ಮುಂದಿನ ಒಂದು ವಾರ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ!

Karnataka Rain: ಮುಂದಿನ ಒಂದು ವಾರಗಳ ಕಾಲ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ಏಪ್ರಿಲ್ 12ರಿಂದ 18ರವರೆಗೆ ರಾಜ್ಯದಲ್ಲಿ ಮಳೆರಾಯನ ಆರ್ಭಟ ಇರಲಿದೆ.

Written by - Puttaraj K Alur | Last Updated : Apr 12, 2025, 10:39 PM IST
  • ಮುಂದಿನ ಒಂದು ವಾರಗಳ ಕಾಲ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ
  • ಏಪ್ರಿಲ್ 12ರಿಂದ 18ರವರೆಗೆ ರಾಜ್ಯದಲ್ಲಿ ಮಳೆರಾಯನ ಆರ್ಭಟ ಇರಲಿದೆ
  • ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ವರುಣನ ಆರ್ಭಟ
ಮುಂದಿನ ಒಂದು ವಾರ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ!

Karnataka Weather Updates: ಮುಂದಿನ ಒಂದು ವಾರಗಳ ಕಾಲ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ಏಪ್ರಿಲ್ 12ರಿಂದ 18ರವರೆಗೆ ರಾಜ್ಯದಲ್ಲಿ ಮಳೆರಾಯನ ಆರ್ಭಟ ಇರಲಿದೆ. ಈಗಾಗಲೇ 25 ಜಿಲ್ಲೆಗಳಲ್ಲಿ ಅತ್ಯಧಿಕ ಮಳೆಯಾಗಿದೆ. ಈ ಪೈಕಿ 3 ಜಿಲ್ಲೆಗಳಲ್ಲಿ ಸಾಮಾನ್ಯ, ಒಂದು ಜಿಲ್ಲೆಯಲ್ಲಿ ಅತಿ ಕಡಿಮೆ ಮತ್ತು ಒಂದು ಜಿಲ್ಲೆಯಲ್ಲಿ ಇನ್ನೂ ಮಳೆಯಾಗಿಲ್ಲ.

Add Zee News as a Preferred Source

ವಾಡಿಕೆ ಪ್ರಕಾರ, ಏಪ್ರಿಲ್ ಮೊದಲ ವಾರದಲ್ಲಿ 4.7 MM ಮಳೆಯಾಗಬೇಕಿತ್ತು. ಆದರೆ ಸದ್ಯ 19.1 MM ಮಳೆಯಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ವಾಡಿಕೆಯ ಪ್ರಕಾರ, 4.7 MM ಮಳೆಯಾಗಬೇಕಿತ್ತು. ಆದರೆ 18.1 MM ಮಳೆಯಾಗಿದೆ. ಉತ್ತರ ಒಳನಾಡಿನಲ್ಲಿ 3.8 MM ಮಳೆ ಬದಲಿಗೆ 13.9 MM ಹಾಗೂ ದಕ್ಷಿಣ ಒಳನಾಡಿನಲ್ಲಿ 5.5 MM ಬದಲಿಗೆ 23.8 MM ಮಳೆಯಾಗಿದೆ.

ಇದನ್ನೂ ಓದಿ: ಜನಗಣತಿ ವರದಿಯಲ್ಲಿ ಏನಿದೆ ಅಂತ ನಾವು ನೋಡಿಲ್ಲ : ಡಿ.ಕೆ. ಶಿವಕುಮಾರ್‌

ಏಪ್ರಿಲ್ 12ರಿಂದ 18ರವರೆಗೆ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬಳ್ಳಾರಿ, ಬೆಂಗಳೂರು ನಗರ, ಗ್ರಾಮಾಂತರ, ಚಾಮರಾಜನಗರ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗದಲ್ಲಿ ಮಳೆಯಾಗಲಿದೆ.

ಇದಲ್ಲದೆ ತುಮಕೂರು, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಬೆಳಗಾವಿ, ರಾಯಚೂರು, ಹಾವೇರಿ, ಕೊಪ್ಪಳ, ವಿಜಯಪುರ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಏಪ್ರಿಲ್ 14ರಿಂದ 16ರವರೆಗೆ ಎಲ್ಲಾ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಅಂತಾ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇದನ್ನೂ ಓದಿ: ಉತ್ತರಹಳ್ಳಿ ಅಪಾರ್ಟ್‌ಮೆಂಟ್‌ ವಿರುದ್ಧ ರೋಡಿಗಿಳಿದ ಜನ..!

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.

About the Author

Puttaraj K Alur

ಪುಟ್ಟರಾಜ ಕೆ ಆಲೂರ (Puttaraj K Alur) ಅನುಭವಿ ಪತ್ರಕರ್ತರಾಗಿದ್ದು, ಜೀ ಕನ್ನಡ ನ್ಯೂಸ್‌ನ ಡಿಜಿಟಲ್‌ ವಿಭಾಗದಲ್ಲಿ ಸೀನಿಯರ್‌ ಸಬ್‌ ಎಡಿಟರ್ ಆಗಿ ಕೆಲಸ ಮಾಡುತ್ತಿದ್ದಾರೆ. ಮುದ್ರಣ ಮಾಧ್ಯಮ, ಟಿವಿ ಮಾಧ್ಯಮ ಮತ್ತು ಡಿಜಿಟಲ್‌ ಮಾಧ್ಯಮ ಹೀಗೆ ಎಲ್ಲಾ ಮಾಧ್ಯಮಗಳಲ್ಲಿಯೂ 10 ವರ್ಷ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ.  

ಮೈಸೂರಿನ ಪ್ರಮುಖ ದಿನಪತ್ರಿಕೆಗಳಾದ ರಾಜ್ಯಧರ್ಮ, ಮೈಸೂರು ಮಿತ್ರದಲ್ಲಿ, ಬೆಂಗಳೂರಿನಲ್ಲಿ ದಿಗ್ವಿಜಯ ನ್ಯೂಸ್ ಚಾನೆಲ್‌, ದೆಹಲಿಯಲ್ಲಿ ಒಪೇರಾ (Opera) ನ್ಯೂಸ್‌, ಯುಸಿ (UC Browser)ನ್ಯೂಸ್‌, ಒಪೊಯಿ‌ (Opoyi)ನ್ಯೂಸ್‌ ಮತ್ತು ಪ್ರಸ್ತುತ 4 ವರ್ಷಗಳಿಂದ ಜೀ ಕನ್ನಡ ನ್ಯೂಸ್‌ನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ.

...Read More

Trending News