ಚಿತ್ರದುರ್ಗ: ರಾಜ್ಯದ ಸಾರಿಗೆ ನೌಕರರು ತಮ್ಮ ಬೇಡಿಕೆ ಈಡೇರಿಸುವಂತೆ ರಾಜ್ಯ ಸರ್ಕಾರಕ್ಕೆ ಪ್ರತಿಭಟನೆ ಮೂಲಕ ಒತ್ತಡ ಹೇರಿದ್ದರು. ಇದಾದ ಬಳಿಕ ಕೆಲ ಬೇಡಿಕೆಗಳನ್ನು ರಾಜ್ಯ ಸರ್ಕಾರ ಈಡೇರಿಸಿತ್ತು. ಇದಾದ ಬಳಿಕ ಈಗ ಸಾರಿಗೆ ನೌಕರರ ಪ್ರಮುಖ ಬೇಡಿಕೆಗಳಲ್ಲಿ ಒಂದಾದಂತ 6ನೇ ವೇತನ ಆಯೋಗ ಜಾರಿಗೆ ಸಿದ್ಧತೆ ಮಾಡಿಕೊಂಡಿದೆ. ಈ ಮೂಲಕ ಸಾರಿಗೆ ನೌಕರರಿಗೆ ಸಿಹಿಸುದ್ದಿಯನ್ನು ರಾಜ್ಯ ಸರ್ಕಾರ ಸದ್ಯದಲ್ಲೇ ನೀಡುವುದಾಗಿ ಡಿಸಿಎಂ ಹಾಗೂ ಸಾರಿಗೆ ಸಚಿವ ಲಕ್ಷ್ಮಣ್ ಸವದಿ ತಿಳಿಸಿದ್ದಾರೆ.


COMMERCIAL BREAK
SCROLL TO CONTINUE READING

ನಗರದಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡಿದ ಸಚಿವ ಲಕ್ಷ್ಮಣ್ ಸವದಿ(Laxman Savadi),  ರಾಜ್ಯ ಸರ್ಕಾರ ಸಾರಿಗೆ ನೌಕರರಿಗೆ ನೀಡಿರುವಂತ ಕೊಟ್ಟ ಮಾತಿಗೆ ತಪ್ಪೋದಿಲ್ಲ, ರಾಜ್ಯ ಸರ್ಕಾರ ಸಾರಿಗೆ ನೌಕರರಿಗೆ ನೀಡಿರುವಂತ ಕೊಟ್ಟ ಮಾತಿಗೆ ತಪ್ಪೋದಿಲ್ಲ. ಹಿಂದೆ ಸರಿಯುವ ಪ್ರಶ್ನೆಯೂ ಇಲ್ಲ. ಸಾರಿಗೆ ನೌಕರರ ಪ್ರಮುಖ ಬೇಡಿಕೆಗಳಲ್ಲಿ ಒಂದಾದಂತ 6ನೇ ವೇತನ ಆಯೋಗ ಜಾರಿಗೆ ಸರ್ಕಾರ ಸಿದ್ಧವಿದೆ ಎಂದು ತಿಳಿಸಿದರು.


BT Lalita Naik: 'ಮೇ 1ರಂದು ನಾಲ್ಕು ಗಣ್ಯರ ಕೊಲೆ, ಸಿ.ಟಿ ರವಿ ಕೊಲೆಯಾದ್ರೆ ನಾನ್​ ಉಳೀತೇನೆ'


ಇನ್ನೂ ಮುಂದುವರೆದು ಮಾತನಾಡಿದಂತ ಅವರು, ನಾಲ್ಕು ಸಾರಿಗೆ ನಿಗಮದ ಯಾವುದೇ ನೌಕರರು(Transport Employees), ಯಾರೂ ಕೂಡ ಆತಂಕಕ್ಕೆ ಒಳಗಾಗಬಾರದು. ಸಾರಿಗೆ ನಿಗಮವನ್ನು ಇನ್ನಷ್ಟು ಸದೃಢಗೊಳಿಸುವತ್ತ ಕ್ರಮ ಕೈಗೊಳ್ಳಲಾಗುತ್ತದೆ. ಈ ಮೂಲಕ ಹಾನಿಯಿಂದ ಹೊರ ತರುವಂತ ಕ್ರಮಕ್ಕೆ ಸರ್ಕಾರ ಮುಂದಾಗಲಿದೆ ಎಂದರು.


K Sudhakar: ಸೋಂಕು ಹೆಚ್ಚಾದ್ರೆ ನಿಯಂತ್ರಣ ಅಸಾಧ್ಯ: ಸುಧಾಕರ್ ಕೊರೊನಾ 'ಅಲರ್ಟ್'!


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 

ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.