Karnataka Unlock: ಸೋಂಕಿನ ಪ್ರಮಾಣ ಇಳಿಕೆ, ಮತ್ತಷ್ಟು ವಿನಾಯಿತಿ ಘೋಷಿಸುವ ಸಾಧ್ಯತೆ..?

ಹಂತ ಹಂತವಾಗಿ ಕೊರೊನಾ ನಿರ್ಬಂಧಗಳನ್ನು ಸಡಿಲಿಕೆ ಮಾಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.

Written by - Zee Kannada News Desk | Last Updated : Jul 13, 2021, 05:37 PM IST
  • ಹಂತ ಹಂತವಾಗಿ ಕೊರೊನಾ ನಿರ್ಬಂಧಗಳನ್ನು ತೆರವುಗೊಳಿಸಲು ಸರ್ಕಾರ ಚಿಂತನೆ
  • ನೈಟ್ ಕರ್ಫೂ ತೆಗೆದುಹಾಕಿ, ಮತ್ತೆ ಪಬ್‌ಗಳನ್ನುತೆರೆಯಲು ಅವಕಾಶ ಸಾಧ್ಯತೆ
  • ಮಲ್ಟಿಪ್ಲೆಕ್ಸ್, ಚಿತ್ರಮಂದಿರ, ಮಾಲ್ ಸೇರಿ ಆರ್ಥಿಕ ಚಟುವಟಿಕೆಗಳಿಗೂ ಅವಕಾಶ?
Karnataka Unlock: ಸೋಂಕಿನ ಪ್ರಮಾಣ ಇಳಿಕೆ, ಮತ್ತಷ್ಟು ವಿನಾಯಿತಿ ಘೋಷಿಸುವ ಸಾಧ್ಯತೆ..? title=
ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಮಾಣ ಗಮನಾರ್ಹ ಇಳಿಕೆ

ಬೆಂಗಳೂರು: ಕೊರೊನಾ ಸೋಂಕಿತರ ಸಂಖ್ಯೆಯಲ್ಲಿ ಗಣನೀಯವಾಗಿ ಇಳಿಕೆಯಾಗುತ್ತಿರುವ ಹಿನ್ನೆಲೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ(BS Yediyurappa) ನವರು ರಾಜ್ಯದ ಜನರಿಗೆ ಬಿಗ್ ರಿಲೀಫ್ ನೀಡುವ ಸಾಧ್ಯತೆ ಇದೆ. ದಿನದಿಂದ ದಿನಕ್ಕೆ ರಾಜ್ಯದಲ್ಲಿ ಕೋವಿಡ್ ಸೋಂಕಿನ ಪ್ರಮಾಣ ಇಳಿಮುಖವಾಗುತ್ತಿದ್ದು, ಸ್ಥಗಿತಗೊಂಡಿರುವ ಬಹುತೇಕ ಆರ್ಥಿಕ ಚಟುವಟಿಕೆಗಳು ಗರಿಗೆದರಿವೆ. ಇದೀಗ ಹಂತ ಹಂತವಾಗಿ ಕೊರೊನಾ ನಿರ್ಬಂಧಗಳನ್ನು ಸಡಿಲಿಕೆ ಮಾಡಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಕೊರೊನಾ ಪ್ರಕರಣ(CoronaVirus)ಗಳ ಸಂಖ್ಯೆಯಲ್ಲಿ ಗಮನಾರ್ಹ ಕುಸಿತ ಕಂಡಿದೆ. ಮುಂದಿನ ವಾರದಿಂದ ಲಾಕ್‌ಡೌನ್‌ ನಿರ್ಬಂಧಗಳನ್ನು ತೆರವುಗೊಳಿಸಿ ಜನತೆಗೆ ಮತ್ತಷ್ಟು ವಿನಾಯತಿ ಸಿಗುವ ಸಾಧ್ಯತೆ ಇದೆ. ಕೆಲ ಜಿಲ್ಲೆಗಳಲ್ಲಿ ಜಾರಿಯಲ್ಲಿರುವ ನೈಟ್ ಕರ್ಫ್ಯೂವನ್ನು ಜುಲೈ 19ರಿಂದ ತೆಗೆದುಹಾಕುವುದು ಮತ್ತು ಪಬ್‌ಗಳನ್ನು ಮತ್ತೆ ತೆರೆಯುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ. 

ಇದನ್ನೂ ಓದಿ: BankingExams: ‘ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬೆದರಿದ ಇಲಿ’

ಶೇ.50ರಷ್ಟು ಆಸನ ಸಾಮರ್ಥ್ಯದೊಂದಿಗೆ ಮಲ್ಟಿಪ್ಲೆಕ್ಸ್ ಮತ್ತು ಚಿತ್ರಮಂದಿಗಳನ್ನು ತೆರೆಯಲು ಸರ್ಕಾರ ಅನುಮತಿ ನೀಡುವ ಸಾಧ್ಯತೆಯಿದೆ. ಮಾಲ್ ಗಳಿಗೆ ಕಳೆದೊಂದು ವರ್ಷದಿಂದ ಬಾಗಿಲು ಹಾಕಿ ಸಂಕಷ್ಟಕ್ಕೆ ಸಿಲುಕಿರುವ ಮಾಲೀಕರು ಸಿಎಂ ಬಿಎಸ್‌ವೈ ಭೇಟಿಯಾಗಿ ವ್ಯಾಪಾರಕ್ಕೆ ಅನುವು ಮಾಡಿಕೊಡಬೇಕೆಂದು ವಿನಂತಿಸಿಕೊಂಡಿದ್ದರು. ಇದಕ್ಕೆ ಸಿಎಂ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಮಾಲ್ ತೆರೆಯಲು ಕೂಡ ಅನುಮತಿ ಸಿಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ಕೆಲ ದಿನಗಳ ಹಿಂದೆ ಸುದ್ದಿಗಾರರೊಂದಿಗೆ ಮಾತನಾಡಿದ್ದ ಗೃಹಸಚಿವ ಬಸವರಾಜ್ ಬೊಮ್ಮಾಯಿ(Basavaraj Bommai), ಹಂತ ಹಂತವಾಗಿ ಕೋವಿಡ್ ನಿರ್ಬಂಧಗಳನ್ನು ತೆರವುಗೊಳಿಸಿ, ರಾಜ್ಯದ ಜನತೆಗೆ ವಿನಾಯತಿ ನೀಡುವ ವಿಚಾರ ಸರ್ಕಾರದ ಮುಂದಿದೆ. ಶೀಘ್ರವೇ ಸಂಪುಟದ ಸಚಿವರೊಂದಿಗೆ ಸಭೆ ನಡೆಸಿ ಸಿಎಂ ಬಿಎಸ್‌ವೈ ಅಂತಿಮ ನಿರ್ಧಾರವನ್ನು ಪ್ರಕಟಿಸಲಿದ್ದಾರೆಂದು ತಿಳಿಸಿದ್ದರು.   

ಇದನ್ನೂ ಓದಿ: Monsoon 2021 : ಇಂದಿನಿಂದ ಜು.16ರವರೆಗೂ ರಾಜ್ಯದಲ್ಲಿ ಭಾರೀ ಮಳೆ!

ಕಳೆದ ವಾರ ರಾಜ್ಯ ಸರ್ಕಾರ ವಾರಾಂತ್ಯದ ಕರ್ಫ್ಯೂ ತೆಗೆದುಹಾಕಿ, ಧಾರ್ಮಿಕ ಕೇಂದ್ರಗಳನ್ನು ಮತ್ತೆ ತೆರೆಯಲು ಅವಕಾಶ ನೀಡಿತ್ತು. ನೈಟ್ ಕರ್ಫ್ಯೂ(Night Curfew) ಸಮಯವನ್ನು ಸಂಜೆ 7 ರಿಂದ ಬೆಳಗ್ಗೆ 5ರ ಬದಲಾಗಿ ರಾತ್ರಿ 9 ರಿಂದ ಬೆಳಗ್ಗೆ 5ರವರೆಗೆ ಸಡಿಲಿಸಲಾಗಿತ್ತು. ಇದು ಜುಲೈ 5 ರಿಂದ ಮುಂದಿನ 15 ದಿನಗಳವರೆ ಜಾರಿಯಲ್ಲಿರುತ್ತದೆ ಎಂದು ಸಿಎಂ ತಿಳಿಸಿದ್ದರು. 

ಕರ್ನಾಟಕ ಲಾಕ್‌ಡೌನ್: ವಿನಾಯತಿ/ ನಿರ್ಬಂಧಗಳ ಪಟ್ಟಿ 

1) ಅಗತ್ಯ ಚಟುವಟಿಕೆಗಳಿಗೆ ಅವಕಾಶವಿದೆ.
2) ಮಲ್ಟಿಪ್ಲೆಕ್ಸ್, ಚಿತ್ರಮಂದಿರಗಳು ಮತ್ತು ಪಬ್‌ಗಳನ್ನು ಬಂದ್ ಮಾಡಲಾಗಿದೆ.
3) ತರಬೇತಿ ಉದ್ದೇಶಗಳಿಗಾಗಿ ಮಾತ್ರ ಈಜುಕೊಳಗಳು ತೆರೆದಿರುತ್ತವೆ.
4) ಅಭ್ಯಾಸದ ಉದ್ದೇಶಕ್ಕಾಗಿ ಕ್ರೀಡಾ ಸಂಕೀರ್ಣಗಳು ಮತ್ತು ಕ್ರೀಡಾಂಗಣಗಳನ್ನು ತೆರೆಯಲಾಗುತ್ತದೆ.
5) ಸಾಮಾಜಿಕ, ರಾಜಕೀಯ, ಮನರಂಜನೆ, ಶೈಕ್ಷಣಿಕ, ಸಾಂಸ್ಕೃತಿಕ, ಧಾರ್ಮಿಕ ಕಾರ್ಯಗಳು ಮತ್ತು ದೊಡ್ಡ ಸಭೆಗಳು ನಿಷೇಧಿತವಾಗಿವೆ.
6) ವಿವಾಹ ಮತ್ತು ಕುಟುಂಬ ಕಾರ್ಯಗಳಿಗೆ 100 ಜನರಿಗೆ ಮಾತ್ರ ಅನುಮತಿಸಲಾಗಿದೆ.
7) ಅಂತ್ಯಕ್ರಿಯೆ/ಶವಸಂಸ್ಕಾರದಲ್ಲಿ ಭಾಗಿಯಾಗಲು ಗರಿಷ್ಠ 20 ಜನರಿಗೆ ಮಾತ ಅನುಮತಿ.
8) ಭಕ್ತರ ದರ್ಶನಕ್ಕಾಗಿ ಮಾತ್ರ  ಧಾರ್ಮಿಕ ಕೇಂದ್ರಗಳನ್ನು ತೆರೆಯಲು ಅನುಮತಿ ನೀಡಿದ್ದು, ಸೇವಾಕಾರ್ಯ ಸೇರಿ ಇತರ ಚಟುವಟಿಕೆಗಳಿಗೆ ನಿರ್ಬಂಧವಿರುತ್ತದೆ. 
9) ಆಸನಗಳ ಸಾಮರ್ಥ್ಯಕ್ಕೆ ತಕ್ಕಂತೆ ಸಾರ್ವಜನಿಕ ಸಾರಿಗೆ ಕಾರ್ಯನಿರ್ವಹಿಸಲು ಅನುಮತಿಸಲಾಗಿದ್ದು, ನಿಂತುಕೊಂಡು ಪ್ರಯಾಣಿಸುವುನ್ನು ನಿಷೇಧಿಸಲಾಗಿದೆ. 
10) ಮುಂದಿನ ಆದೇಶದವರೆಗೆ ಶಿಕ್ಷಣ ಸಂಸ್ಥೆಗಳು, ಶಾಲೆಗಳು ಮತ್ತು ಕಾಲೇಜುಗಳನ್ನು ಬಂದ್ ಮಾಡಲಾಗಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

Trending News