ಬೆಂಗಳೂರು: 2023ರ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರತಿಷ್ಠಿತ ‘ಶ್ರೀ ಕೆಂಗಲ್ ಹನುಮಂತಯ್ಯ ಸಂಸ್ಕೃತಿ ದತ್ತಿ ಪ್ರಶಸ್ತಿಗೆ ಹಿರಿಯ ರಾಜಕಾರಣಿ ಮತ್ತು ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್.ಯಡಿಯೂರಪ್ಪನವರನ್ನು ಆಯ್ಕೆ ಮಾಡಲಾಗಿದೆ.
ಕರ್ನಾಟಕದ ಸಾಂಸ್ಕೃತಿಕ, ಸಾಹಿತ್ಯ, ಕಲೆ, ಪರಂಪರೆ ಪೋಷಕರಾಗಿರುವ ಇಲ್ಲವೆ ಮೇಲ್ಕಂಡ ಕ್ಷೇತ್ರಗಳಲ್ಲಿ ಕನಿಷ್ಟ 25 ವರ್ಷಗಳಿಂದ ಸೇವಾ ನಿರತರಾದˌ 50 ವರ್ಷದ ವಯೋಮಾನ ಮೀರಿದ ವ್ಯಕ್ತಿ, ಸಂಘ, ಸಂಸ್ಥೆಗಳನ್ನು ಆಯ್ಕೆ ಮಾಡುವುದು ಈ ದತ್ತಿ ನಿಧಿಯ ಆಶಯವಾಗಿದೆ. 2016ರಿಂದಲೂ ಕೆಂಗಲ್ ಹನುಮಂತಯ್ಯ ಪ್ರಶಸ್ತಿಯನ್ನು ಕನ್ನಡ ಸಾಹಿತ್ಯ ಪರಿಷತ್ತು ನೀಡುತ್ತಿದ್ದು, ಈ ಹಿಂದೆ ಮಾಜಿ ವಿಧಾನ ಪರಿಷತ್ ಸಭಾಪತಿಗಳಾದ ಬಿ.ಜಿ.ಬಣಕಾರ್, ಪ್ರಖ್ಯಾತ ಲೇಖಕರಾದ ಡಾ.ಸಿ.ಪಿ.ಕೃಷ್ಣಕುಮಾರ್, ಜನಪದ ಸಾಹಿತ್ಯಕ್ಕೆ ಹೊಸ ನೆಲೆ ನೀಡಿದ ಚೆನ್ನಣ್ಣ ವಾಲಿಕರ, ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ, ಶಿಕ್ಷಣ ತಜ್ಞ ಮತ್ತು ರಾಜಕಾರಣಿ ಡಾ.ಪ್ರಭಾಕರ ಕೋರೆ, ನ್ಯಾಯಮೂರ್ತಿ ಡಾ.ಶಿವರಾಜ.ವಿ.ಪಾಟೀಲ, ಶಿಕ್ಷಣ ತಜ್ಞ ಮತ್ತು ಕುಲಾಧಿಪತಿ ಡಾ.ವಿ.ಜಿ.ಜೋಸೆಫ್ ಅವರನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿತ್ತು.
ಇದನ್ನೂ ಓದಿ:ಬರಹಗಾರರಿಗಾಗಿ ಇಲ್ಲಿದೆ ಸುವರ್ಣ ಅವಕಾಶ.. ಸ್ಕ್ರಿಪ್ಟ್ ಬರೆದು ಹಣ ಗೆಲ್ಲಿ !
ನಾಲ್ಕು ಸಲ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳಾಗಿ, ಮೂರು ಸಲ ವಿರೋಧ ಪಕ್ಷದ ನಾಯಕರಾಗಿ ಕಾರ್ಯ ನಿರ್ವಹಿಸಿರುವ ಬಿ.ಎಸ್.ಯಡಿಯೂರಪ್ಪನವರು ಸದಾ ಕನ್ನಡ ಮತ್ತು ಸಂಸ್ಕೃತಿಗೆ ಕೊಡುಗೆಗಳನ್ನು ನೀಡಿದ್ದಾರೆ, ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯ ನಿರ್ವಹಣೆಗೆ, ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಗಳು ಸಂಘಟಿತವಾಗುವಲ್ಲಿ ಮಹತ್ವದ ಪಾತ್ರ ವಹಿಸಿದ್ದಾರೆ. ಅವರಿಗಿರುವ ಕನ್ನಡದ ಬಗೆಗಿನ ಕಾಳಜಿ ಮತ್ತು ಸಾಂಸ್ಕೃತಿಕ ಕೊಡುಗೆಯನ್ನು ಗಮನಿಸಿ ಈ ಪುರಸ್ಕಾರವನ್ನು ನೀಡಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ ಡಾ.ಮಹೇಶ ಜೋಶಿಯವರು ತಿಳಿಸಿದ್ದಾರೆ.
ನಾಡೋಜ ಡಾ.ಮಹೇಶ ಜೋಶಿಯವರ ಅಧ್ಯಕ್ಷತೆಯಲ್ಲಿ ನಡೆದ ಪ್ರಶಸ್ತಿಯ ಆಯ್ಕೆ ಸಮಿತಿ ಸಭೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯದರ್ಶಿಗಳಾದ ಡಾ.ಪದ್ಮಿನಿ ನಾಗರಾಜು, ನೇ.ಭ.ರಾಮಲಿಂಗ ಶೆಟ್ಟಿ ಮತ್ತು ದತ್ತಿದಾನಿಗಳ ಪರವಾಗಿ ಟಿ.ತಿಮ್ಮೇಶ್ ಅವರು ಭಾಗವಹಿಸಿದ್ದರು. ಆಯ್ಕೆ ಸಭೆಯು ಮಾರ್ಚಿ 17ರಂದೇ ಸಭೆ ಸೇರಿ ತೀರ್ಮಾನ ಕೈಗೊಂಡಿದ್ದರೂ ಯಡಿಯೂರಪ್ಪನವರು ರಾಜಕೀಯ ವ್ಯಕ್ತಿಯೂ ಆಗಿರುವುದರಿಂದ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿ ಇರುವವರೆಗೂ ಪುರಸ್ಕಾರವನ್ನು ಪ್ರಕಟಿಸಿರಲಿಲ್ಲ ಎಂದು ನಾಡೋಜ ಡಾ.ಮಹೇಶ ಜೋಶಿಯವರು ತಿಳಿಸಿದ್ದಾರೆ.
ಇದನ್ನೂ ಓದಿ:ರಾಹುಲ್ ಗಾಂಧಿ ವಿರೋಧಪಕ್ಷದ ನಾಯಕನ್ನಾಗಿ ಮಾಡಲು ಕಾಂಗ್ರೆಸ್ ನಿರ್ಧಾರ
ದತ್ತಿ ಪ್ರಶಸ್ತಿ ಪುರಸ್ಕೃತರಾದ ಬಿ.ಎಸ್.ಯಡಿಯೂರಪ್ಪನವರನ್ನು ಕನ್ನಡ ಸಾಹಿತ್ಯ ಪರಿಷತ್ತು ವಿಶೇಷವಾಗಿ ಅಭಿನಂದಿಸುತ್ತದೆ. ನಾಡು-ನುಡಿಗೆ ಇನ್ನಷ್ಟು ಕೊಡುಗೆಗಳನ್ನು ನೀಡಲು ಇದು ಪ್ರೇರಣೆಯಾಗಲಿ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ನಾಡೋಜ ಡಾ.ಮಹೇಶ ಜೋಶಿಯವರು ತಿಳಿಸಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.