ಹವಾಮಾನ ಮುನ್ಸೂಚನೆ: ಇಂದು ಆಗಸ್ಟ್ 25 (ಗುರುವಾರ) ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ತಿಳಿಸಿದೆ. ಇದೇ ವೇಳೆ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇದಲ್ಲದೆ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ ಮತ್ತು ಕೋಲಾರ ಜಿಲ್ಲೆಗಳಲ್ಲಿ ಸಹ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಇದಲ್ಲದೆ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಚಾಮರಾಜನಗರ, ತುಮಕೂರು, ಬಳ್ಳಾರಿ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲೂ ಸಹ ಭಾರೀ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಗೆ ನೀಡಿದ್ದು, ಈ ಭಾಗಗಳಲ್ಲಿಯೂ ಯೆಲ್ಲೋ ಅಲರ್ಟ್ ನೀಡಲಾಗಿದೆ.
ಇದನ್ನೂ ಓದಿ- ನ್ಯಾಯಾಂಗ ತನಿಖೆ ನಡೆಸಿದ್ರೆ ಸರ್ಕಾರದ ಭ್ರಷ್ಟಾಚಾರವನ್ನು ನಾವು ಸಾಬೀತು ಮಾಡುತ್ತೇವೆ: ಸಿದ್ದರಾಮಯ್ಯ
ಇಂದು ಕರಾವಳಿ ಕರ್ನಾಟಕ ಹಾಗೂ ಮಲೆನಾಡಿನ ಕೆಲವು ಜಿಲ್ಲೆಗಳಲ್ಲಿ ಸಾಧಾರಣದಿಂದ ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಭವಿಷ್ಯ ನುಡಿದಿದೆ. ಮಲೆನಾಡು ಮತ್ತು ಕರಾವಳಿಯಲ್ಲಿ ಇಂದು ಮಳೆಯ ಪ್ರಮಾಣ ಹೆಚ್ಚಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಭಾಗದಲ್ಲಿ ಗಂಟೆಗೆ 40 ರಿಂದ 50 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.
ಇದಲ್ಲದೆ, ಇಂದು ಚಾಮರಾಜನಗರ, ಚಿಕ್ಕಮಗಳೂರು, ಮೈಸೂರು, ಕೊಡಗು ಜಿಲ್ಲೆಗಳ ವಿವಿಧೆಡೆ ಗುಡುಗು ಸಹಿತ ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಐಎಂಡಿ ಭವಿಷ್ಯ ನುಡಿದಿದೆ.
ಇದನ್ನೂ ಓದಿ- ಪೆಟ್ರೋಲ್ ದರಕ್ಕಿಂತ ವೇಗವಾಗಿ ಬಿಜೆಪಿ ಸರ್ಕಾರದ ಕಮಿಷನ್ ದರ ಏರಿಕೆಯಾಗುತ್ತಿದೆ: ಕಾಂಗ್ರೆಸ್
ಈ ರಾಜ್ಯಗಳಲ್ಲೂ ಭಾರೀ ಮಳೆ ನಿರೀಕ್ಷೆ:
ಭಾರತೀಯ ಹವಾಮಾನ ಇಲಾಖೆಯ ಪ್ರಕಾರ, ಇಂದು ಕರ್ನಾಟಕ ಮಾತ್ರವಲ್ಲದೆ, ಲಡಾಖ್, ಜಮ್ಮು ಮತ್ತು ಕಾಶ್ಮೀರ, ಛತ್ತೀಸ್ಗಢ, ಒಡಿಶಾ, ಕೊಂಕಣ ಕರಾವಳಿ, ಕೇರಳ ಮತ್ತು ಲಕ್ಷದ್ವೀಪ, ಸಿಕ್ಕಿಂ, ಪಂಜಾಬ್, ಹರಿಯಾಣ, ರಾಜಸ್ಥಾನ, ಗುಜರಾತ್, ಮಹಾರಾಷ್ಟ್ರ, ತೆಲಂಗಾಣ, ಆಂಧ್ರಪ್ರದೇಶ, ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆ ಇದೆ.
ಇದಲ್ಲದೆ, ಪಶ್ಚಿಮ ಬಂಗಾಳ, ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ, ತ್ರಿಪುರಾ, ಹಿಮಾಚಲ ಪ್ರದೇಶ, ಉತ್ತರಾಖಂಡ, ಉತ್ತರ ಪ್ರದೇಶ, ಬಿಹಾರ, ಜಾರ್ಖಂಡ್, ಮಧ್ಯಪ್ರದೇಶ, ಗೋವಾ, ತಮಿಳುನಾಡಿನಲ್ಲಿಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಐಎಂಡಿ ತಿಳಿಸಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.