ಬೆಂಗಳೂರು: ಇಂಧನ ದರ ಏರಿಕೆ, ಖಾದ್ಯ ತೈಲ ದರ ಏರಿಕೆಯಿಂದಾಗಿ ತತ್ತರಿಸಿರುವ ಗ್ರಾಹಕರಿಗೆ ಮತ್ತೊಂದು ಶಾಕ್ ಕಾದಿದ್ದು, ಶೀಘ್ರದಲ್ಲೇ ನಂದಿನಿ ಹಾಲಿನ ದರ ಕೂಡ ಏರಿಕೆಯಾಗಲಿದೆ.


COMMERCIAL BREAK
SCROLL TO CONTINUE READING

ಈ ಬಗ್ಗೆ ಸ್ವತಃ ಕರ್ನಾಟಕ ಹಾಲು ಒಕ್ಕೂಟ ನಿರ್ದೇಶಕ ಸತೀಶ್ ರವರು ಮಾಹಿತಿ ನೀಡಿದ್ದು, ನಂದಿನಿ ಹಾಲಿನ ಪಾಕೆಟ್ ದರ ಹೆಚ್ಚಳಕ್ಕೆ 14 ಜಿಲ್ಲೆಗಳ ಹಾಲಿನ ಒಕ್ಕೂಟದವರು ಒತ್ತಡ ಮಾಡ್ತಿದ್ದಾರೆ. ಹಾಲಿನ ದರ ಹೆಚ್ಚಳ ಮಾಡಿದರೆ ಅದನ್ನೇ ರೈತರಿಗೆ ನೀಡುತ್ತೇವೆ ಎಂದು ತಿಳಿಸಿದ್ದಾರೆ.


ಇದನ್ನೂ ಓದಿ- ಬಾಲಕಿಯರ ಮೇಲೆ ದೌರ್ಜನ್ಯ ಆರೋಪ.. ಮುರುಘಾ ಶ್ರೀಗಳು ಪೊಲೀಸ್‌ ವಶಕ್ಕೆ!?


ನಂದಿನಿ ಹಾಲಿನ ಪಾಕೆಟ್ ದರ ಏರಿಕೆ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಬಳಿ ಪ್ರಸ್ತಾವನೆ ಸಲ್ಲಿಸಲಾಗಿದೆ. ಸಾಧಕ ಬಾಧಕ ನೋಡಿ ಬಳಿಕ ನಿರ್ಧಾರ ತಗೆದುಕೊಳ್ಳೋಣ ಎಂದು ಮುಖ್ಯಮಂತ್ರಿಗಳು ತಿಳಿಸಿದ್ದಾರೆ ಎಂದು ಸತೀಶ್ ಹೇಳಿದ್ದಾರೆ.


ಪ್ರಸ್ತುತ ಪ್ರತೀ ಲೀಟರ್ ಹಾಲಿನ ಪಾಕೆಟ್ ದರ 37 ರೂ ಇದ್ದು, ಸರ್ಕಾರ ಒಪ್ಪಿದರೆ 40 ರೂ ಆಗಲಿದೆ. ಹೀಗಾಗಿ ಗ್ರಾಹಕರಿಗೆ ಸಣ್ಣ ಹೊರೆಯಾದ್ರು ಆ ದರವನ್ನು ಕಷ್ಟದಲ್ಲಿರುವ ಹಾಲು ಉತ್ಪಾದಕರಿಗೆ ನೀಡಲಾಗುತ್ತಿದ್ದು, ಗ್ರಾಹಕರ ಸಹಕರಿಸಬೇಕೆಂದು KMF ಎಂಡಿ ಸತೀಶ್ ಮನವಿ ಮಾಡಿದರು.


ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ