ರಾಮನಗರ: ಕುಟುಂಬ ಸಮೇತರಾಗಿ ಬೆಂಗಳೂರಿಗೆ ತೆರಳುತ್ತಿದ್ದ ಸಂಸದ ಪ್ರತಾಪ್ ಸಿಂಹ ಅವರ ಕಾರು ಅಪಘಾತಕ್ಕೀಡಾಗಿದೆ. ಕಾರು ಪಲ್ಟಿಯಾದ ಪರಿಣಾಮ ಸಂಸದ ಪ್ರತಾಪ್ ಸಿಂಹ ಹಾಗೂ ಅವರ ಕಾರು ಚಾಲಕನಿಗೆಸಣ್ಣ ಪುಟ್ಟ  ಗಾಯಗಳಾಗಿವೆ ಎಂದು ವರದಿಯಾಗಿದೆ.


COMMERCIAL BREAK
SCROLL TO CONTINUE READING

ಸಂಸದ ಪ್ರತಾಪ್ ಸಿಂಹ (MP Pratap Simha) ಅವರು ಮೈಸೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ರಾಮನಗರ ಜಿಲ್ಲೆಯ ಮುದುಗೆರೆ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ. ಕಾರಿನಲ್ಲಿ ಸಂಸದ ಪ್ರತಾಪ್ ಸಿಂಹ, ಅವರ ಪತ್ನಿ, ಮಗಳು ಮತ್ತು ಕಾರಿನ ಚಾಲಕ ಸೇರಿದಂತೆ 6 ಜನರಿದ್ದರು. ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ.


ಇದನ್ನೂ ಓದಿ- ಕಣ್ಣು ನೋವಿನ ನೆವ ಹೇಳಿದ್ದ ಸಿದ್ದರಾಮಯ್ಯ ಸೋನಿಯಾ ಎದುರು ಕೈಕಟ್ಟಿ ಕುಳಿತಿದ್ದರು: ಬಿಜೆಪಿ


ಮೈಸೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ವೇಳೆ ವೇಗವಾಗಿ ಚಲಿಸುತ್ತಿದ್ದ ಎಸ್ ಯು ವಿ ವಾಹನ ನಿಯಂತ್ರಣ ತಪ್ಪಿ (Car Accident) ಪಲ್ಟಿಯಾಗಿದೆ. ಆದರೆ ಅದೃಷ್ಟವಶಾತ್ ಯಾರಿಗೂ ಕೂಡ ತೀವ್ರವಾಗಿ ಗಾಯವಾಗಿಲ್ಲ ಎಂದು ಹೇಳಲಾಗುತ್ತಿದೆ.


ಇದನ್ನೂ ಓದಿ- ಹಾಲಕೆರೆ ಶ್ರೀಗಳು ಲಿಂಗೈಕ್ಯ: ಸಿಎಂ ಬೊಮ್ಮಾಯಿ ಸೇರಿದಂತೆ ಗಣ್ಯರ ಸಂತಾಪ 


ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಮುದುಗೆರೆ ಗ್ರಾಮದ ಹೆದ್ದಾರಿ ಬಳಿ ಸಂಸದ ಪ್ರತಾಪ್ ಸಿಂಹ ಅವರ ಕಾರು ಪಲ್ಟಿಯಾಗಿರುವ ದೃಶ್ಯ ಸೋಶಿಯಲ್ ಮಿಡಿಯಾದಲ್ಲಿ ವೈರಲ್ ಆಗಿದ್ದು ಸಾರ್ವಜನಿಕರು ಪ್ರತಾಪ್ ಸಿಂಹ ಅವರ ಬಗ್ಗೆ ಆತಂಕ ವ್ಯಕ್ತಪಡಿಸುತ್ತಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.