ಕೋಡಿಮಠ ಸ್ವಾಮೀಜಿ ಸ್ಫೋಟಕ ಭವಿಷ್ಯ! 'ಸಿದ್ದು' ಖುರ್ಚಿ... ರಾಷ್ಟ್ರ ರಾಜಕಾರಣದಲ್ಲಿ ಸುನಾಮಿ..!

KodiMatha Shri: ಸದ್ಯದಲ್ಲಿಯೇ ರಾಷ್ಟ್ರರಾಜಕಾರಣದಲ್ಲಿ ಸುನಾಮಿ ಆಗಲಿದೆ ಎಂದು ಕೋಡಿಮಠ ಸ್ವಾಮೀಜಿಯ ಸ್ಫೋಟಕ ಭವಿಷ್ಯ ನುಡಿದಿದ್ದಾರೆ. 

Written by - Yashaswini V | Last Updated : Mar 3, 2025, 03:27 PM IST
  • ರಾಷ್ಟ್ರ ರಾಜ್ಯಕಾರಣದಲ್ಲಿ ಸುನಾಮಿ ಆಗುತ್ತದೆ
  • ರಾಷ್ಟ್ರ ರಾಜಕಾರಣದಲ್ಲಿ ರಾಜಕೀಯ ಸುನಾಮಿ ಆಗುವ ಲಕ್ಷಣಗಳು ಬಹಳ ಇವೆ
  • ಯುಗಾದಿ ನಂತರ ಸುಳಿವು ಸಿಗಲಿದೆ ಎಂದ ಶ್ರೀ
ಕೋಡಿಮಠ ಸ್ವಾಮೀಜಿ ಸ್ಫೋಟಕ ಭವಿಷ್ಯ! 'ಸಿದ್ದು' ಖುರ್ಚಿ...  ರಾಷ್ಟ್ರ ರಾಜಕಾರಣದಲ್ಲಿ ಸುನಾಮಿ..!

KodiMatha Shri Prediction: ರಾಷ್ಟ್ರ ರಾಜಕಾರಣದಲ್ಲಿ ಶೀಘ್ರದಲ್ಲೇ ಸುನಾಮಿ ಏಳುವ ಲಕ್ಷಣಗಳು ದಟ್ಟವಾಗಿವೆ. ಯುಗಾದಿ ಹಬ್ಬದ ಬಳಿಕ ಈ ಕುರಿತಂತೆ ಸುಳಿವು ಸಿಗಲಿದೆ ಎಂದು ಗದಗನಲ್ಲಿ ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಸ್ಪೋಟಕ ಭವಿಷ್ಯ  ನುಡಿದಿದ್ದಾರೆ. 

Add Zee News as a Preferred Source

ಇದೇ ಸಂದರ್ಭದಲ್ಲಿ ರಾಜ್ಯ ರಾಜಕಾರಣದ ಬಗ್ಗೆಯೂ ಮಾತನಾಡಿರುವ ಕೋಡಿಮಠದ ಸ್ವಾಮೀಜಿ, ವಿಜಯನಗರ ಸಾಮ್ರಾಜ್ಯವನ್ನು ಕಟ್ಟಿದವರು ಹಕ್ಕಬುಕ್ಕರು. ಇವತ್ತು ಕೂಡಾ ವಿಜಯನಗರ ಸಾಮ್ರಾಜ್ಯದ ಹೆಸರು ಪ್ರಖ್ಯಾತ ಪಡೆದಿದೆ. ಹಕ್ಕಬುಕ್ಕರು ಹಾಲುಮತದ ಸಮಾಜದವರು. ಆ ಸಮಾಜಕ್ಕೆ ಅಧಿಕಾರ ಬಂದರೆ ಸುಲಭವಾಗಿ ಕಿತ್ತುಕೊಳ್ಳಲು ಆಗೋದಿಲ್ಲ. ಸಮಾಜದ ಮೇಲೆ, ರಾಜ್ಯದ ಮೇಲೆ ಒಳ್ಳೆ ಕೆಲಸ ಮಾಡುವರಿಗೆ ಕೆಡುಕು ಆಗೋದು ಕಷ್ಟ ಎಂದಿದ್ದಾರೆ. 

ಸಿದ್ದರಾಮಯ್ಯ ಸರ್ಕಾರ ಸುಭದ್ರ..! 
ಹಾಲು ಮತದ ಸಮಾಜದವರೇ ಆದ ಸಿದ್ದರಾಮಯ್ಯ ಅವರು ಈಗ ಅಧಿಕಾರದಲ್ಲಿದ್ದಾರೆ. ಅವರಿಂದ ಅಧಿಕಾರ ಕಿತ್ತುಕೊಳ್ಳುವದು ಕಷ್ಟ. ಈ ಹಿಂದೆಯೂ ಸಿಎಂ ಸಿದ್ದರಾಮಯ್ಯ ಐದು ವರ್ಷ ಆಡಳಿತ ನಡೆಸುತ್ತಾರೆ ಎಂದು ನಾನು ಹೇಳಿದ್ದೆ. ಆಗಲೂ ಕೂಡ ಯಾರು ಅವರಿಂದ ಅಧಿಕಾರ ಕಿತ್ತುಕೊಳ್ಳಲು ಆಗಿಲ್ಲ. ಇವತ್ತಿನ ರಾಜಕೀಯ ಚಿಂತನೆ ಮಾಡುವುದಾದರೆ
ಈ‌ ಮುಖ್ಯಮಂತ್ರಿ ಅಧಿಕಾರ ಕಿತ್ತುಕೊಳ್ಳುವದು ಕಷ್ಟ ಎಂದು ಹೇಳುವ ಮೂಲಕ ಸಿಎಂ ಸಿದ್ಧರಾಮಯ್ಯ ಖುರ್ಚಿ ಭದ್ರ ಎಂದು ಕೋಡಿಮಠದ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. 

ಇದನ್ನೂ ಓದಿ- ಗೃಹಲಕ್ಷ್ಮೀ ಯೋಜನೆ ಕುರಿತಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕೊಟ್ರು ಬಿಗ್ ಅಪ್ಡೇಟ್

ಸಾಮಾಜಿಕ, ಧಾರ್ಮಿಕ ನಂಬಿಕೆಗಳ ಆಧಾರದ ಮೇಲೆ ಸಿದ್ಧರಾಮಯ್ಯ ಅವರ ಅಧಿಕಾರ ಕಿತ್ತುಕೊಳ್ಳುವುದು ಕಷ್ಟ ಎಂದು ಹೇಳಿರುವುದೇ ವಿನಃ ನಮಗೆ ಡಿಸಿಎಂ ಡಿ ಕೆ ಶಿವಕುಮಾರ್ ಅವರ ಬಗ್ಗೆಯೂ ಒಳ್ಳೆಯ ಅಭಿಪ್ರಾಯ ಇದೆ. ಅವರು ಕೂಡ ಮೊದಲಿನಿಂದ ಹೋರಾಟ ಮಾಡಿಕೊಂಡು ಬಂದಿದ್ದಾರೆ ಎಂದು ಸ್ವಾಮೀಜಿ ಹೇಳಿದ್ದಾರೆ. 

ನಮ್ಮಲ್ಲಿ ಸಂಕ್ರಾಂತಿ ಭವಿಷ್ಯ, ಯುಗಾದಿ ಭವಿಷ್ಯವನ್ನು ಹೇಳಲಾಗುತ್ತದೆ. ಚಂದ್ರನ ಚಲನೆಯ ಆಧಾರದ ಮೇಲೆ ಭವಿಷ್ಯ ನುಡಿಯಲಾಗುತ್ತದೆ.  ಬದಲಾವಣೆ ಕುರಿತು, ಯುಗಾದಿ ನಂತರ ಅದರ ಬಗ್ಗೆ ಹೇಳಬಹುದು ಎಂದರು. 

ಇದನ್ನೂ ಓದಿ- ಅಧಿಕಾರ ಹಂಚಿಕೆ ಭರವಸೆ ಈಡೇರಿಸಿ ಇಲ್ಲಾ ಅಂದ್ರೆ.. : ಹೈ ಕಮಾಂಡ್ ಗೆ ಡಿಕೆ ಡೆಡ್ ಲೈನ್   

ಹಾಲುಮತದವರು ಒಕ್ಕಲಿಗರಿಗೆ ಅಧಿಕಾರ ಬಿಟ್ಟುಕೊಡಬಹುದೇ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಕೋಡಿಮಠದ ಶ್ರೀ, ಒಕ್ಕಲಿಗರು ಅನ್ನದಾತರು, ಅವರನ್ನು ಇಡೀ ಜಗತ್ತೇ ಮರೆಯುವಂತಿಲ್ಲ.  ಇದಕ್ಕೆ ಜಾತಿ ಲೇಪನ ಹಚ್ಚುವದು ಬೇಡ ಎಂದು ಹೇಳಿದರು.  

ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

About the Author

Yashaswini V

ಯಶಸ್ವಿನಿ ವಿ (Yashaswini V) Zee ಕನ್ನಡ ಡಿಜಿಟಲ್ ಮಾಧ್ಯಮದ ಮೊದಲ ಪತ್ರಕರ್ತೆ. 2017 ರಿಂದ Zee ಕನ್ನಡ‌ ನ್ಯೂಸ್‌ ಡಿಜಿಟಲ್‌ ಮಾಧ್ಯಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಇವರು ಪ್ರಸ್ತುತ Zee ಕನ್ನಡ ನ್ಯೂಸ್‌ನಲ್ಲಿ ಸಹಾಯಕ ಸುದ್ದಿ ಸಂಪಾದಕಿಯಾಗಿ ಕೆಲಸ ಮಾಡುತ್ತಿದ್ದಾರೆ. ಪತ್ರಿಕೋದ್ಯಮದಲ್ಲಿ ಹತ್ತು ವರ್ಷಗಳಿಗೂ ಹೆಚ್ಚು ಅನುಭವ ಹೊಂದಿರುವ ಇವರು ದೆಹಲಿ ಮತ್ತು ಬೆಂಗಳೂರಿನಲ್ಲಿ ಕೆಲಸ ಮಾಡಿದ್ದಾರೆ. ತಮ್ಮ ಓದುಗರ ಆಸಕ್ತಿಗಳು ಮತ್ತು ಅಗತ್ಯಗಳನ್ನು ಗೌರವಿಸುತ್ತಾರೆ. ...Read More

Trending News