ಶ್ರೀ ಶಿವಕುಮಾರ ಸ್ವಾಮೀಜಿ ಗದ್ದುಗೆ ವಿಶೇಷತೆಗಳು...

39 ವರ್ಷಗಳ ಹಿಂದೆ ಶ್ರೀ ಶಿವಕುಮಾರ ಸ್ವಾಮೀಜಿ ಲಿಂಗೈಕ್ಯರಾಗುವ ಭವನ ನಿರ್ಮಾಣ ಕಾರ್ಯ ಪ್ರಾರಂಭವಾಗಿತ್ತು. ಕಾರಣಾಂತರಗಳಿಂದ ನಡುವೆ ನಿಧಾನಗತಿಯಲ್ಲಿ ಸಾಗಿದ್ದ ಕಾಮಗಾರಿ ಇತ್ತೀಚೆಗೆ ವೇಗ ಪಡೆದಿತ್ತು. ಇದೇ ಸಮಾಧಿ ಭವನದಲ್ಲಿ ಈಗಾಗಲೇ ಅಂತಿಮ ವಿಧಿ ವಿಧಾನ ನೆರವೇರಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ.

Last Updated : Jan 22, 2019, 04:44 PM IST
 ಶ್ರೀ ಶಿವಕುಮಾರ ಸ್ವಾಮೀಜಿ ಗದ್ದುಗೆ ವಿಶೇಷತೆಗಳು... title=

ತುಮಕೂರು: ನಿನ್ನೆಯಷ್ಟೇ ನಿಧನರಾದ ನಡೆದಾಡುವ ದೇವರು, ತ್ರಿವಿಧ ದಾಸೋಹಿ ಶ್ರೀ ಶಿವಕುಮಾರ ಸ್ವಾಮೀಜಿಯವರು ಐಕ್ಯವಾಗಲಿರುವ ಗದ್ದುಗೆ ಬಗ್ಗೆ 70ವರ್ಷಗಳ ಹಿಂದೆಯೇ ಸ್ಥಳ ನಿಗದಿಯಾಗಿತ್ತು ಎನ್ನಲಾಗಿದೆ. ಸಂಪೂರ್ಣ ಅಮೃತ ಶಿಲೆಯಿಂದ ನಿರ್ಮಾಣವಾಗಿರುವ ಈ ಗದ್ದುಗೆ ಭವನ ಹಲವು ಕುತೂಹಲಕಾರಿ ವಿಷಯಗಳನ್ನು ಒಳಗೊಂಡಿದೆ. 

ಎಲ್ಲಕ್ಕಿಂತ ಅಚ್ಚರಿಯ ವಿಷಯವೆಂದರೆ 37 ವರ್ಷಗಳ ಹಿಂದೆ ಶ್ರೀ ಶಿವಕುಮಾರ ಸ್ವಾಮಿಗಳೇ ತಮ್ಮ ಸಮಾಧಿ ನಿರ್ಮಾಣಕ್ಕೆ ತಾವೇ ಅಡಿಗಲ್ಲು ಹಾಕಿದ್ದರಂತೆ.  ಸ್ವಾಮೀಜಿಗಳು ಎಪ್ಪತ್ತನೇ ವರ್ಷದಲ್ಲಿದ್ದಾಗಲೇ ತಾವು ಐಕ್ಯವಾಗಲು ಸ್ಥಳ ಹುಡುಕುತ್ತಿದ್ದ ಸಂದರ್ಭದಲ್ಲಿ ಅವರ ಹಿರಿಯ ಗುರುಗಳು ನೀರೆರೆದು ಪೋಷಿಸಿದ್ದ ಬೃಹತ್‌ ಆಲದ ಮರ ನೆಲಕ್ಕುರುಳಿದ್ದ ಸ್ಥಳವನ್ನೇ ಸಮಾಧಿಕೆ ಆಯ್ಕೆ ಮಾಡಿದ್ದರು. ಅದೇ ಸ್ಥಳದಲ್ಲಿ 39 ವರ್ಷಗಳ ಹಿಂದೆ ಶ್ರೀ ಶಿವಕುಮಾರ ಸ್ವಾಮೀಜಿ ಲಿಂಗೈಕ್ಯರಾಗುವ ಭವನ ನಿರ್ಮಾಣ ಕಾರ್ಯ ಪ್ರಾರಂಭವಾಗಿತ್ತು. ಕಾರಣಾಂತರಗಳಿಂದ ನಡುವೆ ನಿಧಾನಗತಿಯಲ್ಲಿ ಸಾಗಿದ್ದ ಕಾಮಗಾರಿ ಇತ್ತೀಚೆಗೆ ವೇಗ ಪಡೆದಿತ್ತು. ಇದೇ ಸಮಾಧಿ ಭವನದಲ್ಲಿ ಈಗಾಗಲೇ ಅಂತಿಮ ವಿಧಿ ವಿಧಾನ ನೆರವೇರಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ.

ಗದ್ದುಗೆ ವಿಶೇಷತೆಗಳು
* ಶ್ರೀಗಳ ಗದ್ದುಗೆ ಭವನವನ್ನು ಸಂಪೂರ್ಣ ಅಮೃತ ಶಿಲೆಯಿಂದ ನಿರ್ಮಿಸಲಾಗಿದೆ. 
* ಗದ್ದುಗೆಯ ನಾಲ್ಕು ಮೂಲೆಗಳಲ್ಲಿ ಕರಡಿಗೆಯ ಚಿತ್ರ ಕೆತ್ತನೆ.
* ಗದ್ದುಗೆ ಗದ್ದುಗೆ ಗರ್ಭಗುಡಿ ಶಿಲಾ ಬಾಗಿಲ ಮೇಲೆ 26 ದೇವರುಗಳ ಕೆತ್ತನೆ
* ಬಾಗಿಲ ಎಡ, ಬಲ ಭಾಗದಲ್ಲಿ ಅಷ್ಟ ದಿಕ್ಪಾಲಕರ ಕೆತ್ತನೆ.
* ಸಿದ್ದಗಂಗಾ ಮಠದ ದೇವರಾದ ಸಿದ್ದಲಿಂಗೇಶ್ವರ ಸ್ವಾಮೀಜಿ, ಬಸವಣ್ಣ, ಲಿಂಗೈಕ್ಯ ಗೋಸಲ ಸಿದ್ದೇಶ್ವರ, ಉದ್ದಾನ ಶಿವಯೋಗಿ, ಯಡಿಯೂರು ಸಿದ್ದಲಿಂಗೇಶ್ವರ, ಅಟವಿ ಶಿವಯೋಗಿ, ಬೇಡರ ಕಣ್ಣಪ್ಪ, ಅಕ್ಕಮಹಾದೇವಿ ಸೇರಿದಂತೆ 26 ಮೂರ್ತಿಗಳ ಕೆತ್ತನೆ.
* ಸಂಪೂರ್ಣ ಹವಾನಿಯಂತ್ರಿತ ಗರ್ಭಗುಡಿ

Trending News