ಕೊಡಗು: ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಇಂದು ಪ್ರವಾಹ ಪೀಡಿತ ಕೊಡಗು ಜಿಲ್ಲೆಯ ಕುಶಾಲನಗರಕ್ಕೆ ಭೇಟಿ ನೀಡಿ ಸಂತ್ರಸ್ತರ ಅಹವಾಲು ಆಲಿಸಿದರು.



COMMERCIAL BREAK
SCROLL TO CONTINUE READING

ಮಡಿಕೇರಿಯ ಸುಂಟಿಕೊಪ್ಪದ ಪರಿಹಾರ ಕೇಂದ್ರಕ್ಕೆ ಭೇಟಿ ನೀಡಿ, ಸಾರ್ವಜನಿಕರ ಅಹವಾಲು ಆಲಿಸಿದ ಸಿದ್ದರಾಮಯ್ಯ ಈ ಸಂದರ್ಭದಲ್ಲಿ ಮನೆ ಕಳೆದುಕೊಂಡವರಿಗೆ ಸರ್ಕಾರದ ಮೂಲಕ ಪುನರ್ವಸತಿ ಕಲ್ಪಿಸುವ ಭರವಸೆಯನ್ನು ನೀಡಿದರು. ಹಾನಿಗೊಳಗಾದ ಪ್ರದೇಶದ ಜನ ಜೀವನ ಸುಧಾರಣೆಗೆ ಸರ್ಕಾರದ ಮೂಲಕ ಎಲ್ಲ ರೀತಿಯ ನೆರವು ಒದಗಿಸಲಾಗುವುದು ಎಂದು ಹೇಳಿದರು.