ಕೆರೆಗೋಡು ಘಟನೆ ಬಿಜೆಪಿಯ ಧ್ರುವೀಕರಣ ತಂತ್ರದ ಭಾಗ: ಸಚಿವ ಎಂ ಬಿ ಪಾಟೀಲ
`ನಾವು ಹಿಂದೂ ಧರ್ಮವನ್ನು ಪ್ರೀತಿಸಬೇಕು; ಉಳಿದ ಧರ್ಮಗಳನ್ನು ಗೌರವಿಸಬೇಕು. ರಾಮ, ಶಿವ, ಮಹಾವೀರ, ಬಸವಣ್ಣ ಯಾರ ಸ್ವತ್ತೂ ಅಲ್ಲ. ನಮ್ಮ ಸರಕಾರವು ಪ್ರತಿಯೊಂದು ಧರ್ಮದ ಜನರನ್ನೂ ರಕ್ಷಿಸಲಿದೆ`- ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ
Minister MB Patil: ಕರ್ನಾಟಕವು ರಾಷ್ಟ್ರಕವಿ ಕುವೆಂಪು ಹೇಳಿದಂತೆ ಸರ್ವ ಜನಾಂಗದ ಶಾಂತಿಯ ತೋಟವಾಗಿದೆ. ಇಲ್ಲಿ ಲೋಕಸಭಾ ಚುನಾವಣೆಯ ಮೇಲೆ ಕಣ್ಣಿಟ್ಟುಕೊಂಡು, ಬಿಜೆಪಿ ಧರ್ಮದ ಆಧಾರದ ಮೇಲೆ ಜನರ ಧ್ರುವೀಕರಣ ಮಾಡುತ್ತ, ತನ್ನ ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಹೊರಟಿದೆ. ಮಂಡ್ಯದ ಕೆರೆಗೋಡಿನಲ್ಲಿ ನಡೆದ ಘಟನೆ ಇಂತಹ ಷಡ್ಯಂತ್ರದ ಭಾಗವಾಗಿದೆ ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಬುಧವಾರ ಹೇಳಿದ್ದಾರೆ.
ತಮ್ಮ ನಿವಾಸದ ಬಳಿ ಸುದ್ದಿಗಾರರು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ, 'ನಾವು ಹಿಂದೂ ಧರ್ಮವನ್ನು ಪ್ರೀತಿಸಬೇಕು; ಉಳಿದ ಧರ್ಮಗಳನ್ನು ಗೌರವಿಸಬೇಕು. ರಾಮ, ಶಿವ, ಮಹಾವೀರ, ಬಸವಣ್ಣ ಯಾರ ಸ್ವತ್ತೂ ಅಲ್ಲ. ನಮ್ಮ ಸರಕಾರವು ಪ್ರತಿಯೊಂದು ಧರ್ಮದ ಜನರನ್ನೂ ರಕ್ಷಿಸಲಿದೆ' ಎಂದು ಪ್ರತಿಪಾದಿಸಿದರು.
ಇದನ್ನೂ ಓದಿ- ಬೆಳ್ಳಂಬೆಳಗ್ಗೆ ಭ್ರಷ್ಟ ಅಧಿಕಾರಿಗಳಿಗೆ ಶಾಕ್ ಕೊಟ್ಟ ಲೋಕಾಯುಕ್ತ..ಬೆಂಗಳೂರು ಸೇರಿ 40 ಕಡೆ ದಾಳಿ
ಎಚ್.ಡಿ.ಕುಮಾರಸ್ವಾಮಿ ಈಗ ಬಿಜೆಪಿ ಪರ ಮಾತನಾಡುತ್ತಿದ್ದಾರೆ. ಹಿಂದೆ ಇದೇ ವ್ಯಕ್ತಿ ಬಿಜೆಪಿಯನ್ನು ಹಿಗ್ಗಾಮುಗ್ಗ ಟೀಕಿಸಿದ್ದರು. ಆಗ ಅಪಾಯಕಾರಿಯಾಗಿ ಕಾಣುತ್ತಿದ್ದ ಬಿಜೆಪಿ, ಅವರಿಗೆ ಈಗೇಕೆ ಹಿತಕರವಾಗಿ ಕಾಣುತ್ತಿದೆ? ಜನರು ಇದನ್ನೆಲ್ಲ ಅರ್ಥ ಮಾಡಿಕೊಳ್ಳುವಷ್ಟು ಬುದ್ಧಿವಂತರಾಗಿದ್ದಾರೆ ಎಂದು ಅವರು ನುಡಿದರು.
ಇದನ್ನೂ ಓದಿ- ಶಿವಾಜಿನಗರದಲ್ಲಿ ಹಸಿರು ಬಾವುಟ ಹಾರಾಟ.. ಬಿಬಿಎಂಪಿ ಅಲರ್ಟ್
ಗ್ಯಾರಂಟಿಗಳಿಗೂ ಲೋಕಸಭಾ ಚುನಾವಣೆಗೂ ಸಂಬಂಧವಿಲ್ಲ. ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್ಸಿಗೆ ಕಡಿಮೆ ಸೀಟುಗಳು ಬಂದರೆ ಗ್ಯಾರಂಟಿಗಳನ್ನು ನಿಲ್ಲಿಸಲಾಗುವುದು ಎಂದಿರುವ ಮಾಗಡಿ ಶಾಸಕರ ಮಾತು ಸರಿಯಲ್ಲ. ಈಗಾಗಲೇ ಜಾರಿಗೊಳಿಸಿರುವ ಗ್ಯಾರಂಟಿಗಳೆಲ್ಲವೂ ಐದು ವರ್ಷಗಳ ಕಾಲ ಮುಂದುವರಿಯಲಿವೆ ಎಂದು ಪಾಟೀಲ ಸ್ಪಷ್ಪಪಡಿಸಿದರು.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=I87DcFM35WY
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.