CM Siddaramaiah: ಸಹವಾಸ ದೋಷದಿಂದಲೂ ಅನಾರೋಗ್ಯ ತರುವ ಚಟಗಳು ಅಂಟಿಕೊಳ್ಳುತ್ತವೆ. ಆದರೆ ಸದಾ ಎಚ್ಚರದಿಂದ ನಮ್ಮನ್ನು ನಾವು ಕಾಪಾಡಿಕೊಳ್ಳಬೇಕು. ನಾನೂ ಮೊದಲು ಸಿಗರೇಟ್ (Cigarette) ಸೇದುತ್ತಿದ್ದೆ. ಒಮ್ಮೆ ವಿದೇಶಕ್ಕೆ ಹೋದಾಗ ಸ್ನೇಹಿತರು ಸಿಗರೇಟ್ ಪ್ಯಾಕ್ ತಂದುಬಿಟ್ಟಿದ್ದರು. ನಾನು ಕಡಿಮೆ ಅವಧಿಯಲ್ಲಿ ಹೆಚ್ಚು ಸಿಗರೇಟ್ ಸೇದಿಬಿಟ್ಟೆ. ಅವತ್ತೇ ನನಗೆ ಮನವರಿಕೆ ಆಯ್ತು. ಮನವರಿಕೆ ಆಗಿದ್ದು ಆಗಸ್ಟ್ 27 ನೇ ತಾರೀಕಿನಂದು. ಅದೇ ದಿನ ಸಿಗರೇಟ್ ಸೇದುವುದನ್ನು ಸಂಪೂರ್ಣ ನಿಲ್ಲಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಆ ದಿನವನ್ನು ನೆನಪಿಸಿಕೊಂಡರು.


COMMERCIAL BREAK
SCROLL TO CONTINUE READING

ಸಚಿವಾಲಯದ ಅಧಿಕಾರಿ ಮತ್ತು ಸಿಬ್ಬಂದಿಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಆಯೋಜಿಸಿದ್ದ ಉಚಿತ ಆರೋಗ್ಯ ತಪಾಸಣಾ ಮತ್ತು ಚಿಕಿತ್ಸಾ ಶಿಬಿರವನ್ನು (Free health checkup and treatment Camp) ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ (CM Siddaramaiah), ದೈಹಿಕವಾಗಿ ಚಟುವಟಿಕೆ ಇಲ್ಲದೆ ಕುಳಿತವರಿಗೆ ಅನಾರೋಗ್ಯ ಹೆಚ್ಚು. ಆದ್ದರಿಂದ ದೈಹಿಕ ಮತ್ತು ಮಾನಸಿಕ ಚಟುವಟಿಕೆ ಅಗತ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. 


ಇದನ್ನೂ ಓದಿ- ವಾಲ್ಮೀಕಿ ನಿಗಮ ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ: ಸಿಎಂ ಸಿದ್ದರಾಮಯ್ಯ


ಜೀವನಶೈಲಿ ಮತ್ತು ಆಹಾರ ಪದ್ಧತಿ ಮನುಷ್ಯನ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತಿದೆ. ರಾಜ್ಯ ಸರ್ಕಾರ ಎಲ್ಲಾ ಜನ ವರ್ಗಕ್ಕೆ ಆರೋಗ್ಯ ಮತ್ತು ಅಗತ್ಯ ಚಿಕಿತ್ಸೆಗೆ ಒದಗಿಸಲು ಕಾರ್ಯಕ್ರಮಗಳನ್ನು ನಿರಂತರವಾಗಿ ರೂಪಿಸಿ, ಜಾರಿ ಮಾಡುತ್ತಿದ್ದೇವೆ. ಕ್ಯಾನ್ಸರ್ ನಂತಹ ಮಾರಕ ರೋಗವನ್ನೂ ಗುಣಪಡಿಸುವುದು ಸಾಧ್ಯವಿದೆ. ನಿಯಮಿತವಾಗಿ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುತ್ತಿದ್ದರೆ ದೀರ್ಘಕಾಲ ಆರೋಗ್ಯ ಕಾಪಾಡಿಕೊಳ್ಳುವುದು ಸಾಧ್ಯವಿದೆ ಎಂದು ಸಿಎಂ ಹೇಳಿದರು. 


ಇದನ್ನೂ ಓದಿ- ಸಚಿವ ನಾಗೇಂದ್ರ ರಾಜಿನಾಮೆ ಕೇಳಿಲ್ಲ:ಮುಖ್ಯಮಂತ್ರಿ ಸಿದ್ದರಾಮಯ್ಯ


ಹಿಂದಿನವರ ಆರೋಗ್ಯ ಪದ್ಧತಿ ಮತ್ತು ಶ್ರಮಾಧಾರಿತ ಜೀವನ ಶೈಲಿ ಅವರನ್ನು ಗಟ್ಟಿಮುಟ್ಟಾಗಿ ಸದೃಡವಾಗಿ ಇಟ್ಟಿತ್ತು. ತುಂಬಾ ವಯಸ್ಸಾದ ಮೇಲೆ ಬರುವ ಆರೋಗ್ಯ ಸಮಸ್ಯೆಗಳು ಬರದಂತೆ ವಯಸ್ಸಿದ್ದಾಗಲೇ ಪ್ರಯತ್ನಿಸಿ ಎಂದು ಕರೆ ನೀಡಿದರು. ಇಂಥಾ ಆರೋಗ್ಯ ತಪಾಸಣಾ ಶಿಬಿರಗಳು ಮೇಲಿಂದ ಮೇಲೆ ಆಗಬೇಕು. ರಾಜ್ಯದ ಮೂಲೆ ಮೂಲೆಗಳಲ್ಲೂ ನಡೆಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. 


ಈ ಸಂದರ್ಭದಲ್ಲಿ ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್,  ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಎಚ್.ಎಂ.ರೇವಣ್ಣ, ಮುಖ್ಯ ಸಚೇತಕರಾದ ಅಶೋಕ್ ಪಟ್ಟಣ್ , ಅಪರ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಉಪಸ್ಥಿತರಿದ್ದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.