ಕೊಡಗು ಪ್ರವಾಹ: ಪ್ರವಾಹ ಸಂತ್ರಸ್ತರ ಅಹವಾಲು ಆಲಿಸಿದ ಮಾಜಿ ಸಿಎಂ ಸಿದ್ದರಾಮಯ್ಯ

ತಗ್ಗಿನ ಪ್ರದೇಶದಲ್ಲಿ ವಾಸವಿದ್ದು, ಸೂರು ಕಳೆದುಕೊಂಡು ನಿರ್ಗತಿಕರಾದವರಿಗೆ ಸರ್ಕಾರದ ವತಿಯಿಂದ ಮನೆ ನಿರ್ಮಿಸಿಕೊಡುವುದಾಗಿ ಇದೇ ಸಂದರ್ಭದಲ್ಲಿ ಅವರು ಭರವಸೆ ನೀಡಿದರು.

Last Updated : Aug 23, 2018, 04:15 PM IST
ಕೊಡಗು ಪ್ರವಾಹ: ಪ್ರವಾಹ ಸಂತ್ರಸ್ತರ ಅಹವಾಲು ಆಲಿಸಿದ ಮಾಜಿ ಸಿಎಂ ಸಿದ್ದರಾಮಯ್ಯ title=

ಕೊಡಗು: ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಇಂದು ಪ್ರವಾಹ ಪೀಡಿತ ಕೊಡಗು ಜಿಲ್ಲೆಯ ಕುಶಾಲನಗರಕ್ಕೆ ಭೇಟಿ ನೀಡಿ ಸಂತ್ರಸ್ತರ ಅಹವಾಲು ಆಲಿಸಿದರು.

ಮಡಿಕೇರಿಯ ಸುಂಟಿಕೊಪ್ಪದ ಪರಿಹಾರ ಕೇಂದ್ರಕ್ಕೆ ಭೇಟಿ ನೀಡಿ, ಸಾರ್ವಜನಿಕರ ಅಹವಾಲು ಆಲಿಸಿದ ಸಿದ್ದರಾಮಯ್ಯ ಈ ಸಂದರ್ಭದಲ್ಲಿ ಮನೆ ಕಳೆದುಕೊಂಡವರಿಗೆ ಸರ್ಕಾರದ ಮೂಲಕ ಪುನರ್ವಸತಿ ಕಲ್ಪಿಸುವ ಭರವಸೆಯನ್ನು ನೀಡಿದರು. ಹಾನಿಗೊಳಗಾದ ಪ್ರದೇಶದ ಜನ ಜೀವನ ಸುಧಾರಣೆಗೆ ಸರ್ಕಾರದ ಮೂಲಕ ಎಲ್ಲ ರೀತಿಯ ನೆರವು ಒದಗಿಸಲಾಗುವುದು ಎಂದು ಹೇಳಿದರು.

Trending News