ಚಿಕ್ಕಮಗಳೂರು : ಇಂಧನ ಸಚಿವರೂ ಆಗಿರುವ ಚಿಕ್ಕಮಗಳೂರು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್, ಬುಧವಾರ ಅರಳಗುಪ್ಪೆ ಮಲ್ಲೇಗೌಡ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ ಡೆಂಗ್ಯೂ ಜ್ವರದಿಂದ ಚೇತರಿಸಿಕೊಳ್ಳುತ್ತಿರುವ ರೋಗಿಗಳ ಆರೋಗ್ಯ ವಿಚಾರಿಸಿದ್ದಾರೆ. ಇದರ ಜೊತೆಗೆ ಆಸ್ಪತ್ರೆಯ ವ್ಯವಸ್ಥೆಯನ್ನು ಕೂಡಾ ಪರಿಶೀಲಿಸಿದರು.
ಇದೇ ವೇಳೆ, ಸಚಿವರು ಚಿಕ್ಕಮಗಳೂರು ಜಿಲ್ಲೆಯಲ್ಲಿ ಇತ್ತೀಚೆಗೆ ಹೆಚ್ಚಾಗುತ್ತಿರುವ ಡೆಂಗ್ಯೂ ಪ್ರಕರಣಗಳ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಕ್ರಮಗಳು, ಆಸ್ಪತ್ರೆಯ ವ್ಯವಸ್ಥೆ ಸುಧಾರಣೆ ಹಾಗೂ ಉತ್ತಮ ಚಿಕಿತ್ಸಾ ಸೌಲಭ್ಯ ಕಲ್ಲಿಸುವ ಕುರಿತು ಜಿಲ್ಲಾ ಆರೋಗ್ಯಾಧಿಕಾರಿಗಳು,ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರು,ವೈದ್ಯರ ತಂಡದೊಂದಿಗೆ ಸಚಿವರು ಚರ್ಚಿಸಿದರು.
ಇದನ್ನೂ ಓದಿ : ಜಾಹೀರಾತು ವಿಚಾರದಲ್ಲಿ ರಾಹುಲ್ ಗಾಂಧಿ ವಿರುದ್ಧ ಕೇಸು ದಾಖಲಿಸಿರುವುದು ಯಾವ ರಾಜಕಾರಣ: ಡಿಸಿಎಂ
ಆಸ್ಪತ್ರೆಗೆ ಭೇಟಿ ನೀಡಿದ ಸಂದರ್ಭದಲ್ಲಿ ರೋಗಿಗಳು ಹಾಗೂ ಸಂಬಂಧಿಕರಿಗೆ ಧೈರ್ಯ ತುಂಬಿದರಲ್ಲದೆ, ಉತ್ತಮ ಚಿಕಿತ್ಸೆ,ಆರೈಕೆಯ ಭರವಸೆ ನೀಡಿದರು.ಡೆಂಗ್ಯೂ ಹಿನ್ನೆಲೆಯಲ್ಲಿ ಸಾರ್ವಜನಿಕ ಜಾಗೃತಿ ಅಭಿಯಾನ ನಡೆಸಿ,ಜನರಲ್ಲಿ ಅರಿವು ಮೂಡಿಸುವಂತೆ ಆರೋಗ್ಯ ಅಧಿಕಾರಿಗಳಿಗೆ ಸಲಹೆ ನೀಡಿದರು.
ಬಳಿಕ ಮಾತನಾಡಿದ ಸಚಿವ ಕೆ.ಜೆ.ಜಾರ್ಜ್, "ಡೆಂಗ್ಯೂ ಹರಡುವಿಕೆಯನ್ನು ನಿಯಂತ್ರಿಸಲು ತಕ್ಷಣವೇ ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ. ಸಮುದಾಯದ ಆರೋಗ್ಯ ಮತ್ತು ಸುರಕ್ಷತೆಗೆ ನಮ್ಮ ಸರಕಾರ ಬದ್ಧವಾಗಿದೆ," ಎಂದು ತಿಳಿಸಿದರು.
ಇದನ್ನೂ ಓದಿ : ದೇವೆಗೌಡರ ಕುಟುಂಬ ಆಯಿತು, ಈಗ ಯಡಿಯೂರಪ್ಪ ಕುಟುಂಬದ ವಿರುದ್ಧ ಕಾಂಗ್ರೆಸ್ ಸಂಚು : ಹೆಚ್ಡಿಕೆ
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ