ಕೊಪ್ಪಳ ಭೀಕರ ರಸ್ತೆ ಅಪಘಾತ: ಮೃತರ ಕುಟುಂಬಗಳಿಗೆ 2 ಲಕ್ಷ ರೂ ಪರಿಹಾರ ಘೋಷಣೆ 

  ಜಿಲ್ಲೆಯ ಕುಷ್ಟಗಿ ತಾಲೂಕಿನ ಕಲಕೇರಿ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ಕುಟುಂಬಗಳಿಗೆ ಸರ್ಕಾರದಿಂದ ಎರಡು ಲಕ್ಷ ಪರಿಹಾರ ನೀಡುವುದಾಗಿ ಸಿಎಂ ಘೋಷಿಸಿದ್ದಾರೆ.

Written by - Zee Kannada News Desk | Last Updated : May 28, 2023, 10:56 PM IST
  • ಮೃತರ ಆತ್ಮಕ್ಕೆ ಶಾಂತಿ ಕೋರುತ್ತೇನೆ. ಮೃತ ದುರ್ದೈವಿಗಳ ಕುಟುಂಬಕ್ಕೆ ಸರ್ಕಾರದಿಂದ ತಲಾ ರೂ. 2 ಲಕ್ಷ ಪರಿಹಾರ ನೀಡಲಾಗುವುದು.
  • ಅತಿಯಾದ ವೇಗ, ಅಜಾಗರೂಕತೆಗಳೆ ಇಂಥ ಅಪಘಾತಗಳಿಗೆ ಕಾರಣ, ಎಚ್ಚರಿಕೆಯಿಂದ ವಾಹನ ಚಾಲನೆ ಮಾಡಿ, ಸುರಕ್ಷಿತವಾಗಿರಿ" ಎಂದು ಹೇಳಿದ್ದಾರೆ.
ಕೊಪ್ಪಳ ಭೀಕರ ರಸ್ತೆ ಅಪಘಾತ: ಮೃತರ ಕುಟುಂಬಗಳಿಗೆ 2 ಲಕ್ಷ ರೂ ಪರಿಹಾರ ಘೋಷಣೆ  title=

ಕೊಪ್ಪಳ:  ಜಿಲ್ಲೆಯ ಕುಷ್ಟಗಿ ತಾಲೂಕಿನ ಕಲಕೇರಿ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ಕುಟುಂಬಗಳಿಗೆ ಸರ್ಕಾರದಿಂದ ಎರಡು ಲಕ್ಷ ಪರಿಹಾರ ನೀಡುವುದಾಗಿ ಸಿಎಂ ಘೋಷಿಸಿದ್ದಾರೆ.

ಈಗ ಈ ಕುರಿತಾಗಿ ಟ್ವೀಟ್ ಮಾಡಿರುವ ಅವರು 'ಕೊಪ್ಪಳ ಜಿಲ್ಲೆಯ ಕುಷ್ಟಗಿ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಎಳೆಯ ಮಕ್ಕಳು ಸೇರಿದಂತೆ 6 ಮಂದಿ ಸಾವಿಗೀಡಾದ ಸುದ್ದಿ ತಿಳಿದು ಎದೆ ನಲುಗಿತು. ಮೃತರ ಆತ್ಮಕ್ಕೆ ಶಾಂತಿ ಕೋರುತ್ತೇನೆ. ಮೃತ ದುರ್ದೈವಿಗಳ ಕುಟುಂಬಕ್ಕೆ ಸರ್ಕಾರದಿಂದ ತಲಾ ರೂ. 2 ಲಕ್ಷ ಪರಿಹಾರ ನೀಡಲಾಗುವುದು.ಅತಿಯಾದ ವೇಗ, ಅಜಾಗರೂಕತೆಗಳೆ ಇಂಥ ಅಪಘಾತಗಳಿಗೆ ಕಾರಣ, ಎಚ್ಚರಿಕೆಯಿಂದ ವಾಹನ ಚಾಲನೆ ಮಾಡಿ, ಸುರಕ್ಷಿತವಾಗಿರಿ" ಎಂದು ಹೇಳಿದ್ದಾರೆ.

ಸಾವನ್ನಪ್ಪಿದವರನ್ನು ರಾಜಪ್ಪ ಬನಗೋಡಿ, ರಾಘವೇಂದ್ರ, ಅಕ್ಷಯ ಶಿವಶರಣ, ಜಯಶ್ರೀ, ರಾಖಿ, ರಶ್ಮೀಕಾ ಎಂದು ಗುರುತಿಸಲಾಗಿದೆ, ಅವರು ವಿಜಯಪುರಿಂದ ಬೆಂಗಳೂರಿಗೆ ಹೊರಟಿದ್ದರು ಎನ್ನಲಾಗಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

 

 

 

 

Trending News