ಬೆಂಗಳೂರು ಸೆ 15: Social darvinism ಗೆ ನಾವು ಅವಕಾಶ ಕೊಡಬಾರದು. ಬಲಾಢ್ಯರು ಮಾತ್ರ ಉಳಿಯಬೇಕು ಎನ್ನುವ ಡಾರ್ವಿನ್ ಸಿದ್ಧಾಂತಕ್ಕೆ ನಾವು ವಿರುದ್ಧ. ಎಲ್ಲರಿಗೂ ನ್ಯಾಯ ಸಿಗುವಂತಿರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. 


COMMERCIAL BREAK
SCROLL TO CONTINUE READING

ರಾಜ್ಯ ಪೊಲೀಸ್ ಮಹಾ ನಿರ್ದೇಶಕರ ಕಚೇರಿಯ ಸಭಾಂಗಣದಲ್ಲಿ ನಡೆದ ಮೊದಲ ಕರ್ನಾಟಕ ರಾಜ್ಯ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮಾವೇಶದಲ್ಲಿ ಈ ಸೂಚನೆ ನೀಡಿದರು. ಬಲಾಢ್ಯರು ಮಾತ್ರ ಬದುಕಬೇಕು, ಶಕ್ತಿ ಇದ್ದವರಿಗೆ ಮಾತ್ರ ನ್ಯಾಯ ಸಿಗಬೇಕು ಎನ್ನುವ ಡಾರ್ವಿನ್‌ ಸಿದ್ಧಾಂತದ ಮನಸ್ಥಿತಿಗೆ ಪೊಲೀಸ್ ಇಲಾಖೆಯಲ್ಲಿ ಅವಕಾಶ ಇರದಂತೆ ನೋಡಿಕೊಳ್ಳುವ ಜವಾಬ್ದಾರಿ ಇಲಾಖೆಯ ಮೇಲಿದೆ ಎಂದರು. 


ಇದನ್ನೂ ಓದಿ: ಬಿಜೆಪಿಯಿಂದ ಸಂವಿಧಾನದ ಆಶಯಗಳ ಕಗ್ಗೊಲೆ ಮಾಡಿದ ಕಾಂಗ್ರೆಸ್‌ನ ಕರಾಳ ನಿದರ್ಶನಗಳ ಪಟ್ಟಿ ಬಿಡುಗಡೆ!


ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಎಲ್ಲಾ ರಾಜ್ಯಗಳ, ಎಲ್ಲಾ ದೇಶಗಳ ಜನ ನೆಲೆಸಿದ್ದಾರೆ. ಅವರೆಲ್ಲರೂ ನೆಮ್ಮದಿಯಿಂದ, ಖುಷಿಯಿಂದ ಇರಬೇಕು ಎಂದು ಸೂಚಿಸಿದರು. ದೂರು ಬಂದರೆ ಮಾತ್ರ FIR ದಾಖಲಿಸಬೇಕು ಎನ್ನುವ ಮನಸ್ಥಿತಿ ಬಿಟ್ಟುಬಿಡಿ. ಸ್ವಯಂ ಪ್ರೇರಿತ FIR ದಾಖಲಿಸಿಕೊಂಡು ತನಿಖೆ ನಡೆಸಿದರೆ ಪೊಲೀಸ್ ವ್ಯವಸ್ಥೆಗೆ ಘನತೆ ಬರುತ್ತದೆ. ಅಪರಾಧ ಜಗತ್ತಿಗೆ ಭಯವೂ ಮೂಡುತ್ತದೆ ಎಂದರು. 


 ಇದನ್ನೂ ಓದಿ: ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ : ಚಾಮರಾಜನಗರದಲ್ಲಿ ರೈತರ ಪ್ರತಿಭಟನೆ


ಸಮಾಜಘಾತುಕ ಶಕ್ತಿಗಳ ಜತೆ ಸ್ನೇಹ ಇಟ್ಟುಕೊಂಡಿರುವ ಅಧಿಕಾರಿಗಳನ್ನೂ ನಾನು ಗಮನಿಸಿದ್ದೇನೆ. ಹೀಗಾದಾಗ ಜನ ಸಾಮಾನ್ಯರಿಗೆ ಪೊಲೀಸ್ ವ್ಯವಸ್ಥೆ ಮೇಲೆ ನಂಬಿಕೆ ಬರಲು ಹೇಗೆ ಸಾಧ್ಯ? ಬೇಲಿಯೇ ಎದ್ದು ಹೊಲ ಮೇಯ್ದರೆ ಸಮಾಜದ ರಕ್ಷಣೆ ಹೇಗೆ ಸಾಧ್ಯ ಎಂದು ಜನ ಸಾಮಾನ್ಯರು ಪ್ರಶ್ನಿಸುತ್ತಾರೆ. ಚಾಳಿಬಿದ್ದ ರೌಡಿಗಳನ್ನು ಗಡಿಪಾರು ಮಾಡುವುದು ಹೆಚ್ಚು ಕ್ರಿಯಾಶೀಲವಾಗಿ ನಡೆಯಬೇಕು. ಅವರಿಗೆ ಸಲೀಸಾಗಿ ಜಾಮೀನು ಸಿಗುವಂಥಾಗಬಾರದು. 


ದೂರುದಾರರಿಗೆ ಧೈರ್ಯ ನೀಡುವ ಕೆಲಸ ಪೊಲೀಸ್ ಠಾಣೆಗಳಲ್ಲಿ ಆಗಬೇಕು. ಕಟ್ಟ ಕಡೆಯ ವ್ಯಕ್ತಿಗೂ ನ್ಯಾಯ ಸಿಗುವಂತಿರಬೇಕು. ಗೃಹ ಸಚಿವ ಜಿ.ಪರಮೇಶ್ವರ್, ರಾಜ್ಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಗಳಾದ ಗೋವಿಂದರಾಜು ಮತ್ತು ನಸೀರ್ ಅಹಮದ್ ಅವರು ಉಪಸ್ಥಿತರಿದ್ದರು. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.