ಬೆಂಗಳೂರು: ಕರ್ನಾಟಕ ಪ್ರದೇಶ ಕೈಗಾರಿಕಾಭಿವೃದ್ಧಿ ಮಂಡಲಿ (KIADB) ವತಿಯಿಂದ ಹಂಚಿಕೆಯಾಗಿರುವ ನಿವೇಶನಗಳಿಗೆ ಸಂಬಂಧಿಸಿದ ಕೋರ್ಟ್ ಪ್ರಕರಣಗಳ ಅಂಕಿಸಂಖ್ಯೆ, ಅವುಗಳ ಸ್ಥಿತಿಗತಿ ಮತ್ತು ಸ್ವಾಧೀನ ಪ್ರಕ್ರಿಯೆಯಲ್ಲಿ ಆಗಿರುವ ಲೋಪಗಳು ಇತ್ಯಾದಿಗಳ ಬಗ್ಗೆ ತಮಗೆ ಜುಲೈ 17ರೊಳಗೆ ಸಮಗ್ರ ವರದಿ ಸಲ್ಲಿಸಬೇಕು ಎಂದು ಭಾರೀ ಮತ್ತು ಮಾಧ್ಯಮ ಕೈಗಾರಿಕೆಗಳ ಸಚಿವ ಎಂ.ಬಿ.ಪಾಟೀಲ್ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಈ ಸಂಬಂಧ ಇಲಾಖೆಯ ಉನ್ನತಾಧಿಕಾರಿಗಳೊಂದಿಗೆ ಮಂಗಳವಾರ ಸುದೀರ್ಘ ಸಭೆ ನಡೆಸಿದ ಅವರು, ‘ಕೆಐಎಡಿಬಿ ನಿವೇಶನ ಹಂಚಿಕೆ ಸಂಬಂಧ ಕಳೆದ 4-5 ವರ್ಷಗಳಲ್ಲಿ 1,748 ಮೊಕದ್ದಮೆಗಳು ದಾಖಲಾಗಿವೆ. ಈ ಪೈಕಿ 921 ಪ್ರಕರಣಗಳ ವಿಚಾರಣೆ ನಡೆಯುತ್ತಿದ್ದು, 762 ಪ್ರಕರಣಗಳಲ್ಲಿ ಸರ್ಕಾರದ ಪರ ಆದೇಶ ಬಂದಿದೆ. ಆದರೆ ಸರ್ಕಾರದ ಹಿತಾಸಕ್ತಿ ಇರುವ ಕೆಲವು ಪ್ರಕರಣಗಳಲ್ಲಿ ನಾವು ಮೇಲ್ಮನವಿಯನ್ನೇ ಸಲ್ಲಿಸಿಲ್ಲ. ಇನ್ನು ಮುಂದೆ ಇಂತಹ ಪ್ರಕರಣಗಳಲ್ಲಿ ಎಲ್ಲವನ್ನೂ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮತ್ತು ಕಾನೂನು ಇಲಾಖೆಯ ಗಮನಕ್ಕೆ ತಂದು, ಸಲಹೆ ಪಡೆಯಬೇಕು. ಜೊತೆಗೆ ಅಡ್ವೊಕೇಟ್ ಜನರಲ್ ಅವರ ಅಭಿಪ್ರಾಯವನ್ನೂ ಕೇಳಬೇಕು’ ಎಂದು ಹೇಳಿದರು.
ಇದನ್ನೂ ಓದಿ: ಹಿಂದಿನ ಬಿಜೆಪಿ ಸರ್ಕಾರದಲ್ಲಿ ನಡೆದ ಹಗರಣಗಳ ಬಗ್ಗೆ ತನಿಖೆ ನಡೆಸಲಾಗುವುದು: ಸಿಎಂ ಸಿದ್ದರಾಮಯ್ಯ
ಕೋಲಾರದ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿ 10 ವರ್ಷಗಳ ಹಿಂದೆಯೇ 92 ಎಕರೆ ಜಮೀನನ್ನು ಸ್ವಾಧೀನ ಪಡಿಸಿಕೊಂಡಿದ್ದರೂ ಅಂತಿಮ ಅಧಿಸೂಚನೆಯನ್ನೇ ಹೊರಡಿಸಿಲ್ಲ. ಇದು ಈಗ ಕಗ್ಗಂಟಾಗಿದೆ. ಇದರಲ್ಲಿ ಕೆಲವರು ಅಧಿಸೂಚನೆಯ ಪರವಾಗಿದ್ದರೆ, ಕೆಲವರು ವಿರೋಧಿಸುತ್ತಿದ್ದಾರೆ. ಇದನ್ನು ಸಮಗ್ರವಾಗಿ ಪರಿಶೀಲಿಸಿ, ಸೂಕ್ತ ರೀತಿಯಲ್ಲಿ ಬಗೆಹರಿಸಬೇಕು. ಭೂ ಸ್ವಾಧೀನ ಪ್ರಕ್ರಿಯೆಯಲ್ಲಿ ಸರಿಯಾದ ವಿಧಿವಿಧಾನ ಅನುಸರಿಸದೆ ಇರುವುದೇ ಪ್ರಕರಣಗಳು ನ್ಯಾಯಾಲಯದ ಮೆಟ್ಟಿಲೇರಲು ಕಾರಣವಾಗಿವೆ’ ಎಂದು ಅವರು ತಿಳಿಸಿದರು.
ರಾಜ್ಯ ಕೈಗಾರಿಕಾ ಇಲಾಖೆ, ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ (KIADB), ಕರ್ನಾಟಕ ಉದ್ಯೋಗ ಮಿತ್ರ (KUM), ಇನ್ವೆಸ್ಟ್ ಕರ್ನಾಟಕ ಫೋರಂ(IKF) ಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದೆ.
ರಾಜ್ಯವನ್ನು ನೂತನ ಆವಿಷ್ಕಾರಗಳ ಹಾಗೂ ಉದ್ದಿಮೆದಾರರ ನೆಚ್ಚಿನ ತಾಣವನ್ನಾಗಿ ಮಾಡಲು ಅಗತ್ಯವಾದ ಕಾರ್ಯಕ್ರಮಗಳನ್ನು ರೂಪಿಸುವಂತೆ ನಿರ್ದೇಶಿಸಿದೆ.… pic.twitter.com/0wfezjZKD8
— M B Patil (@MBPatil) June 27, 2023
ಕೈಗಾರಿಕೆಗಳ ಬಳಕೆಗೆಂದು ಸರ್ಕಾರದ ಬಳಿ ಈಗ 11 ಸಾವಿರ ಎಕರೆ ಭೂಮಿ ಇದ್ದು, ಇದರ ಮೌಲ್ಯ 8 ರಿಂದ 10 ಸಾವಿರ ಕೋಟಿ ರೂ. ಆಗುತ್ತದೆ. ರಾಜ್ಯದಲ್ಲಿ ಎಲ್ಲೆಂದರಲ್ಲಿ ಕೈಗಾರಿಕಾ ಪ್ರದೇಶಗಳನ್ನು ಮಾಡುವ ಬದಲು ಬೇಡಿಕೆ ಆಧರಿಸಿ ಮಾಡಬೇಕು. ಇದರಲ್ಲಿ ರಾಜಕೀಯ ಒತ್ತಡಕ್ಕೆ ಮಣಿಯಬಾರದು. ಜೊತೆಗೆ ಒಂದು ನಿರ್ದಿಷ್ಟ ಮಾದರಿಯ ಉದ್ಯಮಗಳಿಗೆ ಮೀಸಲಿಟ್ಟಿರುವ ಜಾಗಗಳಲ್ಲಿ ಅಂತಹ ಉದ್ದಿಮೆಗಳು ನಿರೀಕ್ಷಿತ ಪ್ರಮಾಣದಲ್ಲಿ ಬಾರದಿದ್ದರೆ, ಅಲ್ಲಿರುವ ಜಾಗವನ್ನು ಉಳಿದ ಉದ್ದಿಮೆಗಳಿಗೂ ಒದಗಿಸುವ ನೀತಿಯನ್ನು ಅಳವಡಿಸಿಕೊಳ್ಳಲಾಗುವುದು’ ಎಂದು ಅವರು ವಿವರಿಸಿದರು.
ಇದನ್ನೂ ಓದಿ: ಪಕ್ಷದ ಘನತೆಗೆ ಧಕ್ಕೆಯಾಗದಂತೆ ನಾಯಕರು ನೋಡಿಕೊಳ್ಳಬೇಕು : ಕಟೀಲ್
ರಾಜ್ಯದಲ್ಲಿ ಅಗತ್ಯ ಆಧಾರಿತ ಉದ್ದಿಮೆಗಳನ್ನು ಪ್ರೋತ್ಸಾಹಿಸಬೇಕು. ಇಲ್ಲದೆ ಹೋದರೆ ಎಲ್ಲವೂ ಬರೀ ಭೂಸ್ವಾಧೀನದ ಹಂತದಲ್ಲೇ ನಿಂತು ಹೋಗುತ್ತದೆ. ನಮ್ಮಲ್ಲಿ ಕೈಗಾರಿಕಾ ಉದ್ದೇಶಕ್ಕೆಂದು ವಶಪಡಿಸಿಕೊಂಡಿರುವ ಜಮೀನು ದಶಕಗಳ ನಂತರವೂ ಹಾಗೆಯೇ ಉಳಿದುಕೊಂಡಿರುವುದಕ್ಕೆ ಇದೇ ಮೂಲಕಾರಣವಾಗಿದೆ’ ಎಂದು ಪಾಟೀಲ್ ಪ್ರತಿಪಾದಿಸಿದರು. ಸಭೆಯಲ್ಲಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಆಯುಕ್ತೆ ಗುಂಜನ್ ಕೃಷ್ಣ, ಕೆಐಎಡಿಬಿ ಆಯುಕ್ತ ಮಹೇಶ್ ಮುಂತಾದವರು ಉಪಸ್ಥಿತರಿದ್ದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.