ಬೆಂಗಳೂರು: ಕೆಐಡಿಬಿ(KIADB)ಯಿಂದ ಸ್ವಾಧೀನಪಡಿಸಿಕೊಂಡ ಜಮೀನಿಗೆ ರೈತರು ನಗದು ಪರಿಹಾರ(Compensation) ಪಡೆಯದೇ ಇದ್ದಲ್ಲಿ, ಅಭಿವೃದ್ಧಿಪಡಿಸಿದ ನಿವೇಶನದಲ್ಲಿ ಪ್ರತಿ ಎಕರೆಗೆ 10,781 ಚ. ಅಡಿ ಜಾಗವನ್ನು ಫಲಾನುಭವಿಗಳಿಗೆ ನೀಡಲು ನಿರ್ಧರಿಸಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್ ನಿರಾಣಿ(Murugesh Nirani) ತಿಳಿಸಿದ್ದಾರೆ.  


COMMERCIAL BREAK
SCROLL TO CONTINUE READING

ವಿಧಾನಪರಿಷತ್‍ನಲ್ಲಿ ಕಾಂಗ್ರೆಸ್ ಸದಸ್ಯ ಸಲೀಂ ಅಹಮ್ಮದ್ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಈ ಮೊದಲು ಪ್ರತಿ ಎಕರೆಗೆ 9,500 ಚದರ ಅಡಿ ಅಭಿವೃದ್ಧಿಪಡಿಸಿದ ಜಾಗ(Developed Site)ವನ್ನು ಭೂ ಮಾಲೀಕರಿಗೆ ನೀಡಲಾಗುತ್ತಿತ್ತು. ಈಗ ಎಕೆರೆಗೆ 10,781ಚದರ ಅಡಿ ಜಾಗವನ್ನು ನೀಡಲು ನಿರ್ಧರಿಸಲಾಗಿದೆ ಎಂದು ಹೇಳಿದರು.


ಇದನ್ನೂ ಓದಿ: ನೀರಿನ ರಾಜಕಾರಣ ಮಾಡಿ ಸಿಎಂ ಆಗುತ್ತೇನೆಂಬ ಭ್ರಮೆಯಿಂದ ಹೊರಬನ್ನಿ: ಡಿಕೆಶಿಗೆ ಬಿಜೆಪಿ ಗುದ್ದು


ಜಮೀನು ಕಳೆದುಕೊಂಡ(Agricultural Land)ಕುಟುಂಬದ ಸದಸ್ಯರಲ್ಲಿ ಶೈಕ್ಷಣಿಕ ಅರ್ಹತೆಗೆ ಅನುಗುಣವಾಗಿ ಸ್ಥಾಪಿಸಿದ ಕೈಗಾರಿಕೆಗಳಲ್ಲಿ ಉದ್ಯೋಗ ಅವಕಾಶಗಳನ್ನು ಕಲ್ಪಿಸಲಾಗುತ್ತದೆ. ಭೂಮಿಯ ಬದಲಾಗಿ ಪರ್ಯಾಯ ಭೂಮಿ ನೀಡುವ ವ್ಯವಸ್ಥೆ ದೇಶದಲ್ಲಿ ಎಲ್ಲಿಯೂ ಜಾರಿಯಲ್ಲಿಲ್ಲವೆಂದು ಅವರು ಉಪ ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.


ರಾಜ್ಯದಲ್ಲಿ 83,058 ಎಕರೆಯನ್ನು ಕೈಗಾರಿಕಾ ಪ್ರದೇಶಕ್ಕಾಗಿ, 79,017 ಎಕರೆಯನ್ನು ಏಕಘಟಕ ಸಂಕೀರ್ಣದಡಿ ಒಟ್ಟು 1,62,000 ಎಕರೆಯನ್ನು ಕೆಐಎಡಿಬಿ(KIADB) ವಿವಿಧ ಜಿಲ್ಲೆಗಳಲ್ಲಿ ಸ್ವಾಧೀನಪಡಿಸಿಕೊಂಡಿದೆ ಎಂದು ನಿರಾಣಿ(Murugesh Nirani) ವಿವರಿಸಿದರು.


ಇದನ್ನೂ ಓದಿ: ಮೇಕೆದಾಟು ಯೋಜನೆ ವಿಚಾರ.. ಕರ್ನಾಟಕ ನಿಲುವು ನಾಳೆ ನಿರ್ಣಯ: ಸಿಎಂ ಬೊಮ್ಮಾಯಿ


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.