ಕರ್ನಾಟಕಕ್ಕೆ ಶೀಘ್ರದಲ್ಲೇ ನೂತನ ಮುಖ್ಯಮಂತ್ರಿ !?

Siddaramaiah : ಸಿಎಂ ಸ್ಥಾನದಿಂದ ಕೆಳಗಿಳಿದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ಗೆ ದಾರಿ ಮಾಡಿಕೊಡುವಂತೆ ವೊಕ್ಕಲಿಗ ಶ್ರೀಗಳು ಸಾರ್ವಜನಿಕವಾಗಿ ಮನವಿ ಮಾಡಿದ ಕೆಲವೇ ದಿನಗಳಲ್ಲಿ ಈ ಬೆಳವಣಿಗೆ ನಡೆದಿದೆ.

Written by - Chetana Devarmani | Last Updated : Jul 2, 2024, 10:05 AM IST
  • ಸ್ವಾಮೀಜಿ ಹೇಳಿದ್ದಕ್ಕೆ ನಾನು ಪ್ರತಿಕ್ರಿಯಿಸಲು ಬಯಸುವುದಿಲ್ಲ.
  • ನಮ್ಮದು ರಾಷ್ಟ್ರೀಯ ಪಕ್ಷ. ಹೈಕಮಾಂಡ್ ಇದೆ
  • ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ
ಕರ್ನಾಟಕಕ್ಕೆ ಶೀಘ್ರದಲ್ಲೇ ನೂತನ ಮುಖ್ಯಮಂತ್ರಿ !?    title=

ಬೆಂಗಳೂರು: ಆಡಳಿತಾರೂಢ ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ರಾಜಕೀಯ ಜಿದ್ದಾಜಿದ್ದಿಯ ನಡುವೆಯೇ ನಾಯಕತ್ವ ಬದಲಾವಣೆಯ ಸಾಧ್ಯತೆಯನ್ನು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಪ್ರಸ್ತಾಪಿಸಿದ್ದಾರೆ. ಸಿಎಂ ಸ್ಥಾನದಿಂದ ಕೆಳಗಿಳಿದು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ಗೆ ದಾರಿ ಮಾಡಿಕೊಡುವಂತೆ ವೊಕ್ಕಲಿಗ ಶ್ರೀಗಳು ಸಾರ್ವಜನಿಕವಾಗಿ ಮನವಿ ಮಾಡಿದ ಕೆಲವೇ ದಿನಗಳಲ್ಲಿ ಈ ಬೆಳವಣಿಗೆ ನಡೆದಿದೆ.

ಇದು ಸಾರ್ವಜನಿಕವಾಗಿ ಚರ್ಚಿಸಬೇಕಾದ ವಿಷಯವಲ್ಲ. ಹೈಕಮಾಂಡ್ ಯಾವುದೇ ನಿರ್ಧಾರ ತೆಗೆದುಕೊಂಡರೂ ನಾವು ಅದರಂತೆ ನಡೆದುಕೊಳ್ಳುತ್ತೇವೆ. ಸ್ವಾಮೀಜಿ ಹೇಳಿದ್ದಕ್ಕೆ ನಾನು ಪ್ರತಿಕ್ರಿಯಿಸಲು ಬಯಸುವುದಿಲ್ಲ. ನಮ್ಮದು ರಾಷ್ಟ್ರೀಯ ಪಕ್ಷ. ಹೈಕಮಾಂಡ್ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಇದನ್ನೂ ಓದಿ:  ಚನ್ನಪಟ್ಟಣಕ್ಕೆ ನಾನೇ ಸೇವಕ, ನಾನೇ ನಿಮ್ಮ ಮನೆ ಮಗ, ನಾನೇ ಮಂತ್ರಿ, ನಾನೇ ಡಿಸಿಎಂ : ಡಿಸಿಎಂ ಡಿ.ಕೆ. ಶಿವಕುಮಾರ್ 

ಲಿಂಗಾಯತ, ಎಸ್‌ಸಿ, ಎಸ್‌ಟಿ ಮತ್ತು ಅಲ್ಪಸಂಖ್ಯಾತ ಸಮುದಾಯದ ನಾಯಕರಿಗೆ ನೀಡಿರುವ ಉಪ ಮುಖ್ಯಮಂತ್ರಿ ಹುದ್ದೆಗಳನ್ನು ಹೆಚ್ಚುವರಿಯಾಗಿ ಸೃಷ್ಟಿಸಲು ಸಿದ್ದರಾಮಯ್ಯ ಅವರಿಗೆ ಹಲವು ಸಚಿವರು ಮನವಿ ಮಾಡಿದ್ದಾರೆ ಎಂದು ಇತ್ತೀಚಿನ ವರದಿಗಳು ಹೇಳಿವೆ.

ಈ ಮಧ್ಯೆ, ಕರ್ನಾಟಕದಲ್ಲಿ ಕಾಂಗ್ರೆಸ್ ಬಹುತೇಕ ನಿರ್ನಾಮವಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ಕರ್ನಾಟಕ ಬಿಜೆಪಿ ಕಳೆದ ವಾರ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಕುರಿತು ಸಿದ್ದರಾಮಯ್ಯನವರ ರಾಜೀನಾಮೆಗೆ ಒತ್ತಾಯಿಸಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಿತು. 

ಕಳೆದ ವಾರ ವಿಶ್ವವೊಕ್ಕಲಿಗ ಮಹಾಸಮಸ್ತಾನ ಮಠದ ಕುಮಾರ ಚಂದ್ರಶೇಖರನಾಥ ಸ್ವಾಮೀಜಿ ಅವರು ಡಿ.ಕೆ ಶಿವಕುಮಾರ್ ಸಿಎಂ ಆಗಬೇಕು ಎಂದು ಒತ್ತಾಯಿಸಿದರು. ಅದರ ನಂತರ ಸಿಎಂ ಬದಲಾವಣೆ ಚರ್ಚೆ ಶುರುವಾಯಿತು. ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಅವರು ವೇದಿಕೆಯಲ್ಲಿದ್ದ ಸಂದರ್ಭದಲ್ಲಿ ಈ ಹೇಳಿಕೆ ನೀಡಿದ್ದಾರೆ. 

ಇದನ್ನೂ ಓದಿ:  ಮಧುಗಿರಿಯಲ್ಲೂ ಪಾವಗಡ ಮಾದರಿ ಸೋಲಾರ್ ಪಾರ್ಕ್: ಕೆ.ಜೆ.ಜಾರ್ಜ್ 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News