ಬೆಂಗಳೂರು:  ಖೇಲೋ ಇಂಡಿಯಾ (Khelo India) ಯೂನಿವರ್ಸಿಟಿ ಗೇಮ್ಸ್ 2021 ಎರಡನೇ ಆವೃತ್ತಿ ಯಶಸ್ವಿ ಆಯೋಜನೆಗೆ ರಾಜ್ಯ ಸರ್ಕಾರ ಎಲ್ಲಾ ರೀತಿಯ ಸಿದ್ದತೆ ಮಾಡಿಕೊಂಡಿದೆ ಎಂದು ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ (Narayangowda) ಅವರು ತಿಳಿಸಿದರು. 


COMMERCIAL BREAK
SCROLL TO CONTINUE READING

ಇದನ್ನೂ ಓದಿ: SRH vs GT, IPL 2022: ಗುಜರಾತ್ ಟೈಟಾನ್ಸ್ ಗೆಲುವಿನ ಓಟಕ್ಕೆ ಬ್ರೇಕ್ ಹಾಕುತ್ತಾ ಹೈದರಾಬಾದ್?


ಖೇಲೋ ಇಂಡಿಯಾ ಯೂನಿವರ್ಸಿಟಿ 2021ರ ಸಿದ್ಧತೆಗಳಿಗೆ ಸಂಬಂಧಿಸಿದಂತೆ ಸಚಿವ ಡಾ.ನಾರಾಯಣಗೌಡ ಅವರು ಇಂದು ವಿಧಾನಸೌಧದಲ್ಲಿ (Vidhanasoudha) ಕೇಂದ್ರ ಯುವಜನ ಹಾಗೂ ಕ್ರೀಡಾ ಇಲಾಖೆ ಕಾರ್ಯದರ್ಶಿ ಸುಜಾತಾ ಚತುರ್ವೇದಿ ಸೇರಿದಂತೆ ಕೇಂದ್ರ ಸರ್ಕಾರದ ಹಾಗೂ ರಾಜ್ಯ ಸರ್ಕಾರದ ಹಿರಿಯ ಅಧಿಕಾರಿಗಳ ಜೊತೆ ಸುದೀರ್ಘ ಸಭೆ ನಡೆಸಿದರು. 


ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಏಪ್ತಿಲ್ 24 ರಿಂದ ಮೇ 3 ರವರೆಗೂ ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್ 2021ರ ಕ್ರೀಡಾಕೂಟ ನಡೆಯಲಿದ್ದು, ರಾಜ್ಯ ಸರ್ಕಾರ ಎಲ್ಲಾ ರೀತಿಯ ಸಿದ್ದತೆ ಮಾಡಿಕೊಂಡಿದೆ. ಉಪರಾಷ್ಟ್ರಪತಿ ವೆಂಕಯ್ಯನಾಯ್ಡು (Venkaiah Naidu),ಕೇಂದ್ರ ಸರ್ಕಾರದ ಕ್ರೀಡಾ ಸಚಿವ ಅನುರಾಗ್ ಠಾಕೂರ್ , ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಕ್ರೀಡಾಕೂಟ ಉದ್ಘಾಟಿಸಲಿದ್ದಾರೆ. ಸುಮಾರು 4,500 ಸಾವಿರ ಕ್ರೀಡಾಪಟುಗಳು ಭಾಗವಹಿಸಲಿದ್ದಾರೆ  ಎಂದು ಸಚಿವ ಡಾ‌.ನಾರಾಯಣಗೌಡ ಅವರು ತಿಳಿಸಿದರು.


ಇದನ್ನೂ ಓದಿ: ಕೊಹ್ಲಿ 71ನೇ ಶತಕ ಬಾರಿಸುವವರೆಗೆ ಡೇಟಿಂಗ್ ಮಾಡುವುದಿಲ್ಲ: ಆರ್‌ಸಿಬಿ ಫ್ಯಾನ್ ಗರ್ಲ್


ಇದೇ ವೇಳೆ ಕ್ರೇಂದ್ರ ಕ್ರೀಡಾ ಇಲಾಖೆ ಕಾರ್ಯದರ್ಶಿ ಸುಜಾತಾ ಚತುರ್ತೇದಿ ಅವರು ಮಾತನಾಡಿ, ಶಾಲೆ ಮತ್ತು ಕಾಲೇಜಿನಲ್ಲಿ ಕ್ರೀಡಾ ಸ್ಪೂರ್ತಿ ಮೂಡಿಸಲು ಖೇಲೋ ಇಂಡಿಯಾ (Khelo India) ನಡೆಸಲಾಗುವುದು. ಇದಕ್ಕಾಗಿ ಕೇಂದ್ರ ಸರ್ಕಾರ 35 ಕೋಟಿ ರೂಪಾಯಿ ಅನುದಾನ ನೀಡಿದೆ.ದೇಶದ 190 ಯೂನಿವರ್ಸಿಟಿಗಳ ನಾಲ್ಕೂವರೆ ಸಾವಿರಕ್ಕೂ ಹೆಚ್ಚು ಕ್ರೀಡಾಪಟುಗಳು ಪಾಲ್ಗೊಳ್ಳಲಿದ್ದಾರೆ. ಈ ಕ್ರೀಡಾಕೂಟದಲ್ಲಿ ಮೊದಲ ಬಾರಿಗೆ ಮಲ್ಲಗಂಬವನ್ನು ಸೇರಿಸಲಾಗಿದ್ದು, ಯೋಗ, ಕರಾಟೆ ಸೇರಿದಂತೆ 20 ಕ್ರೀಡೆಗಳ ಸ್ಪರ್ಧೆ ನಡೆಯಲಿದೆ ಎಂದು ಹೇಳಿದರು.


ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.