ಕರ್ನಾಟಕದ ಅನ್ನಭಾಗ್ಯ ಕೇಂದ್ರ ಸರಕಾರದ್ದಂತೆ..!
ಬೆಂಗಳೂರು: ಕರ್ನಾಟಕದ ಸಿದ್ದರಾಮಯ್ಯ ಸರ್ಕಾರ 2013ರಲ್ಲಿ ಅಧಿಕಾರಕ್ಕೆ ಬಂದ ಕೂಡಲೇ ಅನ್ನಭಾಗ್ಯ ಕಾರ್ಯಕ್ರಮವನ್ನು ಜಾರಿಗೆ ತಂದಿರುವುದು ಎಲ್ಲರಿಗೂ ಗೊತ್ತಿರುವ ಸಂಗತಿ.
ಆದರೆ ಹಾಸನದಲ್ಲಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಸಿದ್ದರಾಮಯ್ಯರವರನ್ನು ಟೀಕಿಸುವ ಭರದಲ್ಲಿ ಇದು ಕೇಂದ್ರ ಸರ್ಕಾರದ ಕಾರ್ಯಕ್ರಮ ಎಂದು ಕೇಂದ್ರ ಸಚಿವ ಪ್ರಕಾಶ ಜಾವಡೆಕರ್ ಹೇಳಿದ್ದಾರೆ. ರಾಜ್ಯ ಸರ್ಕಾರದ ಈ ಯೋಜನೆಯಲ್ಲಿ ಕೇಂದ್ರ ಸರ್ಕಾರದ ಬಹುಪಾಲು ಸಹಾಯಧನ ಇರುವುದರಿಂದ ಈ ಯೋಜನೆ ಕೇಂದ್ರ ಸರ್ಕಾರದ್ದು ಎಂದು ಹೇಳಿಕೆ ನೀಡಿದ್ದಾರೆ
ಪ್ರಮುಖವಾಗಿ ಅನ್ನಭಾಗ್ಯ ಯೋಜನೆಯು ಬಡಜನರನ್ನು ಗುರಿಯಾಗಿಟ್ಟುಕೊಂಡು ಅವರನ್ನು ಹಸಿವಿನಿಂದ ಮುಕ್ತಗೊಳಿಸಬೇಕೆನ್ನುವ ಕಾರಣಕ್ಕಾಗಿ ಸಿದ್ದರಾಮಯ್ಯನವರು ಅಧಿಕಾರಕ್ಕೆ ಬಂದ ತಕ್ಷಣ ಇದನ್ನು ಚುನಾವಣೆಯಲ್ಲಿನ ಪ್ರಣಾಳಿಕೆಯ ಆಶ್ವಾಸನೆಯ ಭಾಗವಾಗಿ ಜಾರಿಗೆಗೊಳಿಸಿದ್ದರು.