ಈ ಹಿಂದೆ ಅಡುಗೆ ಅನಿಲದ ಬೆಲೆ ಹೆಚ್ಚಾದರೆ ರಸ್ತೆಯಲ್ಲಿ ಬಿದ್ದು ಒದ್ದಾಡುತ್ತಿದ್ದವರು ಈಗ ಎಲ್ಲಿದ್ದಾರೆ?
ಬಿಜೆಪಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಮಹಿಳಾ ವಿರೋಧಿ ನೀತಿ ಖಂಡಿಸಿ, ರಾಜ್ಯ ಮಹಿಳಾ ಕಾಂಗ್ರೆಸ್ ಇಂದು ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದರು.
ಬೆಂಗಳೂರು: ಬಿಜೆಪಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಮಹಿಳಾ ವಿರೋಧಿ ನೀತಿ ಖಂಡಿಸಿ, ರಾಜ್ಯ ಮಹಿಳಾ ಕಾಂಗ್ರೆಸ್ ಇಂದು ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದರು.
ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಾ ಅಮರನಾಥ್ ಮಾತನಾಡಿ, ಬಿಜೆಪಿ ಸರ್ಕಾರ ಮಹಿಳಾ ವಿರೋಧಿ ನೀತಿ ಅನುಸರಿಸುತ್ತಿದೆ. ಬಿಜೆಪಿ ಸರ್ಕಾರ ನಿರಂತರವಾಗಿ ಅಡುಗೆ ಅನಿಲ ಬೆಲೆ ಏರಿಕೆ ಮಾಡುತ್ತಿದ್ದು, ಕಳೆದ 8 ವರ್ಷಗಳ ಅವಧಿಯಲ್ಲಿ 845 ರೂ. ಏರಿಕೆ ಮಾಡಿದ್ದಾರೆ ಎಂದರು.
ಪ್ರಧಾನಮಂತ್ರಿಗಳ ಹೆಸರಿನಲ್ಲಿ ಕೇಂದ್ರ ಸರ್ಕಾರ ಉಜ್ವಲ ಯೋಜನೆ ಘೋಷಣೆ ಮಾಡಿತ್ತು. ಈ ಯೋಜನೆ ಎಷ್ಟು ಜನರಿಗೆ ತಲುಪಿದೆ ಎಂಬುದು ಒಂದು ಕಡೆಯಾದರೆ, ಮಹಿಳೆಯರು ಹೊಗೆರಹಿತ ಅಡುಗೆ ವ್ಯವಸ್ಥೆಯಲ್ಲಿ ಅಡುಗೆ ಮಾಡುವಲ್ಲಿ ಈ ಯೋಜನೆ ನಿರೀಕ್ಷಿತ ಮಟ್ಟದ ಯಶಸ್ಸು ಕಾಣದೇ ಹಳ್ಳ ಹಿಡಿದಿದೆ.
ಇದನ್ನೂ ಓದಿ: ಕಾರ್ಮಿಕರ ತುಟ್ಟಿ ಭತ್ಯೆಯನ್ನು ಹೆಚ್ಚಳ ಮಾಡಿದ ಕೇಜ್ರಿವಾಲ್ ಸರ್ಕಾರ
ಇನ್ನು ಇತ್ತೀಚೆಗೆ ಆಸಿಡ್ ದಾಳಿಯಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ ನಡೆಯುತ್ತಿದ್ದರೆ, ಗೃಹ ಸಚಿವ ಅರಗ ಜ್ಞಾನೇಂದ್ರ ಅವರ ಕ್ಷೇತ್ರದಲ್ಲಿ ದಲಿತ ಕುಟುಂಬದ ಮೇಲೆ ದೌರ್ಜನ್ಯ ನಡೆದಾಗ ಆ ಬಗ್ಗೆ ಮಾತನಾಡಲಿಲ್ಲ ಹಾಗೂ ಆ ಕುಟುಂಬಕ್ಕೆ ನ್ಯಾಯ ಕೊಡಿಸಲು ಅಧಿಕಾರಿಗಳ ಜತೆ ಮಾತನಾಡಲಿಲ್ಲ.ಸ್ಮೃತಿ ಇರಾನಿ, ಶಶಿಕಲಾ ಜೊಲ್ಲೆ, ತಾರಾ, ಮಾಳವಿಕ ಅವರು ಉತ್ತರಿಸಬೇಕು, ಯುಪಿಎ ಅವಧಿಯಲ್ಲಿ ಅಡುಗೆ ಅನಿಲದ ಬೆಲೆ 10 ರೂ. ಹೆಚ್ಚಾದರೆ ರಸ್ತೆಯಲ್ಲಿ ಬಿದ್ದು ಒದ್ದಾಡುತ್ತಿದ್ದ ಸ್ಮೃತಿ ಇರಾನಿ, ಶೋಭಾ ಕರಂದ್ಲಾಜೆ ಅವರು ಈಗ ಎಲ್ಲಿದ್ದಾರೆ? ಈಗ ಅವರು ಮಾತನಾಡಲು ಧೈರ್ಯ ಬರುತ್ತಿಲ್ಲವೇ? ಬೆಲೆ ಇಳಿಸಿ ಮಹಿಳೆಯರಿಗೆ ನೆರವಾಗಲು ಮನಸ್ಸಿಲ್ಲವೇ? ಎಂದು ಪ್ರಶ್ನಿಸಿದರು.https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.