ಜನಸಾಮಾನ್ಯರಿಗೆ ಮತ್ತೊಂದು ಶಾಕಿಂಗ್!: ಶೀಘ್ರವೇ ನಂದಿನ ಹಾಲಿನ ದರ 3 ರೂ. ಹೆಚ್ಚಳ
ರಾಜ್ಯದ 16 ಹಾಲು ಒಕ್ಕೂಟಗಳು ದರ ಪರಿಷ್ಕರಣೆಗೆ ಪ್ರಸ್ತಾವನೆ ಸಲ್ಲಿಸಿವೆ. ಹೀಗಾಗಿ ಬೆಲೆ ಏರಿಕೆ ಅನಿವಾರ್ಯ ಎಂದು ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ.
ಬೆಳಗಾವಿ: ಶೀಘ್ರವೇ ನಂದಿನಿ ಹಾಲಿನ ದರವನ್ನು ಪ್ರತಿ ಲೀಟರ್‌ಗೆ 3 ರೂ. ಹೆಚ್ಚಿಸುತ್ತೇವೆ ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ. ಇದರಿಂದ ಹಣದುಬ್ಬರ ಮತ್ತು ಬೆಲೆ ಏರಿಕೆಯಿಂದ ಕಂಗಾಲಾಗಿರುವ ಜನಸಾಮಾನ್ಯರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ.
ರಾಜ್ಯದಲ್ಲಿ ಪ್ರತಿ ಲೀಟರ್ ನಂದಿನಿ ಹಾಲಿಗೆ 3 ರೂ. ಹೆಚ್ಚಳಕ್ಕೆ ನಿರ್ಧರಿಸಲಾಗಿದೆ. ದರ ಪರಿಷ್ಕರಣೆಯ ಸಂಪೂರ್ಣ ಹಣವು ರೈತರಿಗೆ ಸಿಗಲಿದೆ ಎಂದು ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಹುಲಿಕಟ್ಟಿ ಗ್ರಾಮದಲ್ಲಿ ಬಾಲಚಂದ್ರ ಜಾರಕಿಹೊಳಿ ಹೇಳಿದ್ದಾರೆ.
ಇದನ್ನೂ ಓದಿ: "ಈ ದೇಶದಲ್ಲಿ ಜನರಿಗೆ ಕೊಟ್ಟ ಮಾತು ಉಳಿಸಿಕೊಂಡ ಏಕೈಕ ನಾಯಕ ಕುಮಾರಸ್ವಾಮಿ ಅವರು ಮಾತ್ರ"
ರಾಜ್ಯದ 16 ಹಾಲು ಒಕ್ಕೂಟಗಳು ದರ ಪರಿಷ್ಕರಣೆಗೆ ಪ್ರಸ್ತಾವನೆ ಸಲ್ಲಿಸಿವೆ. ಹೀಗಾಗಿ ಬೆಲೆ ಏರಿಕೆ ಮಾಡುವುದು ನಮಗೆ ಅನಿವಾರ್ಯವಾಗಿದೆ. ದರ ಏರಿಕೆ ಬಗ್ಗೆ ಸಾಮಾನ್ಯ ಸಭೆಯಲ್ಲಿ ತೀರ್ಮಾನ ಮಾಡುತ್ತೇವೆ ಎಂದು ಅವರು ಹೇಳಿದ್ದಾರೆ.
ರಾಜ್ಯದ ರೈತರು ಸಂಕಷ್ಟದಲ್ಲಿದ್ದಾರೆಂದು ಕೆಎಂಎಫ್ ಹೇಳಿದೆ. ಈ ಹಿನ್ನೆಲೆ ರಾಜ್ಯ ಸರ್ಕಾರದ ಅನುಮೋದನೆ ಇಲ್ಲದಿದ್ದರೂ ಹಾಲಿನ ಬೆಲೆಯನ್ನು ಪ್ರತಿ ಲೀಟರ್‌ಗೆ 3 ರೂ. ಹೆಚ್ಚಿಸಲು KMF ಮುಂದಾಗಿದೆ. ಹಾಲಿನ ದರ ಹೆಚ್ಚಳ ಮಾಡುವಂತೆ ಕಳೆದ 8 ತಿಂಗಳಿನಿಂದ ಕೆಎಂಎಫ್ ರಾಜ್ಯ ಸರ್ಕಾರಕ್ಕೆ ಮನವಿ ಮಾಡುತ್ತಿದೆ. ಆದರೆ ಇದಕ್ಕೆ ರಾಜ್ಯ ಸರ್ಕಾರ ಸ್ಪಂದಿಸುತ್ತಿಲ್ಲ. ಹೀಗಾಗಿ ದರ ಏರಿಕೆ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ: ಕಾಂಗ್ರೆಸ್ ಗೆ ಲೋಕಾಯುಕ್ತದ ಮೇಲೆ ನಂಬಿಕೆಯೇ ಇಲ್ಲ-ಸಚಿವ ಡಾ.ಕೆ.ಸುಧಾಕರ್
ಈಗಾಗಲೇ ದಿನ ಬಳಕೆ ವಸ್ತುಗಳು ಸೇರಿ ಎಲ್ಲಾ ರೀತಿಯ ಬೆಲೆ ಏರಿಕೆಯಿಂದ ಜನಸಾಮಾನ್ಯರು ತತ್ತರಿಸಿದ್ದಾರೆ. ಇದೀಗ ಹಾಲಿನ ದರವನ್ನು ಸಹ ಏರಿಸಲು ನಿರ್ಧರಿಸಿರುವುದರಿಂದ ಜನಸಾಮಾನ್ಯರ ಜೇಬಿಗೆ ಮತ್ತಷ್ಟು ಕತ್ತರಿ ಬೀಳಲಿದೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.