ಶಾಸಕ ಮಹೇಶ್ ವಿರುದ್ಧ ತಿರುಗಿಬಿದ್ದ ನಗರಸಭೆ ಸದಸ್ಯರು!!

ಶಾಸಕ ಮಹೇಶ್ ವಿರುದ್ಧ ತಿರುಗಿಬಿದ್ದ ನಗರಸಭೆ ಸದಸ್ಯರು, ನಗರಸಭೆ ಸದಸ್ಯರ ವಿರೋಧದ ನಡುವೆಯೂ ಉದ್ಘಾಟನೆಗೊಂಡ ಕೊಳ್ಳೇಗಾಲ ಹೈಟೆಕ್ ಬಸ್ ನಿಲ್ದಾಣ. 

Written by - Yashaswini V | Last Updated : Mar 20, 2023, 11:45 AM IST
  • ನಗರಸಭೆಯ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ, ಸಭೆ ಕರೆಯದೇ ಏಕಪಕ್ಷೀಯವಾಗಿ ಶಾಸಕ ಮಹೇಶ್ ನಿರ್ಧಾರ
  • ಇನ್ನೂ ಸಹ ಯುಜಿಡಿ, ಶೌಚಾಲಯ ವ್ಯವಸ್ಥೆಯೇ ಆಗಿಲ್ಲದ ಬಸ್ ನಿಲ್ದಾಣ ಉದ್ಘಾಟನೆ
  • ಶಾಸಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ನಗರಸಭೆ ಸದಸ್ಯರು
ಶಾಸಕ ಮಹೇಶ್ ವಿರುದ್ಧ ತಿರುಗಿಬಿದ್ದ ನಗರಸಭೆ ಸದಸ್ಯರು!! title=

ಚಾಮರಾಜನಗರ: ಕೊಳ್ಳೇಗಾಲ ತಾಲೂಕಿನ ಜನತೆಯ ಬಹು ವರ್ಷದ ಕನಸಾದ ಸುಸಜ್ಜಿತ ಬಸ್ ನಿಲ್ದಾಣದ ಉದ್ಘಾಟನೆ ವೇಳೆ ಬಿಜೆಪಿ ಕೆಲ ಸದಸ್ಯರು ಸೇರಿದಂತೆ ನಗರಸಭೆ ಸದಸ್ಯರು ಶಾಸಕ ಮಹೇಶ್ ವಿರುದ್ಧ ಪ್ರತಿಭಟಿಸಿದ ಘಟನೆ ನಡೆಯಿತು.

ಹೌದು, ಕೊಳ್ಳೇಗಾಲದಲ್ಲಿ ಕಳೆದ ಐದೂವರೆ ವರ್ಷಗಳಿಂದ ನಡೆಯುತ್ತಿದ್ದ ಹೈಟೆಕ್ ಬಸ್ ನಿಲ್ದಾಣವನ್ನು ಇಂದು ಜಿಲ್ಲಾ‌ ಉಸ್ತುವಾರಿ ಸಚಿವ ವಿ.ಸೋಮಣ್ಣ ಉದ್ಘಾಟನೆ ಮಾಡಿದ್ದು ಕಾಮಗಾರಿ ಅಪೂರ್ಣವಾಗಿದ್ದರೂ ಉದ್ಘಾಟನಾ ಭಾಗ್ಯ ಕರುಣಿಸಿದ್ದಾರೆ ಎಂಬುದು ನಗರಸಭೆ ಆಡಳಿತ ಪಕ್ಷ ಕಾಂಗ್ರೆಸ್ ಹಾಗೂ ಇನ್ನಿತರ ಸದಸ್ಯರ ಆರೋಪವಾಗಿದೆ.

ಇದನ್ನೂ ಓದಿ- ಕರ್ನಾಟಕದ ಇತಿಹಾಸದಲ್ಲಿ 25 ಸಿಎಂಗಳು ಬಂದರೂ ಸಹ, 5 ವರ್ಷ ಪೂರ್ಣಗೊಳಿಸಿದ್ದು ಮೂವರು ಮಾತ್ರ: ಯಾರವರು ಗೊತ್ತಾ?

ನಗರಸಭೆಯ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ, ಸಭೆ ಕರೆಯದೇ ಏಕಪಕ್ಷೀಯವಾಗಿ ಶಾಸಕ ಮಹೇಶ್ ನಿರ್ಧಾರ ತೆಗೆದುಕೊಂಡು ಅಪೂರ್ಣ ಕಾಮಗಾರಿಯನ್ನು ಉದ್ಘಾಟಿಸುತ್ತಿದ್ದಾರೆ. ಯುಜಿಡಿ, ಶೌಚಾಲಯ ವ್ಯವಸ್ಥೆ ಇನ್ನೂ ಆಗಿಲ್ಲ. ಮಹಿಳಾ ಪ್ರಯಾಣಿಕರು ಶೌಚಾಲಯಕ್ಕೆ ಎಲ್ಲಿಗೆ ತೆರಳಬೇಕು, ಕಾಮಗಾರಿ ಪೂರ್ಣಗೊಂಡ ಬಳಿಕ ನಗರಸಭೆಯಿಂದ ಮತ್ತೊಮ್ಮೆ ಉದ್ಘಾಟನೆ ಮಾಡುತ್ತೇವೆ ಎಂದು ಕೊಳ್ಳೇಗಾಲ ನಗರಸಭೆ ಅಧ್ಯಕ್ಷೆ ರೇಖಾ ಆಕ್ರೋಶ ಹೊರಹಾಕಿದರು.

ಇದನ್ನೂ ಓದಿ- ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ರೂ. ಅನುದಾನ; ಕಾಲಮಿತಿಯಲ್ಲಿ ಯೋಜನೆ ಪೂರ್ಣ: ಸಿಎಂ ಬೊಮ್ಮಾಯಿ

ಇನ್ನು, ಪ್ಲೆಕಾರ್ಡ್ ಹಿಡಿದು ಪ್ರತಿಭಟಿಸುತ್ತಿದ್ದವರನ್ನು ಸಮಾಧಾನ ಪಡಿಸಲು ಸಚಿವ ಸೋಮಣ್ಣ ಮುಂದಾದ ವೇಳೆ ಆರೋಪಗಳ ಸುರಿಮಳೆಗೈದ ಸದಸ್ಯರು, ನಿಮ್ಮಲ್ಲಿರುವ ಸೌಜನ್ಯವೂ ಅವರಿಗಿಲ್ಲ, ಬರೀ ದರ್ಪ, ದೌಲತ್, ದರ್ಬಾರ್ ನಡೆಸುತ್ತಾರೆ, ಅನುದಾನಕ್ಕೆ ನಗರಸಭೆ ಬೇಕು- ಉದ್ಘಾಟನೆಗೆ ನಗರಸಭೆ ಬೇಡವೇ..? ಎಂದು ಆಕ್ರೋಶ ಹೊರಹಾಕಿದರು. 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News