Kempe Gowda Jayanti 2023: ಜೂ.27ರಂದು ನಾಡಪ್ರಭು ಕೆಂಪೇಗೌಡರ ಜಯಂತಿ ಆಚರಣೆ
Kempe Gowda Jayanti 2023: ಗುರುವಾರ ಬೆಂಗಳೂರಿನಲ್ಲಿ ನಡೆದ ಕೆಂಪೇಗೌಡ ಜಯಂತಿ ಪೂರ್ವಭಾವಿ ಸಭೆಯಲ್ಲಿ ಹಲವಾರು ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳಲಾಯಿತು.
ಬೆಂಗಳೂರು: ಜೂ.27ರಂದು ಬೆಂಗಳೂರಿನ ನಿರ್ಮಾತೃ, ನಾಡಪ್ರಭು ಕೆಂಪೇಗೌಡರ 514ನೇ ಜನ್ಮದಿನವನ್ನು ಅದ್ದೂರಿಯಾಗಿ ಆಚರಿಸಲು ನಿರ್ಧರಿಸಲಾಗಿದೆ. ಗುರುವಾರ ಬೆಂಗಳೂರಿನಲ್ಲಿ ನಡೆದ ಕೆಂಪೇಗೌಡ ಜಯಂತಿ ಪೂರ್ವಭಾವಿ ಸಭೆಯಲ್ಲಿ ಹಲವಾರು ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳಲಾಯಿತು.
ಇದನ್ನೂ ಓದಿ: ವಿದ್ಯುತ್ ದರ ಏರಿಕೆ ಖಂಡಿಸಿ ಕರ್ನಾಟಕ ಬಂದ್‌ಗೆ ಕರೆ
ಕೆಂಪೇಗೌಡರ ಜಯಂತಿ ಪೂರ್ವಭಾವಿ ಸಭೆಯಲ್ಲಿ ತೆಗೆದುಕೊಂಡ ಮಹತ್ವದ ನಿರ್ಧಾರಗಳು…
1) ನಾಡಪ್ರಭು ಕೆಂಪೇಗೌಡರ ಜಯಂತಿ ಕಾರ್ಯಕ್ರಮ ಯಾವುದೇ ಜಾತಿ-ಧರ್ಮ ಮತ್ತು ಭಾಷೆಗೆ ಸೀಮಿತ ಅಲ್ಲ.
2) ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಜೂನ್ 27ರಂದು ರಾಜ್ಯದ ಎಲ್ಲಾ ತಾಲೂಕಿನಲ್ಲೂ ರಾಜ್ಯ ಮಟ್ಟದ ಕೆಂಪೇಗೌಡರ ಜಯಂತಿ ಕಾರ್ಯಕ್ರಮ ಕಡ್ಡಾಯ ಆಚರಣೆಗೆ ಸೂಚನೆ.
3) ಮಾಗಡಿ, ಯಲಹಂಕ , ಕೆಂಪಾಂಬುದಿ ಕೆರೆ ಮತ್ತು ಲಾಲ್ ಬಾಗ್ ಸೇರಿದಂತೆ ನಗರದ 5 ಕಡೆಯಿಂದ ಜ್ಯೋತಿ ಹಿಡಿದು ವಿಧಾನಸೌಧಕ್ಕೆ ಜಾತ್ರಾ ಮೆರವಣಿಗೆ.
4) ಬೆಳಗ್ಗೆ 9ಗಂಟೆಗೆ ಆರಂಭವಾಗಲಿರುವ ಮೆರವಣಿಗೆಯನ್ನು ಸಚಿವರು ಉದ್ಘಾಟಿಸಲಿದ್ದಾರೆ.
5) ಮಧ್ಯಾಹ್ನ 12 ಗಂಟೆಗೆ ವಿಧಾನಸೌಧದ ಎದುರಿರುವ ಕೆಂಪೇಗೌಡರ ಪ್ರತಿಮೆಯ ಬಳಿ ಮೆರವಣಿಗೆ ಆಗಮನ.
6) 12 ಗಂಟೆಯ ನಂತರ ಬ್ಯಾಂಕ್ವೆಟ್ ಹಾಲ್‍ನಲ್ಲಿ ರಾಜ್ಯ ಮಟ್ಟದ ಕಾರ್ಯಕ್ರಮ.
7) ಮೂವರು ಜನ ಸಾಧಕರಿಗೆ ಪ್ರಶಸ್ತಿ ನೀಡಿ ಗೌರವ.
8) ಬಿ.ಎಲ್.ಶಂಕರ್ ನೇತೃತ್ವದಲ್ಲಿ ಸಾಧಕರ ಆಯ್ಕೆ.
9) ಬೆಂಗಳೂರು ನಗರದಲ್ಲಿ 28 ರಿಂದ 5ರವರೆಗೆ ಶಾಸಕರ ಅನುಕೂಲಕ್ಕೆ ತಕ್ಕಂತೆ ಎಲ್ಲಾ ಕ್ಷೇತ್ರದಲ್ಲೂ ಕಡ್ಡಾಯವಾಗಿ ಕಾರ್ಯಕ್ರಮ ಆಚರಿಸಬೇಕು.
10) ಜುಲೈ 9ರಂದು ಬಿಬಿಎಂಪಿ ವತಿಯಿಂದ ಪ್ರಶಸ್ತಿ ಪ್ರಧಾನ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ
11) ಬಿಬಿಎಂಪಿ ವಾರ್ಡ್ ಮಟ್ಟದ ಪ್ರಶಸ್ತಿಗೆ 198 ಜನ ಸಾಧಕರನ್ನು ಆಯ್ಕೆ ಮಾಡಲಾಗುವುದು. ಸಾಧಕರ ಆಯ್ಕೆಗೆ ಕಮಿಟಿ ರಚನೆ ಮಾಡಲಾಗುವುದು.
12) ಎಲ್ಲಾ ಜಾತಿ-ಧರ್ಮಗಳ ಸಾಧಕರಿಗೂ ಪ್ರಶಸ್ತಿ ನೀಡುವ ಉದ್ದೇಶ.
13) ಕ್ರೀಡೆ, ಸಾಹಿತ್ಯ ಮತ್ತು ಸಮಾಜಸೇವೆ ಮಾನದಂಡದ ಅಡಿಯಲ್ಲಿ ಸಾಧಕರ ಆಯ್ಕೆ.
14) ಬಿಜೆಪಿ ಸರ್ಕಾರದ ಅವಧಿಯಲ್ಲಿ ಹಾಸನದಲ್ಲೂ ಪ್ರತ್ಯೇಕ ರಾಜ್ಯಮಟ್ಟದ ಕಾರ್ಯಕ್ರಮ ಆಯೋಜಿಸಲಾಗಿತ್ತು. ಆ ಕಾರ್ಯಕ್ರಮವು ಹಾಗೆ ಮುಂದುವರೆಯಲಿದೆ.
ಇದನ್ನೂ ಓದಿ: 126 ಕೋಟಿ ರೂ, ಮೌಲ್ಯ ದಾಟಿದ ಮಹಿಳಾ "ಶಕ್ತಿ" ಪ್ರದರ್ಶನ
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.