ಮತದಾನ ನಡೆಯಲಿದೆ. 


ರಾಜಕೀಯ ನಾಯಕರಾದ ಮಲ್ಲಿಕಾರ್ಜುನ ಖರ್ಗೆ, ಅನಂತ್ ಕುಮಾರ್ ಹೆಗಡೆ, ರಮೇಶ್ ಜಿಗಜಿಣಗಿ,  ಈಶ್ವರ್ ಖಂಡ್ರೆ, ಪ್ರಹ್ಲಾದ್ ಜೋಶಿ ಸೇರಿದಂತೆ ಅನೇಕರು ಕಣದಲ್ಲಿದ್ದಾರೆ.