ಬೆಂಗಳೂರು : ಪ್ರಧಾನ ಮಂತ್ರಿ ನರೇಂದ್ರ ಮೋದಿಗೆ ಇಂದು ಕೊಪ್ಪಳ ಜಿಲ್ಲೆಯ ಕಿನ್ನಾಳ ಕಲೆಯ ಕಾಮಧೇನು ಉಡುಗೊರೆಯಾಗಿ ನೀಡಲಾಯಿತು. ಸಚಿವೆ ಶಶಿಕಲಾ ಜೊಲ್ಲೆ ಅವರು ಪ್ರಧಾನ ಮಂತ್ರಿ ನರೇಂದ್ರ ಮೋದಿಗೆ ಕೊಪ್ಪಳ ಜಿಲ್ಲೆಯ ಕಿನ್ನಾಳ ಕಲೆಯ ಕಾಮಧೇನು ಉಡುಗೊರೆಯಾಗಿ ನೀಡಿದರು. ಪ್ರಧಾನಿ ಮೋದಿ ಅವರ ವೊಕಲ್ ಫಾರ್ ಲೋಕಲ್ ಅಭಿಯಾನಕ್ಕೆ ಕೈ ಜೋಡಿಸುವ ನಿಟ್ಟಿನಲ್ಲಿ ಈ ಉಡುಗೊರೆಯನ್ನು ನೀಡಲಾಯಿತು.
ಇಂದು ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲ್ವೇ ನಿಲ್ದಾಣದಲ್ಲಿ ಕರ್ನಾಟಕ ಭಾರತ್ ಗೌರವ್ ಕಾಶಿ ದರ್ಶನ ವಿಶೇಷ ರೈಲ್ ಗೆ ಪ್ರಧಾನಿ ನರೇಂದ್ರ ಮೋದಿಯವರು ಚಾಲನೆ ನೀಡಿದರು. ಈ ಸಂಧರ್ಭದಲ್ಲಿ ಕೊಪ್ಪಳ ಜಿಲ್ಲೆಯ ಪ್ರಮುಖ ಕಲೆಯಾಗಿರುವ ಕಿನ್ನಾಳ ಕಲೆಯ ಕಾಮಧೇನು ಅನ್ನು ಪ್ರಧಾನ ಮಂತ್ರಿಗೆ ಉಡುಗೊರೆಯಾಗಿ ನೀಡಲಾಯಿತು. ಸ್ಥಳೀಯ ಕಲಾವಿದರಿಂದ ಕಿನ್ನಾಳ ಕಲೆಯ ಕಾಮಧೇನು ನಿರ್ಮಿಸಲಾಗಿತ್ತು.
ಇದನ್ನೂ ಓದಿ : PM Modi in Bengaluru: ಪ್ರಧಾನಿ ಮೋದಿಗೆ ವ್ಯಂಗ್ಯವಾಗಿ ಪ್ರಶ್ನಿಸಿ ಸ್ವಾಗತ ಕೋರಿದ ಸಿದ್ದರಾಮಯ್ಯ
ನಮ್ಮ ಸ್ಥಳೀಯ ಕಲೆಗೆ ಉತ್ತೇಜನ ನೀಡುವ ಸಲುವಾಗಿ ಈ ಕಾಮಧೇನು ಅನ್ನು ಪ್ರಧಾನಿ ಮೋದಿ ಅವರಿಗೆ ಉಡುಗೊರೆಯಾಗಿ ನೀಡಲಾಯಿತು. ಪ್ರಧಾನಿ ನರೇಂದ್ರ ಮೋದಿಯವರು ಅತ್ಯಂತ ಸಂತೋಷದಿಂದ ಉಡುಗೊರೆ ಸ್ವೀಕರಿಸಿ ಅದರ ಬಗ್ಗೆ ಮಾಹಿತಿಯನ್ನು ಪಡೆದುಕೊಂಡರು.
ವಿಜಯನಗರ ಸಾಮ್ರಾಜ್ಯದ ಅವಧಿಯ ಈ ಕಲೆ ಇನ್ನಷ್ಟು ಪ್ರಚಾರ ಪಡೆದುಕೊಳ್ಳಲಿ ಎನ್ನುವುದು ನಮ್ಮ ಆಶಯ ಎಂದು ಸಚಿವರು ಇದೇ ಸಂದರ್ಭದಲ್ಲಿ ತಿಳಿಸಿದರು.
ಇದನ್ನೂ ಓದಿ : PM Modi in Bengaluru: ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರತಿಮೆ ಲೋಕಾರ್ಪಣೆಗೊಳಿಸಿದ ಪ್ರಧಾನಿ ಮೋದಿ
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.