Karnataka Weather: ರಾಜ್ಯದ ಈ ಭಾಗಗಳಲ್ಲಿ ಮಳೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಉತ್ತರಕನ್ನಡ ಜಿಲ್ಲೆ ಸಿದ್ಧಾಪುರ ತಾಲೂಕಿನ ಕೊರ್ಲಕೈನಲ್ಲಿ 68 ಮಿ.ಮೀ ಮಳೆಯಾಗಿದೆ.

Written by - Zee Kannada News Desk | Last Updated : Aug 2, 2021, 12:41 PM IST
  • ರಾಜ್ಯದ ಕರಾವಳಿ, ಮಲೆನಾಡು ಭಾಗ, ದಕ್ಷಿಣ ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
  • ರಾಜ್ಯದಲ್ಲಿ ನಿರಂತರವಾಗಿ ಸುರಿದ ಮಳೆಯಿಂದಾಗಿ ಅಪಾರ ಪ್ರಮಾಣದ ಆಸ್ತಿ-ಪಾಸ್ತಿಗೆ ಹಾನಿಯುಂಟಾಗಿದೆ.
  • ಮಳೆಯಿಂದ ಮನೆ ಸಂಪೂರ್ಣ ಬಿದ್ದಿದ್ದರೆ 5 ಲಕ್ಷ ರೂ. ಪರಿಹಾರ ನೀಡುವುದಾಗಿ ಸಿಎಂ ಬೊಮ್ಮಾಯಿ ಘೋಷಿಸಿದ್ದಾರೆ
Karnataka Weather: ರಾಜ್ಯದ ಈ ಭಾಗಗಳಲ್ಲಿ ಮಳೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ title=
ಕರ್ನಾಟಕದ ಕೆಲ ಭಾಗಗಳಲ್ಲಿ ಮಳೆ ಸಾಧ್ಯತೆ ಇದೆ

ಬೆಂಗಳೂರು: ರಾಜ್ಯದಲ್ಲಿ ಕೆಲವು ದಿನಗಳ ಕಾಲ ವರುಣನ ಆರ್ಭಟ(Heavy Rainfall) ಜೋರಾಗಿತ್ತು. ಮುಂಗಾರು ಮಳೆಯ ಅಬ್ಬರಕ್ಕೆ ಕರ್ನಾಟಕ(Karnataka)ದ ಜನತೆ ತತ್ತರಿಸಿ ಹೋಗಿತ್ತು. ಎಡಬಿಡದೆ ಸುರಿಯುತ್ತಿದ್ದ ವರುಣನ ಆರ್ಭಟಕ್ಕೆ ಇದೀಗ ಕೊಂಚ ವಿರಾಮ ಸಿಕ್ಕಿದೆ. ಮಳೆಯ ಆರ್ಭಟದಿಂದ ಮಲೆನಾಡು, ಕರಾವಳಿ ಮತ್ತು ಉತ್ತರ ಕರ್ನಾಟಕದ ಕೆಲವು ಭಾಗಗಳಲ್ಲಿ ದೊಡ್ಡ ಅವಾಂತರವೇ ಸೃಷ್ಟಿಯಾಗಿತ್ತು. ಮಳೆ ಹೊಡೆತಕ್ಕೆ ನದಿಗಳು ಪ್ರವಾಹದ ಮಟ್ಟ ಮೀರಿ ಹರಿಯುತ್ತಿದ್ದು, ಜನರಲ್ಲಿ ಬಹುದೊಡ್ಡ ಆತಂಕ ಮೂಡಿತ್ತು.

ಭಾರೀ ಮಳೆಯಿಂದ ರಾಜ್ಯದ ಬಹುತೇಕ ಡ್ಯಾಂಗಳು ಭರ್ತಿಯಾಗಿದ್ದು, ಹೆಚ್ಚುವರಿ ನೀರನ್ನು ನದಿಗಳಿಗೆ ಬಿಡಲಾಗಿತ್ತು. ಪರಿಣಾಮ ನದಿಪಾತ್ರದ ಜನರು ಪ್ರವಾಹ(Flood)ದ ಭೀತಿಯಲ್ಲಿಯೇ ಕಾಲಕಳೆಯುವಂತಾಗಿತ್ತು. ಇದೀಗ ನದಿ ಹರಿವಿನ ಪ್ರಮಾಣವು ಕಡಿಮೆಯಾಗಿದ್ದು, ಪ್ರವಾಹ ಭೀತಿ ತಗ್ಗಿದೆ. ಹೀಗಾಗಿ ನದಿಪಾತ್ರದ ಜನರು ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ. ಇನ್ನೂ ನಿರಂತರವಾಗಿ ಸುರಿದ ಮಳೆಯಿಂದಾಗಿ ರಾಜ್ಯದ ಅನೇಕ ಕಡೆ ಮನೆಗಳು ಕುಸಿದಿದ್ದವು. ಕೆಲವೆಡೆ ಸೇತುಗಳು ನೆಲಕಚ್ಚಿದ ಪರಿಣಾಮ ಸಂಚಾರವೇ ಬಂದ್ ಆಗಿತ್ತು. ತಗ್ಗುಪ್ರದೇಶಗಳಿಗೆ ನೀರು ನುಗ್ಗಿ ದೊಡ್ಡ ಅವಾಂತರವೇ ಸೃಷ್ಟಿಯಾಗಿತ್ತು.

ಇದನ್ನೂ ಓದಿ: Basavaraja Bommai : ಕೇಂದ್ರದ 6 ಸಚಿವರೊಂದಿಗೆ ಪಿಎಂ ಮೋದಿ ಭೇಟಿಯಾದ ಸಿಎಂ ಬೊಮ್ಮಾಯಿ

ಮಳೆಯ ಪರಿಣಾಮ ಹಳ್ಳ-ಕೊಳ್ಳಗಳು ತುಂಬಿ ಹರಿದ ಪರಿಣಾಮ ರೈತರ ಹೊಲ-ಗದ್ದೆಗಳಿಗೆ ನೀರು ನುಗ್ಗಿ ಅಪಾರ ಪ್ರಮಾಣದ ಬೆಳೆನಾಶವಾಗಿತ್ತು. ವರುಣನ ಆರ್ಭಟ ತಗ್ಗಿದ್ದರೂ ಮಳೆಯಿಂದಾಗಿರುವ ಅಪಾರ ಪ್ರಮಾಣದ ಹಾನಿಯಿಂದ ಸುಧಾರಿಸಿಕೊಳ್ಳಲು ಸಾಕಷ್ಟು ಸಮಯ ಬೇಕಿದೆ. ಬಿ.ಎಸ್.ಯಡಿಯೂರಪ್ಪ(BS Yediyurappa)ನವರು ಸಿಎಂ ಆಗಿದ್ದಾಗ ಬೆಳಗಾವಿಯ ಪ್ರವಾಹಪೀಡಿತ ಪ್ರದೇಶಗಳಲ್ಲಿ ವೈಮಾನಿಕ ಸಮೀಕ್ಷೆ ನಡೆಸಿದ್ದರು. ನೂತನ ಸಿಎಂ ಆಗಿ ಬಸವರಾಜ್ ಬೊಮ್ಮಾಯಿ(Basavaraj Bommai) ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ ಅವರು ಕೂಡ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಸ್ಥಿತಿ-ಗತಿಯನ್ನು ಪರಿಶೀಲಿಸಿದ್ದರು.   

ಇಂದು ಸೇರಿದಂತೆ ಮುಂದಿನ ಕೆಲವು ದಿನಗಳಲ್ಲಿ ರಾಜ್ಯದ ಕರಾವಳಿ ಜಿಲ್ಲೆಯ ವಿವಿಧ ಪ್ರದೇಶಗಳಲ್ಲಿ ಸಾಧಾರಣ ಮಳೆ(Rainfall)ಯಾಗುವ ಸಾಧ್ಯತೆ ಇದೆ. ಮಲೆನಾಡು ಜಿಲ್ಲೆಗಳಲ್ಲಿ ಚದುರಿದ ಮಳೆ ಮತ್ತು ಉತ್ತರ ಒಳನಾಡು, ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರವು ಮುನ್ಸೂಚನೆ ನೀಡಿದೆ. ಇನ್ನುಳಿದ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯುತ್ತದೆ ಎಂದು ಮಾಹಿತಿ ನೀಡಿದೆ.

ಇದನ್ನೂ ಓದಿ: JDS ಬಲಿಷ್ಠ ಪಕ್ಷವೆಂದ ಅನಂತ್ ಕುಮಾರ್ ಪುತ್ರಿ: ವ್ಯಾಪಕ ಚರ್ಚೆಗೆ ಕಾರಣವಾಯ್ತು ಟ್ವೀಟ್..!

ಉತ್ತರಕನ್ನಡ ಜಿಲ್ಲೆ ಸಿದ್ಧಾಪುರ ತಾಲೂಕಿನ ಕೊರ್ಲಕೈ(Korlakai)ನಲ್ಲಿ 68 ಮಿ.ಮೀ ಮಳೆಯಾಗಿದೆ. ರಾಜ್ಯದಲ್ಲಿ ಇತ್ತೀಚೆಗೆ ಅತೀಹೆಚ್ಚು ಮಳೆಯಾಗಿರುವ ಪ್ರದೇಶ ಇದಾಗಿದೆ ಎಂದು ತಿಳಿದುಬಂದಿದೆ. ರಾಜ್ಯದ ಕರಾವಳಿ ಭಾಗ, ಮಲೆನಾಡು ಭಾಗದ ಜಿಲ್ಲೆಗಳಲ್ಲಿ, ದಕ್ಷಿಣ ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಅಂತಾ ಹವಾಮಾನ ಇಲಾಖೆ ತಿಳಿಸಿದೆ. ಕಳೆದ 2 ವಾರಗಳಿಂದ ಉತ್ತರಕರ್ನಾಟಕ ಭಾಗದಲ್ಲಿ ಸುರಿದ ಧಾರಾಕಾರ ಮಳೆಯಿಂದ ಸಾವಿರಾರು ಜನ ನಿರಾಶ್ರಿತರಾಗಿದ್ದಾರೆ. ಮಳೆ ಹೊಡೆತಕ್ಕೆ ಸಿಲುಕಿ 10ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದು, ಅಪಾರ ಪ್ರಮಾಣದ ಆಸ್ತಿ-ಪಾಸ್ತಿಗೆ ಹಾನಿಯುಂಟಾಗಿದೆ. ಮಳೆಯಿಂದ ಮನೆ ಸಂಪೂರ್ಣ ಬಿದ್ದಿದ್ದರೆ 5 ಲಕ್ಷ ರೂ. ಪರಿಹಾರ ನೀಡುವುದಾಗಿ ಸಿಎಂ ಬಸವರಾಜ್ ಬೊಮ್ಮಾಯಿ ಘೋಷಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

Trending News