Karnataka Unlock 5.O : ರಾಜ್ಯದಲ್ಲಿ ಮತ್ತೆ ಅನ್ಲಾಕ್ 5.O : ನಾಳೆಯಿಂದ ಯಾವುದುಕ್ಕೆಲ್ಲ ಸಡಿಲಿಕೆ?
ದೇವಾಲಯ, ಮಸೀದಿ, ಚರ್ಚು, ಗುರುದ್ವಾರಗಳು ಮತ್ತು ಇತರ ಧಾರ್ಮಿಕ ಸ್ಥಳಗಳಲ್ಲಿ ಪೂಜೆಗೆ ಮುಕ್ತ ಅನುಮತಿ ಮತ್ತು ಪೂಜಾ ಸ್ಥಳಗಳಿಗೆ ಸಂಬಂಧಿಸಿದ ಚಟುವಟಿಕೆಗಳನ್ನು ಕೈಗೊಳ್ಳಲು ನಾಳೆಯಿಂದ ಅನುಮತಿಸಲಾಗಿದೆ ಕೋವಿಡ್-19 ಸೂಕ್ತ ಮಾರ್ಗ ಸೂಚಿಗಳನ್ನ ಮತ್ತು ಸಂಬಂಧಪಟ್ಟ ಇಲಾಖೆಯಿಂದ ಹೊರಡಿಸಲಾಗಿದೆ.
ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಪ್ರಕರಣಗಳು ಹೆಚ್ಚಾದ ಕಾರಣ ಲಾಕ್ ಡೌನ್ ಮಾಡಲಾಗಿತ್ತು. ಸಧ್ಯ ಪ್ರಕರಣಗಳ ಸಂಖ್ಯೆ ಕಡಿಮೆಯಾಗುತ್ತ ಬಂದಿವೆ. ಆದ್ದರಿಂದ ರಾಜ್ಯ ಸರ್ಕಾರ ಲಾಕ್ ಡೌನ್ ಮಾರ್ಗಸೂಚಿಗಳನ್ನ ಸಡಿಲಕೆ ಮಾಡುತ್ತಾ ಬರುತ್ತದೆ. ಇಂದು ಮತ್ತೆ ರಾಜ್ಯ ಸರ್ಕಾರ 'ಅನ್ಲಾಕ್ 5.O' ಅಡಿಯಲ್ಲಿ ಮತ್ತಷ್ಟು ವಲಯಗಳಿಗೆ ಸಡಿಲಿಕೆ ಘೋಷಿಸಿದೆ.
ರಾಜ್ಯ ಪ್ರಧಾನ ಕಾರ್ಯದರ್ಶಿ ಹೊರಡಿಸಿದ ಆದೇಶದಲ್ಲಿ, ದೇವಾಲಯ, ಮಸೀದಿ, ಚರ್ಚು, ಗುರುದ್ವಾರಗಳು ಮತ್ತು ಇತರ ಧಾರ್ಮಿಕ ಸ್ಥಳಗಳಲ್ಲಿ ಪೂಜೆಗೆ ಮುಕ್ತ ಅನುಮತಿ ಮತ್ತು ಪೂಜಾ ಸ್ಥಳಗಳಿಗೆ ಸಂಬಂಧಿಸಿದ ಚಟುವಟಿಕೆಗಳನ್ನು ಕೈಗೊಳ್ಳಲು ನಾಳೆಯಿಂದ ಅನುಮತಿಸಲಾಗಿದೆ ಕೋವಿಡ್-19(Covid-19) ಸೂಕ್ತ ಮಾರ್ಗ ಸೂಚಿಗಳನ್ನ ಮತ್ತು ಸಂಬಂಧಪಟ್ಟ ಇಲಾಖೆಯಿಂದ ಹೊರಡಿಸಲಾಗಿದೆ.
ಇದನ್ನೂ ಓದಿ : Heavy Rain in Karnataka : ರಾಜ್ಯದಲ್ಲಿ ಭಾರೀ ಮಳೆಯಿಂದ ಪ್ರವಾಹ ಭೀತಿ : 7 ಜಿಲ್ಲೆಗಳಲ್ಲಿ 'ರೆಡ್ ಅಲರ್ಟ್'
ಕೋವಿಡ್-19 ಸೂಕ್ತ ಮಾರ್ಗಸೂಚಿಗಳನ್ನು(COVID-19 Protocols) ಕಟ್ಟುನಿಟ್ಟಾಗಿ ಪಾಲಿಸುವ ಕ್ರಮದೊಂದಿಗೆ ಮನೋರಂಜನಾ ಉದ್ಯಾನವನಗಳು ಮತ್ತು ಅಂತಹುದೇ ಸ್ಥಳಗಳನ್ನು ಮತ್ತೆ ತೆರೆಯಲು ಅನುಮತಿ ನೀಡಲಾಗಿದೆ. ಆದ್ರೆ, ಜಲ ಕ್ರೀಡೆ / ನೀರು-ಸಂಬಂಧಿತ ಸಾಹಸ ಚಟುವಟಿಕೆಗಳಿಗೆ ಅನುಮತಿ ನೀಡಿಲ್ಲ.
ಇದಕ್ಕೂ ಮೊದಲು, ಜುಲೈ 18 ರಂದು ರಾಜ್ಯ ಸರ್ಕಾರ(Karnataka Govt)ವು ಕೋವಿಡ್-19 ಸಂಬಂಧಿತ ಲಾಕ್‌ಡೌನ್ ಮಾರ್ಗಸೂಚಿಗಳನ್ನ ಮತ್ತಷ್ಟು ಸಡಿಲಗೊಳಿಸಿ, ಚಿತ್ರಮಂದಿರಗಳನ್ನು ತೆರೆಯಲು ಅವಕಾಶ ಮಾಡಿಕೊಟ್ಟಿತು ಮತ್ತು ಜುಲೈ 19 ರಿಂದ ನೈಟ್ ಕರ್ಫ್ಯೂ ಅವಧಿಯನ್ನು ಒಂದು ಗಂಟೆ ಕಡಿಮೆ ಮಾಡಿ ಆದೇಶ ನೀಡಲಾಗಿತ್ತು.
ಇದನ್ನೂ ಓದಿ : ವಲಸಿಗ ಸಚಿವರು ವಾಪಸ್ ಬಂದರೂ ಪಕ್ಷಕ್ಕೆ ಸೇರಿಸಿಕೊಳ್ಳುವುದಿಲ್ಲ: ಸಿದ್ದರಾಮಯ್ಯ
ಕಾಲೇಜು ಮತ್ತು ವಿಶ್ವವಿದ್ಯಾನಿಲಯ(Colleges and Universities)ಗಳಂತಹ ಉನ್ನತ ಶಿಕ್ಷಣ ಸಂಸ್ಥೆಗಳನ್ನ ಜುಲೈ 26 ರಿಂದ ಪ್ರಾರಂಭಿಸಲು ಅನುಮತಿ ನೀಡಲಾಗಿದೆ. ಸಿಎಂ ಬಿಎಸ್ ಯಡಿಯುರಪ್ಪ ಅವರ ಅಧ್ಯಕ್ಷತೆಯಲ್ಲಿ ಹಿರಿಯ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಅವರ ನಿವಾಸದಲ್ಲಿ ಸಭೆ ನಡೆಸಲಾಯಿತು.
ಕೋವಿಡ್ -19 ಮಾರ್ಗಸೂಚಿಗಳ ಪ್ರಕಾರ ಚಿತ್ರಮಂದಿರಗಳು ಶೇ. 50 ರಷ್ಟು ಉದ್ಯೋಗಿಗಳೊಂದಿಗೆ ಕಾರ್ಯನಿರ್ವಹಿಸಲು ಅವಕಾಶ ನೀಡಲಾಗಿದೆ. ಕಾಲೇಜುಗಳು(Colleges) ಮತ್ತು ವಿಶ್ವವಿದ್ಯಾಲಯಗಳನ್ನು ಪುನಃ ತೆರೆಯುವಾಗ, ಕನಿಷ್ಠ ಒಂದು ಡೋಸ್ ಲಸಿಕೆ ಪಡೆದ ಸಿಬ್ಬಂದಿಗಳು ಮತ್ತು ತರಗತಿಗಳಿಗೆ ವಿದ್ಯಾರ್ಥಿಗಳಿಗೆ ಹಾಜರಾಗಲು ಅವಕಾಶ ನೀಡಲಾಗಿದೆ. ಏಪ್ರಿಲ್ 27 ರಂದು ರಾಜ್ಯ ಸರ್ಕಾರ ಕೋವಿಡ್ -19 ಮಾರ್ಗಸೂಚಿಗಳನ್ನ ವಿಧಿಸಿತ್ತು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ