Karnataka Weather Alert: ರಾಜ್ಯದ 6 ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಣೆ..!
Karnataka Weather Alert: ರಾಜ್ಯದಲ್ಲಿ ಬಿಸಿಲಿನ ತಾಪಮಾನ ಹೆಚ್ಚುತ್ತಿರುವುದಿಂದ ಉತ್ತರ ಕರ್ನಾಟಕದ 6 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಮುಂದಿನ ೫ ದಿನಗಳ ಕಾಲ ರೆಡ್ ಅಲರ್ಟ್ ಎಚ್ಚರಿಕೆ ನೀಡಿದೆ.
Karnataka Weather Alert: ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ದಿನದಿಂದ ದಿನಕ್ಕೆ ಬಿಸಿಲಿನ ತಾಪವು ಏರುತ್ತಲೇ ಇದೆ. ಬಿಲಿಸಿನ ಹೊಡೆತಕ್ಕೆ ರಾಜ್ಯದ ಜನರು ತತ್ತರಿಸಿ ಹೋಗಿದ್ದಾರೆ. ಬೆಂಗಳೂರಿನಲ್ಲಿ ಅತಿಹೆಚ್ಚು ತಾಪಮಾನ 41.8 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಕಳೆದೆರಡು ದಿನಗಳಿಂದ ರಾಜಧಾನಿಯಲ್ಲಿ ಮಳೆಯಾಗುತ್ತಿದ್ದು, ಸಿಲಿಕಾನ್ ಮಂದಿ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.
ರಾಜ್ಯದಲ್ಲಿ ಬಿಸಿಲಿನ ತಾಪಮಾನ ಹೆಚ್ಚುತ್ತಿರುವುದಿಂದ ಉತ್ತರ ಕರ್ನಾಟಕದ 6 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಮುಂದಿನ 5 ದಿನಗಳ ಕಾಲ ರೆಡ್ ಅಲರ್ಟ್ ಎಚ್ಚರಿಕೆ ನೀಡಿದೆ. ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ ಮತ್ತು ಕೊಪ್ಪಳ ಜಿಲ್ಲೆಗಳಿಗೆ ರೆಡ್ ಅಲರ್ಟ್ ಹಾಗೂ ಕಲಬುರಗಿ, ಚಿತ್ರದುರ್ಗ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ತುಮಕೂರು ಮತ್ತು ಯಾದಗಿರಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಇದನ್ನೂ ಓದಿ: Prajwal Revanna case: ಎಚ್.ಡಿ.ರೇವಣ್ಣ ಮನೆಯಲ್ಲಿ SIT ಅಧಿಕಾರಿಗಳಿಂದ ಸ್ಥಳ ಮಹಜರು!
ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕು ಹಾಗೂ ಸುತ್ತಲಿನ ಪರಿಸರದಲ್ಲಿ ಗರಿಷ್ಠ 46.7 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕಲಬುರಗಿ ಜಿಲ್ಲೆಯಲ್ಲಿ ಬಿಸಿಲಿನ ಅಲೆಗಳು ರಾಚುತ್ತಿದ್ದು, ಮಧ್ಯಾಹ್ನ 12ರಿಂದ ಸಂಜೆ 3ಗಂಟೆವರೆಗೆ ಹೊರಗಡೆ ಹೋಗದೆ ನೆರಳಲ್ಲಿ ಇರುವಂತೆ ಸೂಚಿಸಲಾಗಿದೆ. ಸಾರ್ವಜನಿಕರ ಆರೋಗ್ಯ ಹಿತದೃಷ್ಟಿಯಿಂದ ಸಂರಕ್ಷಣಾ ಸಲಹೆಗಳನ್ನು ಪಾಲಿಸಬೇಕೆಂದು ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆ ಮನವಿ ಮಾಡಿದೆ.
ಬಿಸಿಲಿನ ಹೊಡೆತಕ್ಕೆ ರಾಜ್ಯದ ಜನರು ಸುಸ್ತಾಗಿ ಹೋಗಿದ್ದಾರೆ. ಹೀಗಾಗಿ ಸಾಕಷ್ಟು ಪ್ರಮಾಣದಲ್ಲಿ ನೀರು ಕುಡಿಯಬೇಕು, ಹಗುರ, ತಿಳಿ ಬಣ್ಣದ, ಸಡಿಲವಾದ ಕಾಟನ್ ಬಟ್ಟೆಗಳನ್ನು ಧರಿಸಬೇಕು. ಸಾಧ್ಯವಾದಷ್ಟು ಮನೆಯೊಳಗೆ ಇರಬೇಕು ಎಂದು ಹೇಳಲಾಗಿದೆ. ವಿಶೇಷವಾಗಿ ಮಕ್ಕಳು, ಹಿರಿಯರು, ಮಧುಮೇಹ ಹಾಗೂ ಬಿಪಿ ಇರುವವರು ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು.
ಇದನ್ನೂ ಓದಿ: Lokshabha Elections 2024: ಪ್ರಧಾನಿ ಮೋದಿ & ಬಿಜೆಪಿಗೆ ‘ಬೆಲೆ ಏರಿಕೆ’ಯ ಬಾಣ ಬಿಟ್ಟ ಕಾಂಗ್ರೆಸ್..!
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.