ಧಾರವಾಡ : ಪ್ರಾರಂಭದಲ್ಲೇ ನಾನು ಹೇಳಿದ್ದೆ, ಮಳೆ, ಗಾಳಿ, ಗುಡುಗು ಇದೆ. ಬೆಂಕಿಯಿಂದ ಕಾಟ, ಮತಾಂದತೆ ಹೆಚ್ಚಳ, ಸಾವು ನೋವುಗಳಾಗುತ್ತವೆ ಎಂದು ಕೋಡಿಮಠದ ಶ್ರೀಗಳು ಕರಾಳ ಭವಿಷ್ಯ ನುಡದಿದ್ದಾರೆ.


COMMERCIAL BREAK
SCROLL TO CONTINUE READING

ಈ ಬಗ್ಗೆ ಸುದ್ದಿಗಾರರ ಜೊತೆ ಮಾತನಾಡಿದ ಶ್ರೀಗಳು, ಜನ ಅಶಾಂತಿಯಿಂದ ಇರುತ್ತಾರೆ. ಭೂಮಿ ನಡುಗುತ್ತದೆ, ಕುಸಿಯುತ್ತದೆ ರೋಗ ಹೆಚ್ಚಾಗುತ್ತವೆ ಎಂದು ಹೇಳಿದ್ದೆ. ಅದರಂತೆ ಇನ್ನೂ ಮುಂದೆ ಮಳೆಯಾಗುವ ಲಕ್ಷಣ ಇದೆ. ಕಾರ್ತಿಕ ಮಾಸದಲ್ಲಿ ತೊಂದರೆಯಾಗುವ ಲಕ್ಷಣ ಇದೆ. ಮಳೆಯಿಂದ, ರೋಗದಿಂದ ಭೂಮಿಯಿಂದ ತೊಂದರೆಯಾಗುತ್ತದೆ. ವಿಶೇಷವಾಗಿ ಹಿಂದೆ ಹೇಳಿದಂತೆ ಕಾಡಿನಿಂದ ನಾಡಿಗೆ ಪ್ರಾಣಿಗಳು ಬರುತ್ತವೆ ಎಂದು, ಈಗಲೂ ಅಂತಹ ಪರಿಸ್ಥಿತಿದೆ.  ಕಾಡಿನಿಂದ ನಾಡಿಗೆ ಪ್ರಾಣಿಗಳು ಬರುತ್ತವೆ. ಭೂಮಿಯಲ್ಲಿ ಇರುವಂತೆ ವಿಷಜಂತು, ಪ್ರಾಣಿಗಳು ಹೊರಬಂದು. ಜನರಿಗೆ ತೊಂದರೆ ಕೊಡುವ ಪ್ರಸಂಗ ಬಹಳ ಇದೆ. ಹಾಗಾಗಿ ಪ್ರಕೃತಿ ಅಲ್ಲೋಲ ಕಲ್ಲೋಲ ಆಗುವ ಪ್ರಸಂಗ ಹೆಚ್ಚಿದೆ. ಈ ಸಂವತ್ಸರದ ಕಡೆವರೆಗೂ ಈ ತೊಂದರೆ ಇದೆ. ಅಚ್ಛರಿಯ ಅವಘಡ ಕಾದಿದೆ ಎಂದು ಈ ಹಿಂದೆ ಹೇಳಿದ್ದೆ. ಅದನ್ನು ಆಗುತ್ತದೆ ಕಾದು ನೋಡಿ. ಬೆಂಕಿಯಿಂದ ಹೆಚ್ಚು ಸಮಸ್ಯೆ ಇದೆ. ಅಪಮೃತ್ಯು ಹೆಚ್ಚಿದೆ. ಅಶಾಂತಿಯಾಗಿ ಕಲಹಗಳು ಹೆಚ್ಚಾಗುತ್ತವೆ. ಒಂದೆಡೆ ಪ್ರಕೃತಿ ವಿಕೋಪ, ಮತಾಂದತೆ ಹೆಚ್ಚಾಗಿ ಅಶಾಂತಿ, ಕಲಹಗಳು ಹೆಚ್ಚಾಗಿ ಜನಮನವನ್ನು ಶಾಂತಿ ಕದಡುವ ಕೆಲಸ ಆಗುತ್ತದೆ. 


ಇದನ್ನೂ ಓದಿ : Expensive Dog : ₹10 ಕೋಟಿ ಮೌಲ್ಯದ ನಾಯಿ ನೋಡಲು ಮುಗಿಬಿದ್ದ ಜನ!


ರಾಜಕೀಯ ಬಗ್ಗೆ ಭವಿಷ್ಯ ನುಡಿದ ಅವರು, ರಾಜಕೀಯ ಈಗ ಚೆನ್ನಾಗಿ ನಡೆಯುತ್ತಿದೆ.ಚುನಾವಣೆ ಕಾಲದಲ್ಲಿ ಹೇಳುತ್ತೇನೆ. ಇನ್ನೊಂದು ವರ್ಷದಲ್ಲಿ ಕೊರೊನಾ ಹೋಗುತ್ತದೆ. ಬಳ್ಳಾರಿಯಲ್ಲಿ ಈ ಬಗ್ಗೆ ಹೇಳಿದ್ದೆ. ಕೊರೊನಾ ಹೋಗುತ್ತದೆ. ಹೋಗುವಾಗ ಜಗತ್ತಿಗೆ ವಿಪರೀತ ಕ್ಷಾಮ ಕೊಟ್ಟು ಹೋಗುತ್ತದೆ. ದುಃಖ ಕೊಟ್ಟು ಹೋಗುತ್ತದೆ, ಕುಡಿಯಲು ನೀರು ಇಲ್ಲದಂತೆ ಮಾಡುತ್ತದೆ. ಅಂತಹ ಪ್ರಸಂಗ ಇದೆ. ಕೊರೊನಾ ಈ ವರ್ಷದಲ್ಲಿ ಬಿಡುಗಡೆಯಾಗತ್ತದೆ. ಭವಿಷ್ಯ ಜಗತ್ತಿನ ಇತಿಹಾಸದಲ್ಲೇ ಇಂತಹ ರೋಗ ಬಂದಿಲ್ಲ. ಜನ ಕಷ್ಟ ಬಂದಾಗ ಮಾತ್ರ ದೇವರು, ಮಠ ಮಂದಿರ ಎನ್ನುತ್ತಾರೆ. ಆದರೆ ಈ ಕೊರೊನಾ ಮೊದಲು ಬಂದಿದ್ದೇ ದೇವರ ಮೇಲೆ. ಮೊದಲು ಮಠ, ಮಾನ್ಯಗಳ ಮೇಲೆ ಬಂತು ಆ ಮೇಲೆ ಮನುಷ್ಯರ ಮೇಲೆ ಬಂತು. ಜನವರಿವರೆಗೂ ಕೊರೊನಾ ಹೆಚ್ಚು ಹರಡುವ ಕಾಲವಿದೆ. ಇದು ಮತ್ತೊಂದು ರೂಪವಾಗುವ ಲಕ್ಷಣವೂ ಇದೆ. ಬಹಳ ಕಷ್ಟ ಕೊಟ್ಟು ಹೋಗುತ್ತದೆ. ರಾಜಕೀಯ ಬದಲಾವಣೆ ಬಗ್ಗೆ ಏನೂ ಹೇಳಲು ಹೋಗೋದಿಲ್ಲ ಎಂದು ನಸುನಕ್ಕರು. ಎಲ್ಲರಿಗೂ ಒಳ್ಳೆಯದಾಗಲಿ ಸರ್ಕಾರ ಚೆನ್ನಾಗಿ ನಡೆಯುತ್ತಿದೆ. ಅದಕ್ಕೇಕೆ ನಾನು ಅಪಶಕುನ ನುಡಿಯಬೇಕು? ಅದನ್ನು ಯುಗಾದಿ ಫಲದ ಮೇಲೆ ಹೇಳುತ್ತೇನೆ. ಶುಭನಾಮ ಸಂವತ್ಸರ ಅಶುಭವನ್ನು ಕೊಟ್ಟು ಹೋಗುತ್ತದೆ. ಇದು ಶುಭ ಆಗೋದಿಲ್ಲ. ಅಶುಭವಾಗುತ್ತದೆ ಎಂದರು. 


ಇನ್ನು ಮುಂದುವರೆದು ಮಾತನಾಡಿದ ಅವರು, ಮನುಷ್ಯನಿಗೆ ಪ್ರಕೃತಿ, ಮಳೆಯಿಂದ ಸಮಸ್ಯೆಗಳಾಗುತ್ತವೆ. ಗುಡ್ಡಗಳು ಕುಸಿತ. ಭೂಕಂಪ ಹೆಚ್ಚಾಗೋ ಲಕ್ಷಣ ಇದೆ. ಪ್ರಾಣಿಗಳು, ವಿಷಜಂತುಗಳಿಂದ ಮನುಷ್ಯನಿಗೆ ನೋವಾಗುತ್ತದೆ. ಹೊರಗಡೆ ಹೋಗುವಾಗ ಕೈಯಲ್ಲಿ ಬಡಿಗೆ ಹಿಡಿದುಕೊಂಡು ಹೋಗುವುದು ಒಳ್ಳೆಯದು. ಅದು ಸಂರಕ್ಷಣೆಯಾಗುತ್ತದೆ. ಆಶ್ವಿಜ ಕೊನೆಯಿಂದ ಯುಗಾದಿ ಕೊನೆಯವರೆಗೂ ಅಗಾಂಗ ಕಾಯಿಲೆಗಳು ಹೆಚ್ಚಾಗುತ್ತವೆ. ಪಾರ್ಶ್ವವಾಯು, ಹೃದಯಾಘಾತ ಈ ಕಾಯಿಲೆ ಹೆಚ್ಚಾಗಿ ಜನ ಸಾಯುತ್ತಾರೆ. ಮೂರು ತಿಂಗಳಲ್ಲಿ ಈ ಕಾಯಿಲೆ ಹೆಚ್ಚಾಗಲಿದೆ ಎಂದು ಹೇಳಿದ್ದಾರೆ.


ಇದನ್ನೂ ಓದಿ : ಆಟೋ ಪ್ರಯಾಣಿಕರಿಗೆ ಸಿಹಿ ಸುದ್ದಿ : ಚಾಲಕರ ಸುಲಿಗೆಗೆ ನಮ್ಮ ಮೆಟ್ರೋ ನಿಗಮದಿಂದ ಬ್ರೇಕ್, BMRCL ಮಹತ್ವದ ನಿರ್ಧಾರ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.