ಬೆಂಗಳೂರು- ಚಿತ್ರದುರ್ಗ ಜಿಲ್ಲೆಯ ಕವಾಡಿಗರ ಹಟ್ಟಿ ಗ್ರಾಮದ ಎಸ್.ಸಿ. ಕಾಲೋನಿಯಲ್ಲಿ ಕಲುಷಿತ ನೀರು ಕುಡಿದು ಮೃತಪಟ್ಟ ಮೂವರ ಕುಟುಂಬಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ  ತಲಾ 5 ಲಕ್ಷ ರೂ. ಪರಿಹಾರ ಬಿಡುಗಡೆ ಮಾಡಲಾಗಿದೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಆ.06 ರಂದು 508 ರೈಲ್ವೆ ನಿಲ್ದಾಣಗಳ ಪುನರಾಭಿವೃದ್ಧಿಗೆ ಪ್ರಧಾನಿ ಮೋದಿ ಶಂಕುಸ್ಥಾಪನೆ


ಈ ಘಟನೆಯ ಕುರಿತು ವಿಷಾದ ವ್ಯಕ್ತಪಡಿಸಿರುವ ಮುಖ್ಯಮಂತ್ರಿಗಳು ನೀಡಿದ ಸೂಚನೆಯ ಮೇರೆಗೆ ದುರಂತದಲ್ಲಿ ಮೃತರಾದ ಮಂಜುಳಾ, ರಘು ಹಾಗೂ   ಪ್ರವೀಣ್ ಅವರ ಕುಟುಂಬಕ್ಕೆ ತಲಾ 5 ಲಕ್ಷ ರೂ. ಗಳಂತೆ ಪರಿಹಾರ ಮಂಜೂರು ಮಾಡಿ, ಜಿಲ್ಲಾಧಿಕಾರಿಗಳಿಗೆ ಒಟ್ಟು 15 ಲಕ್ಷ ರೂ ಬಿಡುಗಡೆ ಮಾಡಲಾಗಿದೆ.


ಇದನ್ನೂ ಓದಿ: ಲಾಲ್‌ಬಾಗ್‌ನಲ್ಲಿ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನಕ್ಕೆ ಸಿಎಂ ಚಾಲನೆ : ಫೋಟೋಸ್‌ ನೋಡಿ


ಜುಲೈ 31 ರಂದು ಚಿತ್ರದುರ್ಗ ಜಿಲ್ಲೆಯ ಕವಾಡಿಗರ ಹಟ್ಟಿ ಎಸ್ಸಿ ಕಾಲೋನಿಯಲ್ಲಿ ಕುಡಿಯುವ ನೀರು ಕಲುಷಿತ ಹೊಂದಿದ್ದರಿಂದ ಅಲ್ಲಿನ ನಿವಾಸಿಗಳು ಅಸ್ವಸ್ಥಗೊಂಡು ಮೂವರು ಮೃತಪಟ್ಟಿದ್ದರು. ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಅವರು ಮುಖ್ಯಮಂತ್ರಿಗಳಿಗೆ ಸಲ್ಲಿಸಿದ ಮನವಿ ಹಾಗೂ ಜಿಲ್ಲಾಧಿಕಾರಿಗಳು ಸಲ್ಲಿಸಿದ ವರದಿಯನ್ನು ಆಧರಿಸಿ ಪರಿಹಾರ ಬಿಡುಗಡೆ ಮಾಡಲಾಗಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.