ರಾಜ್ಯದಲ್ಲಿ ಹೆಚ್ಚಾಗುತ್ತಿದೆ ಚಳಿ : ಮುಂದುವರಿಯಲಿದೆ ಮಂಜಿನಿಂದ ಕೂಡಿದ ವಾತಾವರಣ
ಜ.07 ರವರೆಗೂ ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ. ಶನಿವಾರದವರೆಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಂಜು ಅಥವಾ ದಟ್ಟ ಮಂಜು ಇರುವ ಸಾಧ್ಯತೆ ಇದೆ.
ಬೆಂಗಳೂರು : ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮುಂಜಾನೆ ಮತ್ತು ಸಂಜೆ ಚಳಿ ಹೆಚ್ಚಾಗುತ್ತಿದೆ. ನಗರ ಮತ್ತು ಜಿಲ್ಲೆಗಳಲ್ಲಿ ಮಂಜಿನಿಂದ ಕೂಡಿದ ವಾತಾವರಣವಿದೆ. ಬೆಳ್ಳಂ ಬೆಳಗ್ಗೆ ಜನರು ಯಾವುದೇ ಕೆಲಸ-ಕಾರ್ಯಗಳಲ್ಲಿ ತೊಡಗಿಸಿಕೊಳ್ಳಲು ತೊಡಕು ಉಂಟಾಗುತ್ತಿದೆ. ಜನರು ಮನೆಯಿಂದ ಹೊರಬಾರದಂತಹ ಸ್ಥಿತಿ ನಿರ್ಮಾಣವಾಗಿದ್ದು, ಮುಂದಿನ ಹಲವು ದಿನಗಳವರೆಗೂ ಇದೇ ವಾತಾವರಣ ಮುಂದುವರೆಯಲಿದೆ.
ಜ.07 ರವರೆಗೂ ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ. ಶನಿವಾರದವರೆಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಂಜು ಅಥವಾ ದಟ್ಟ ಮಂಜು ಇರುವ ಸಾಧ್ಯತೆ ಇದೆ. ಮುಂದಿನ ಎರಡು ದಿನಗಳವರೆಗೆ ಕನಿಷ್ಠ ತಾಪಮಾನವು 2 ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗಲಿದೆ.
ಇದನ್ನೂ ಓದಿ: ಸಿಎಂ ಸಿದ್ದು 'ಬಲ'ದಿಂದ ಡಿನ್ನರ್ ಹೆಸರಿನಲ್ಲಿ ಸಚಿವರ ಪ್ರತ್ಯೇಕ ಸಭೆ?!
ಯಾವ ಜಿಲ್ಲೆಯಲ್ಲಿ ಎಷ್ಟು ತಾಪಮಾನ :
ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 25 ಡಿಗ್ರಿ ಸೆಲ್ಸಿಯಸ್ ಇರಲಿದ್ದುಕನಿಷ್ಠ ತಾಪಮಾನ 15 ಡಿಗ್ರಿ ಸೆಲ್ಸಿಯಸ್
ಮೈಸೂರಿನಲ್ಲಿ ಗರಿಷ್ಠ ತಾಪಮಾನ 28 ಮತ್ತು ಕನಿಷ್ಠ ತಾಪಮಾನ 16 ಡಿಗ್ರಿ ಸೆಲ್ಸಿಯಸ್,
ಮಂಗಳೂರಿನಲ್ಲಿ ಗರಿಷ್ಠ 32 ಮತ್ತು ಕನಿಷ್ಠ 22 ಡಿಗ್ರಿ ಸೆಲ್ಸಿಯಸ್
ಶಿವಮೊಗ್ಗದಲ್ಲಿ ಗರಿಷ್ಠ 28 ಮತ್ತು ಕನಿಷ್ಠ 14 ಡಿಗ್ರಿ ಸೆಲ್ಸಿಯಸ್
ಬೆಳಗಾವಿಯಲ್ಲಿ ಗರಿಷ್ಠ 28 ಮತ್ತು ಕನಿಷ್ಠ 16 ಡಿಗ್ರಿ ಸೆಲ್ಸಿಯಸ್
ಕೋಲಾರದಲ್ಲಿ ಗರಿಷ್ಠ 24 ಮತ್ತು ಕನಿಷ್ಠ 13 ಡಿಗ್ರಿ ಸೆಲ್ಸಿಯಸ್
ತುಮಕೂರಿನಲ್ಲಿ ಗರಿಷ್ಠ 26 ಮತ್ತು ಕನಿಷ್ಠ 13 ಡಿಗ್ರಿ ಸೆಲ್ಸಿಯಸ್
ಉಡುಪಿಯಲ್ಲಿ ಗರಿಷ್ಠ 31 ಮತ್ತು ಕನಿಷ್ಠ 20 ಡಿಗ್ರಿ ಸೆಲ್ಸಿಯಸ್
ಉತ್ತರ ಕನ್ನಡದಲ್ಲಿ ಗರಿಷ್ಠ 33 ಮತ್ತು ಕನಿಷ್ಠ 22 ಡಿಗ್ರಿ ಸೆಲ್ಸಿಯಸ್
ಚಿಕ್ಕಮಗಳೂರಿನಲ್ಲಿ ಗರಿಷ್ಠ 25 ಮತ್ತು ಕನಿಷ್ಠ 12 ಡಿಗ್ರಿ ಸೆಲ್ಸಿಯಸ್
ಹುಬ್ಬಳ್ಳಿಯಲ್ಲಿ ಗರಿಷ್ಠ 29 ಮತ್ತು ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ.
ಇದನ್ನೂ ಓದಿ: ಸರ್ಕಾರಿ ಬಸ್ ಪ್ರಯಾಣ ಕಾಸ್ಟ್ಲಿ : ಶೇ. 15 ರಷ್ಟು ದರ ಹೆಚ್ಚಳ
ಯಾದಗಿರಿ, ಕೊಪ್ಪಳ, ರಾಯಚೂರು, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆಯಲ್ಲಿ ಚಳಿಯ ವಾತಾವರಣವಿದೆ.
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.