Farmers Income : ರಾಜ್ಯ ಸರ್ಕಾರವು 2023-24 ರ ವೇಳೆಗೆ ರೈತರ ಆದಾಯ ದ್ವಿಗುಣಗೊಳಿಸುವ ಗುರಿ ; ವಿವರಗಳು ಇಲ್ಲಿದೆ ನೋಡಿ

ಆಹಾರ ಮತ್ತು ಎಲ್ಲಾ ಕೃಷಿ ಉತ್ಪನ್ನಗಳ ಸಂಸ್ಕರಣೆಗೆ ಸಂಬಂಧಿಸಿದಂತೆ ವಿಶೇಷ ಕಾರ್ಯಪಡೆ ರಚಿಸಲಾಗುತ್ತಿದೆ. ಇದು ತೋಟಗಾರಿಕೆ, ರೇಷ್ಮೆ ಕೃಷಿ, ಪಶು ಸಂಗೋಪನೆ, ಹೈನುಗಾರಿಕೆ, ಮೀನುಗಾರಿಕೆಯೊಂದಿಗೆ ವ್ಯವಹರಿಸುತ್ತದೆ. ಇದನ್ನು ದ್ವಿತೀಯ ಕೃಷಿ ನಿರ್ದೇಶನಾಲಯ ಎಂದು ಕರೆಯಲಾಗುವುದು ಎಂದು ಅವರು ವಿವರಿಸಿದರು.

Written by - Channabasava A Kashinakunti | Last Updated : Aug 27, 2021, 01:00 PM IST
  • ರೈತರ ಆದಾಯವನ್ನು ದ್ವಿಗುಣಗೊಳಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕೆಲಸ
  • 2023-24 ರ ವೇಳೆಗೆ ರೈತರ ಆದಾಯವನ್ನು ಎರಡು ಪಟ್ಟು ಹೆಚ್ಚಿಸುವ ಗುರಿ
  • 'ದ್ವಿತೀಯ ಕೃಷಿ ನಿರ್ದೇಶನಾಲಯ'ವನ್ನು ಸ್ಥಾಪಿಸಲು ನಿರ್ಧರಿಸಿದೆ
Farmers Income : ರಾಜ್ಯ ಸರ್ಕಾರವು 2023-24 ರ ವೇಳೆಗೆ ರೈತರ ಆದಾಯ ದ್ವಿಗುಣಗೊಳಿಸುವ ಗುರಿ ; ವಿವರಗಳು ಇಲ್ಲಿದೆ ನೋಡಿ title=

ಬೆಂಗಳೂರು : ರೈತರ ಆದಾಯವನ್ನು ದ್ವಿಗುಣಗೊಳಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕೆಲಸ ಮಾಡಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. 

ಈ ಕುರಿತು ಮಾತನಾಡಿದ ಸಿಎಂ ಬೊಮ್ಮಾಯಿ(Basavaraj Bommai), 2023-24 ರ ವೇಳೆಗೆ ರೈತರ ಆದಾಯವನ್ನು ಎರಡು ಪಟ್ಟು ಹೆಚ್ಚಿಸುವ ಮೊದಲ ರಾಜ್ಯವಾಗುವ ಗುರಿಯನ್ನು ನಾವು ಹೊಂದಿದ್ದೇವೆ ಎಂದು ಹೇಳಿದ್ದಾರೆ.

ಇದನ್ನೂ ಓದಿ : Karnataka School Reopening : 'ರಾಜ್ಯದಲ್ಲಿ 1 ರಿಂದ 8 ನೇ ತರಗತಿಗಳ ಶಾಲೆ ಪುನರಾರಂಭ ಬಗ್ಗೆ ಆ.30 ರಂದು ತೀರ್ಮಾನ'

ರಾಷ್ಟ್ರೀಯ ಮಳೆಯಾಶ್ರಿತ ಪ್ರದೇಶ ಪ್ರಾಧಿಕಾರ (NRAA) ಮತ್ತು ಚೇರ್ಮನ್ ಎಂಪವರ್ಡ್ ಬಾಡಿ ಡಬಲ್ಲಿಂಗ್ ಫೇಮರ್ ಆದಾಯ, ಕೃಷಿ ಸಚಿವಾಲಯ ಮತ್ತು ರೈತರ ಕಲ್ಯಾಣ ಸಿಇಒ ಡಾ ಅಶೋಕ್ ದಲ್ವಾಯಿ ಅವರೊಂದಿಗೆ ಚರ್ಚಿಸಿದ ನಂತರ ಸಿಎಂ ಬೊಮ್ಮಾಯಿ ಈ ಘೋಷಣೆ ಮಾಡಿದ್ದಾರೆ.

ಕರ್ನಾಟಕ ಸರ್ಕಾರ(Karnataka Government)ವು 'ದ್ವಿತೀಯ ಕೃಷಿ ನಿರ್ದೇಶನಾಲಯ'ವನ್ನು ಸ್ಥಾಪಿಸಲು ನಿರ್ಧರಿಸಿದೆ, ಇದು ಆಹಾರ ಮತ್ತು ಎಲ್ಲಾ ಕೃಷಿ ಉತ್ಪನ್ನಗಳ ಸಂಸ್ಕರಣೆಯ ಮೇಲೆ ಕೆಲಸ ಮಾಡುತ್ತದೆ.

ಇದನ್ನೂ ಓದಿ : 1 ಕೋಟಿ ರೂ. ಮೌಲ್ಯದ ಕಾರಿನಲ್ಲಿ ಮಾಜಿ ಸಿಎಂ ಬಿಎಸ್‍ವೈ ರಾಜ್ಯ ಪ್ರವಾಸ..!

ಆಹಾರ ಮತ್ತು ಎಲ್ಲಾ ಕೃಷಿ ಉತ್ಪನ್ನಗಳ ಸಂಸ್ಕರಣೆಗೆ ಸಂಬಂಧಿಸಿದಂತೆ ವಿಶೇಷ ಕಾರ್ಯಪಡೆ ರಚಿಸಲಾಗುತ್ತಿದೆ. ಇದು ತೋಟಗಾರಿಕೆ, ರೇಷ್ಮೆ ಕೃಷಿ, ಪಶು ಸಂಗೋಪನೆ, ಹೈನುಗಾರಿಕೆ, ಮೀನುಗಾರಿಕೆಯೊಂದಿಗೆ ವ್ಯವಹರಿಸುತ್ತದೆ. ಇದನ್ನು ದ್ವಿತೀಯ ಕೃಷಿ ನಿರ್ದೇಶನಾಲಯ ಎಂದು ಕರೆಯಲಾಗುವುದು ಎಂದು ಅವರು ವಿವರಿಸಿದರು.

ಕರ್ನಾಟಕವು ರೈತರ ಆದಾಯ(Farmers Income)ವನ್ನು ದ್ವಿಗುಣಗೊಳಿಸಲು ತೀವ್ರ ಆಸಕ್ತಿ ವಹಿಸಿದೆ. ನಾವು ಅದನ್ನು 2023-24 ರೊಳಗೆ ಸಾಧಿಸಬೇಕು. ವಿವರವಾದ ಚರ್ಚೆ ನಡೆಯುತ್ತಿದೆ. ರೈತರ ಆದಾಯವನ್ನು ಎರಡು ಪಟ್ಟು ಹೆಚ್ಚಿಸಲು ಹಲವಾರು ಕ್ರಮಗಳನ್ನು ತೆಗೆದುಕೊಳ್ಳಬೇಕಾಗಿದೆ ಮತ್ತು ಕೇಂದ್ರ ಸರ್ಕಾರವು ನಮ್ಮೊಂದಿಗೆ ಕೆಲಸ ಮಾಡಲು ಸಿದ್ಧವಾಗಿದೆ "ಎಂದು ಹೇಳಿದರು.

ಇದನ್ನೂ ಓದಿ : ಕೊರೊನಾ 3ನೇ ಅಲೆಗೆ ‘ಕೇರಳದ ಯಶಸ್ವಿ ಮಾದರಿ’ ಕಾರಣ: ಸಿಟಿ ರವಿ ಟೀಕೆ

ಕೃಷಿ ಸಚಿವರ ನೇತೃತ್ವದಲ್ಲಿ ರೈತರನ್ನು ಒಳಗೊಂಡ ಸಮಿತಿಯನ್ನು ರಚಿಸಲಾಗುವುದು. ಅವರು ಕೇಂದ್ರದೊಂದಿಗೆ ಸಂಪರ್ಕದಲ್ಲಿರುತ್ತಾರೆ ಮತ್ತು ಕರ್ನಾಟಕ ನಿರ್ದಿಷ್ಟ ವರದಿಯನ್ನು ತಯಾರಿಸುತ್ತಾರೆ. ಕೃಷಿ ವಿಶ್ವವಿದ್ಯಾನಿಲಯಗಳ ಸಹಾಯದಿಂದ ಬೀಜ, ಕೀಟ ಮತ್ತು ಗೊಬ್ಬರ ನಿರ್ವಹಣೆಯ ಮೇಲೆ ಗಮನ ಕೇಂದ್ರೀಕರಿಸಲಾಗುವುದು ಮತ್ತು ಮಣ್ಣಿನಲ್ಲಿ ಪೌಷ್ಟಿಕಾಂಶ ಮಟ್ಟವನ್ನು ಸುಧಾರಿಸಲು ಪ್ರಾಮುಖ್ಯತೆಯನ್ನು ನೀಡಲಾಗುವುದು ಎಂದು ಅವರು ಹೇಳಿದರು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News