ನವದೆಹಲಿ: ಬಂಗಾಳದ ಮಾಜಿ ರಾಜ್ಯಪಾಲ ಮತ್ತು ಬಿಜೆಪಿಯ ಹಿರಿಯ ನಾಯಕ ಕೇಶರಿ ನಾಥ್ ತ್ರಿಪಾಠಿ ಇಂದು ಬೆಳಿಗ್ಗೆ ಐದು ಗಂಟೆಗೆ ನಿಧನರಾದರು. ಅವರಿಗೆ 88 ವರ್ಷ ವಯಸ್ಸಾಗಿತ್ತು. ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿರುವ ತಮ್ಮ ಮನೆಯಲ್ಲಿ ಇಂದು ಕೊನೆಯುಸಿರೆಳೆದಿದ್ದಾರೆ.ಕೇಶರಿ ನಾಥ್ ಅವರು ನವೆಂಬರ್ 10, 1934 ರಂದು ಅಲಹಾಬಾದ್ನಲ್ಲಿ ಜನಿಸಿದರು. ಅವರು ಜುಲೈ 2014 ರಿಂದ ಜುಲೈ 2019 ರವರೆಗೆ ಪಶ್ಚಿಮ ಬಂಗಾಳದ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದರು. ಜೊತೆಗೆ, ಕೇಶ್ರೀ ನಾಥ್ ಅವರು ಉತ್ತರ ಪ್ರದೇಶ ಸಚಿವ ಸಂಪುಟದ ಸದಸ್ಯರಾಗಿದ್ದರು. ಅವರ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.
ಇದನ್ನೂ ಓದಿ : Ind Vs SL : ಇಶಾನ್ ಕಿಶನ್ ಮೇಲೆ ಮುನಿಸಿಕೊಂಡ ಕ್ಯಾಪ್ಟನ್ ಹಾರ್ದಿಕ್ ಪಾಂಡ್ಯ!
ಕೆಲ ದಿನಗಳ ಹಿಂದೆ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಕೇಸರಿನಾಥ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.ಅವರ ಆರೋಗ್ಯ ಸುಧಾರಿಸಿದ ನಂತರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿತ್ತು. ಈಗ ಕೇಸರಿ ನಾಥ್ ತ್ರಿಪಾಠಿ ಅವರ ನಿಧನಕ್ಕೆ ರಾಜ್ಯದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ ಬಿಜೆಪಿಯ ನಾಯಕರು ಸಂತಾಪ ಸೂಚಿಸಿದ್ದಾರೆ.
Shri Keshari Nath Tripathi Ji was respected for his service and intellect. He was well versed in Constitutional matters. He played a key role in building BJP in UP and worked hard for the state’s progress. Pained by his demise. Condolences to his family and admirers. Om Shanti. pic.twitter.com/mQqirPTPvy
— Narendra Modi (@narendramodi) January 8, 2023
ಜಗದೀಪ್ ಧಂಖರ್ ಅವರಿಗಿಂತ ಮೊದಲು ಕೇಶರಿ ನಾಥ್ ಅವರು ಐದು ವರ್ಷಗಳ ಕಾಲ ಬಂಗಾಳದ ರಾಜ್ಯಪಾಲರಾಗಿದ್ದರು. ಬಂಗಾಳದ ಜೊತೆಗೆ, ಅವರಿಗೆ ಅಲ್ಪಾವಧಿಗೆ ಬಿಹಾರ, ಮೇಘಾಲಯ ಮತ್ತು ಮಿಜೋರಾಂನ ಹೆಚ್ಚುವರಿ ಉಸ್ತುವಾರಿ ನೀಡಲಾಯಿತು. ವೃತ್ತಿಯಲ್ಲಿ ವಕೀಲರಾಗಿರುವ ತ್ರಿಪಾಠಿ ರಾಜಕೀಯವಾಗಿ ಅತ್ಯಂತ ಯಶಸ್ವಿಯಾಗಿದ್ದಾರೆ.ಉತ್ತರ ಪ್ರದೇಶ ವಿಧಾನಸಭೆಯ ಸ್ಪೀಕರ್ ಆಗಿ ಹಲವು ಬಾರಿ ಆಯ್ಕೆಯಾಗಿದ್ದರು. ಬಿಜೆಪಿ ಟಿಕೆಟ್‌ನಲ್ಲಿ ಆರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಉತ್ತರ ಪ್ರದೇಶ ಬಿಜೆಪಿ ರಾಜ್ಯಾಧ್ಯಕ್ಷರಾಗಿಯೂ ಆಯ್ಕೆಯಾಗಿದ್ದಾರೆ. 1946ರಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸದಸ್ಯತ್ವ ಪಡೆದು 1952ರಲ್ಲಿ ಜನಸಂಘಕ್ಕೆ ಸೇರುವ ಮೂಲಕ ರಾಜಕೀಯ ಪ್ರವೇಶಿಸಿದ ಅವರು 1953ರಲ್ಲಿ ಜನಸಂಘ ಆರಂಭಿಸಿದ ಕಾಶ್ಮೀರ ಚಳವಳಿಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದರು.
ಇದನ್ನೂ ಓದಿ : ಮಂಗಳೂರಿಗೆ ಎಂ.ಎಸ್.ಧೋನಿ ಭೇಟಿ; ಕೂಲ್ ಕ್ಯಾಪ್ಟನ್ ನೋಡಲು ಮುಗಿಬಿದ್ದ ಫ್ಯಾನ್ಸ್!
ರಾಷ್ಟ್ರಪತಿ ದ್ರೌಪದಿ ಮುರ್ಮು ಕೂಡ ಮಾಜಿ ರಾಜ್ಯಪಾಲ ಕೇಸರಿನಾಥ್ ತ್ರಿಪಾಠಿ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಬೆಳಗ್ಗೆ 11.30ರ ಸುಮಾರಿಗೆ ರಾಷ್ಟ್ರಪತಿಗಳು ಮಾಜಿ ರಾಜ್ಯಪಾಲರ ಪುತ್ರ ನೀರಜ್ ತ್ರಿಪಾಠಿ ಅವರಿಗೆ ದೂರವಾಣಿ ಮೂಲಕ ಸಾಂತ್ವನ ಹೇಳಿದರು. ವಿಧಾನಸಭಾಧ್ಯಕ್ಷ ಸತೀಶ್ ಮಹಾನ ಅವರು ನಿವಾಸಕ್ಕೆ ಆಗಮಿಸಿ ಸಾಂತ್ವನ ಹೇಳಿದರು. ರಾಜ್ಯಸಭಾ ಸದಸ್ಯರಾದ ಪ್ರಮೋದ್ ತಿವಾರಿ, ಸ್ವಾಮಿ ವಾಸುದೇವಾನಂದ ಸರಸ್ವತಿ ಕೂಡ ಸಂತಾಪ ಸೂಚಿಸಲು ನಿವಾಸಕ್ಕೆ ಆಗಮಿಸಿದರು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.