ದ್ವಿತೀಯ PU ವಿದ್ಯಾರ್ಥಿಗಳ ಗಮನಕ್ಕೆ :  KCET-2021 ಅರ್ಜಿ ಸಲ್ಲಿಕೆ ದಿನಾಂಕ ಮತ್ತೆ ವಿಸ್ತರಣೆ!

ಅನೇಕ ವಿದ್ಯಾರ್ಥಿಗಳು, ಪೋಷಕರು ಇನ್ನೂ ಅವಕಾಶ ನೀಡುವಂತೆ ಮನವಿ ಮಾಡಿದ್ದರು, ಈ ಕಾರಣದಿಂದ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ ಮಾಡಲಾಗಿದೆ.

Last Updated : Jul 9, 2021, 03:59 PM IST
  • ಸಿಇಟಿ-2021ರ ಪರೀಕ್ಷೆಗೆ ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಣೆ
  • ಈ ದಿನಾಂಕ ನಾಳೆ ಕೊನೆ ದಿನವಾಗಿತ್ತು
  • ಅನೇಕ ವಿದ್ಯಾರ್ಥಿಗಳು, ಪೋಷಕರು ಇನ್ನೂ ಅವಕಾಶ ನೀಡುವಂತೆ ಮನವಿ
ದ್ವಿತೀಯ PU ವಿದ್ಯಾರ್ಥಿಗಳ ಗಮನಕ್ಕೆ :  KCET-2021 ಅರ್ಜಿ ಸಲ್ಲಿಕೆ ದಿನಾಂಕ ಮತ್ತೆ ವಿಸ್ತರಣೆ! title=

ಬೆಂಗಳೂರು : ಸಿಇಟಿ-2021ರ ಪರೀಕ್ಷೆಗೆ ಅರ್ಜಿ ಸಲ್ಲಿಸುವ ದಿನಾಂಕವನ್ನ ಜುಲೈ16 ರವರೆಗೆ ವಿಸ್ತರಣೆ ಮಾಡಲಾಗಿದೆ. ಈ ದಿನಾಂಕ ನಾಳೆ ಕೊನೆ ದಿನವಾಗಿತ್ತು. 

ಈ ಕುರಿತಂತೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರ(Karnataka Examinations Authority)ವು, ಸಿಇಟಿ-2021ರ ವಿವಿಧ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕಾಗಿ ಆನ್ ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು, ಅನೇಕ ವಿದ್ಯಾರ್ಥಿಗಳು, ಪೋಷಕರು ಇನ್ನೂ ಅವಕಾಶ ನೀಡುವಂತೆ ಮನವಿ ಮಾಡಿದ್ದರು, ಈ ಕಾರಣದಿಂದ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ದಿನಾಂಕ ವಿಸ್ತರಣೆ ಮಾಡಲಾಗಿದೆ.

ಇದನ್ನೂ ಓದಿ : MB Patil : ಸಿಎಂ ಬಿಎಸ್‍ವೈ ಭೇಟಿಯಾದ ಕಾಂಗ್ರೆಸ್ ನಾಯಕ ಎಂಬಿ ಪಾಟೀಲ್

ವೃತ್ತಿಪರ ಕೋರ್ಸುಗಳ ಪ್ರವೇಶಾತಿಗಾಗಿ ಸಿಇಟಿ-2021(KCET-2021)ಕ್ಕೆ ನೊಂದಣಿ ಮಾಡಿಕೊಳ್ಳದೇ ಇರುವ ವಿದ್ಯಾರ್ಥಿಗಳು ಜುಲೈ 16 ವರೆಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು ಹಾಗೂ ಶುಲ್ಕ ಪಾವತಿಯನ್ನ ಜುಲೈ 19ರವರೆಗೆ ಕೊನೆ ದಿನವಾಗಿದೆ.

ಇದನ್ನೂ ಓದಿ : DL-RC Book : ವಾಹನ ಸವಾರರಿಗೆ ಸಿಹಿ ಸುದ್ದಿ : ಸವಾರರು ಇನ್ಮುಂದೆ DL, RC ಕೊಂಡೊಯ್ಯಬೇಕಿಲ್ಲ

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ

Trending News