ಬೆಂಗಳೂರು: ಕೆಂಗಲ್ ಹನುಮಂತಯ್ಯನವರು ದಕ್ಷ ಆಡಳಿತಗಾರ, ಕರ್ನಾಟಕವನ್ನು ಅತ್ಯಂತ ದಕ್ಷತೆಯಿಂದ ಸುಮಾರು ನಾಲ್ಕೂವರೆ ವರ್ಷ ಆಳಿದವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.  ಅವರು ಇಂದು ವಿಧಾನಸೌಧದಲ್ಲಿ ಮಾಜಿ ಮುಖ್ಯಮಂತ್ರಿ  ದಿ. ಕೆಂಗಲ್ ಹನುಮಂತಯ್ಯ ಅವರ ಜನ್ಮದಿನಾಚಾರಣೆ ಅಂಗವಾಗಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಮದುವೆ ಮಾಡಿಸ್ತೀವಿ ಎಂದು ಅವಿವಾಹಿತರನ್ನೇ ಟಾರ್ಗೆಟ್‌ ಮಾಡಿ ವಂಚಿಸುತ್ತಿದ್ದ ಖತರ್ನಾಕ್ ಗ್ಯಾಂಗ್!


ಕೆಂಗಲ್ ಹನುಮಂತಯ್ಯನವರ ಜನ್ಮದಿನದಂದು ಅವರ ಸ್ಮರಣೆ ಮಾಡಿ ಗೌರವ ಸಲ್ಲಿಸಿದ್ದೇವೆ. ರಾಮನಗರ ಜಿಲ್ಲೆಯವರಾದ ಅವರು  ಸಂವಿಧಾನ ಜಾರಿಯಾದ ನಂತರ ಮುಖ್ಯಮಂತ್ರಿಯಾದವರು. ಅವರ ಕಾಲದಲ್ಲಿ ನಡೆದ ಸಾರ್ವತ್ರಿಕ ಚುನಾವಣೆಯಲ್ಲಿ ಗೆದ್ದು ಶಾಸಕಾಂಗ ಪಕ್ಷದ ನಾಯಕರಾಗಿ ಮುಖ್ಯ ಮಂತ್ರಿಯಾದವರು. ವಿಧಾನಸೌಧದ ಕಟ್ಟಿಸಿದ್ದು ಅವರು. ಆದರೆ ದುರ್ದೈವ, ಅದನ್ನು ಅವರು ಉದ್ಘಾಟಿಸಲು ಬಿಡಲಿಲ್ಲ ಎಂದರು.  


ಇದನ್ನೂ ಓದಿ: ಪಲ್ಸ್ ಪೋಲಿಯೋಗೆ ಸಂಬಂಧಿಸಿದಂತೆ ಪೂರ್ವ ವಲಯದಲ್ಲಿ ಸಭೆ: ಧ್ವನಿವರ್ಧಕಗಳ ಮೂಲಕ ಜಾಗೃತಿ


ಮಾದರಿ ಆಡಳಿತ


ಅವರ ಆಡಳಿತ ನಮಗೆಲ್ಲಾ ಮಾದರಿ. ವಿಧಾನಸೌಧದ ಪೂರ್ವದಿಕ್ಕಿನಲ್ಲಿ ಸರ್ಕಾರಿ ಕೆಲಸ  ದೇವರ ಕೆಲಸ ಎಂದು ಬರೆಸಿದ್ದು, ಜನಸೇವೆಯೇ  ಜನಾರ್ಧನ ಸೇವೆ ಎಂದು ಅದರ ಅರ್ಥ. ಬದ್ಧತೆ,  ನಿಷ್ಠುರತೆಯಿಂದ ಸರ್ಕಾರದ   ಕೆಲಸ ಮಾಡಿದ್ದರು. ಹಳೇ ಮೈಸೂರು ಭಾಗದವರಾದರೂ ವಿಶಾಲ ಕರ್ನಾಟಕವಾಗಬೇಕೆಂದು ಕರ್ನಾಟಕ ಏಕೀಕರಣದಲ್ಲಿ ಭಾಗವಹಿಸಿದ್ದರು. ಅವರ ತತ್ವ ಆದರ್ಶಗಳು ನಮಗೆ ಮಾದರಿ ಎಂದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.